ಕಾರವಾರ: ಪ್ರವಾಸಕ್ಕೆ ಬಂದಿದ್ದ ನಾಲ್ವರು ವಿದ್ಯಾರ್ಥಿಗಳು ನೀರುಪಾಲಾಗಿ ಅದರಲ್ಲಿ ಇಬ್ಬರು ಶವವಾಗಿ ಪತ್ತೆಯಾಗಿರುವ ಘಟನೆ ಕುಮಟಾದ ಕಾಗಲ್ ಕಡಲತೀರದ ಬಳಿ ಇಂದು ನಡೆದಿದೆ.
ಬೆಂಗಳೂರು ಮೂಲದ ಅರ್ಜುನ್, ಚೈತ್ರಶ್ರೀ ಮೃತದೇಹ ಪತ್ತೆಯಾಗಿದ್ದು ತೇಜಸ್, ಕಿರಣ್ಕುಮಾರ್ ಎಂಬ ಇಬ್ಬರ ವಿದ್ಯಾರ್ಥಿಗಳು ಕಣ್ಮರೆಯಾಗಿದ್ದಾರೆ. ಈ ಇಬ್ಬರಿಗಾಗಿ ಇದೀಗ ಶೋಧಕಾರ್ಯ ಮುಂದುವರಿದಿದೆ.
ಬೆಂಗಳೂರಿನಿಂದ 87 ವಿದ್ಯಾರ್ಥಿಗಳು ಕುಮಟಾಗೆ ಪ್ರವಾಸಕ್ಕೆ ಬಂದಿದ್ದರು. ಕುಮಟಾದ ಸಿಲ್ವರ್ ಸ್ಯಾಂಡ್ ರೆಸಾರ್ಟ್ನಲ್ಲಿ ಉಳಿದುಕೊಂಡಿದ್ದ ಎಲ್ಲರು ಅಲೆಯನ್ನು ಲೆಕ್ಕಿಸದೆ ಸಮುದ್ರದಲ್ಲಿ ಈಜಾಡಲು ಮುಂದಾದಗ ಅಲೆಗೆ ಸಿಲುಕಿದ್ದ ನಾಲ್ವರು ಕೊಚ್ಚಿ ಹೋಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಈಗಾಗಲೇ ಸ್ಥಳಕ್ಕೆ ತೆರಲಿರುವ ಕುಮಟಾ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಇನ್ನಿಬ್ಬರು ವಿದ್ಯಾರ್ಥಿಗಳಿಗಾಗಿ ಶೋಧಕಾರ್ಯ ಮುಂದುವರಿಸಿದ್ದಾರೆ.