News Karnataka Kannada
Thursday, May 02 2024
ಉಡುಪಿ

ಉದ್ಯಾವರ ಮಠದ ಕುದ್ರು ಪರಿಸರದಲ್ಲಿ ಮರಳುಗಾರಿಕೆ ನಡೆಯದಂತೆ ಕ್ರಮ: ನಗರದಲ್ಲಿ ಎಸ್ಪಿ ಹೇಳಿಕೆ

Steps will be taken to prevent sand mining in Kudru surroundings of Udyavara Mutt: SP in city
Photo Credit : News Kannada

ಉದ್ಯಾವರ: ಉದ್ಯಾವರ ಮಠದ ಕುದ್ರು ಪರಿಸರದಲ್ಲಿ ನಡೆಯುತ್ತಿದ್ದ ಅಕ್ರಮ ಮರಳುಗಾರಿಕೆ ವಿಚಾರಕ್ಕೆ ಸಂಬಂಧಿಸಿ ಜಿಲ್ಲಾಧಿಕಾರಿ ಜೊತೆ ಮಾತುಕತೆ ನಡೆಸಿ, ತಹಶೀಲ್ದಾರ್, ಪೊಲೀಸ್ ಅಧಿಕಾರಿಗಳು, ಗಣಿ ಇಲಾಖೆ ಅಧಿಕಾರಿಗಳನ್ನು ಸ್ಥಳಕ್ಕೆ ಕಳುಹಿಸಲಾಗಿತ್ತು. ಅವರು ಇಲ್ಲಿ ಯಾವುದೇ ಮರಳುಗಾರಿಕೆ ನಡೆಯದಂತೆ ಕ್ರಮ ತೆಗೆದುಕೊಂಡಿದ್ದಾರೆ ಎಂದು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಮಚ್ಚೀಂದ್ರ ಹಾಕೆ ತಿಳಿಸಿದ್ದಾರೆ.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಂದೆ ಇಂತಹ ಅಕ್ರಮ ಚಟುವಟಿಕೆ ಕಂಡು ಬಂದರೆ ಕೂಡಲೇ 112 ಕಂಟ್ರೋಲ್ ರೂಮಿಗೆ ಕರೆ ಮಾಡಬೇಕು ಎಂದರು.

ಅದಮಾರು ಸ್ವಾಮೀಜಿ ಕರೆಯಲಾದ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಅಕ್ರಮ ಮರಳುಗಾರಿಕೆ ಕುರಿತ ವಿಷಯ ಪ್ರಸ್ತಾಪ ಮಾಡಿದ್ದ ಭಾಸ್ಕರ ಕರ್ಕೇರ ಎಂಬವರ ಬೈಕಿಗೆ ಹಾನಿ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು