News Karnataka Kannada
Friday, May 03 2024
ಉಡುಪಿ

ಮರಳು ಸಮಸ್ಯೆ ಪರಿಹರಿಸದಿದ್ದರೆ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ: ಸುರೇಶ್ ನಾಯಕ್ ಎಚ್ಚರಿಕೆ

Suresh Nayak warns of siege to DC's office if sand problem is not resolved
Photo Credit : News Kannada

ಉಡುಪಿ: ಮರಳು ಸಹಿತ ಉಡುಪಿ ಜಿಲ್ಲೆಯ ಜ್ವಲಂತ ಸಮಸ್ಯೆಗಳನ್ನು ಮುಂದಿನ 10 ದಿನಗಳೊಳಗೆ ಪರಿಹರಿಸದೇ ಇದ್ದಲ್ಲಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲಾಗುವುದು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಎಚ್ಚರಿಕೆ ನೀಡಿದ್ದಾರೆ.

ರಾಜ್ಯ ಸರಕಾರ ಅಸ್ತಿತ್ವಕ್ಕೆ ಬಂದು ಆರು ತಿಂಗಳು ಕಳೆದರೂ ಜಿಲ್ಲೆಯಲ್ಲಿ ಯಾವುದೇ ಅಭಿವೃದ್ಧಿ ಕೆಲಸ ಕಾರ್ಯಗಳು ನಡೆಯುತ್ತಿಲ್ಲ, ಜನತೆಗೆ ಮರಳು ಸಿಗುತ್ತಿಲ್ಲ, ಭೂ ಪರಿವರ್ತನೆ ಸಹಿತ ನಗರಾಭಿವೃದ್ಧಿ ಪ್ರಾಧಿಕಾರದಿಂದ ಸಿಂಗಲ್ ಲೇಔಟ್ ಪ್ರಕ್ರಿಯೆಗಳು ಸಮರ್ಪಕವಾಗಿ ನಡೆಯುತ್ತಿಲ್ಲ, ಹೊಸ ರೇಷನ್ ಕಾರ್ಡ್ ವಿತರಣೆ ಸ್ಥಗಿತಗೊಂಡಿದ್ದು ಪರಿಷ್ಕರಣೆಗೂ ಅವಕಾಶ ನೀಡುತ್ತಿಲ್ಲ. ಯಾವುದೇ ಇಲಾಖೆಗಳಲ್ಲಿ ಸಾರ್ವಜನಿಕರಿಗೆ ಸ್ಪಂದನೆ ದೊರಕುತ್ತಿಲ್ಲ. ಹೊಸ ಸರಕಾರದ ಮೇಲೆ ಬಹಳಷ್ಟು ನಿರೀಕ್ಷೆ ಇಟ್ಟುಕೊಂಡಿದ್ದ ಜನತೆ ಭ್ರಮನಿರಸಗೊಂಡಿದ್ದಾರೆ.

ಕಾಂಗ್ರೆಸ್ ಶಾಸಕರೇ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಸಿಗುತ್ತಿಲ್ಲ ಎಂದು ಸದನದಲ್ಲಿ ಹಾಗೂ ಸಾರ್ವಜನಿಕವಾಗಿ ಅಸಮಾಧಾನ ವ್ಯಕ್ತಪಡಿಸಿ ಗುಲ್ಲೆಬ್ಬಿಸಿದ್ದಾರೆ. ಆದುದರಿಂದ ರಾಜ್ಯ ಸರಕಾರ ಅಭಿವೃದ್ಧಿ ಶೂನ್ಯ ಸರಕಾರವಾಗಿದೆ.

ಉಡುಪಿ ಜಿಲ್ಲಾಡಳಿತ ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಯ ಜನತೆಯ ಜ್ವಲಂತ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಬೇಕು, ಜಿಲ್ಲೆಯ ಜನತೆಗೆ ಸಮರ್ಪಕ ಮರಳು ನೀಡಬೇಕು, ರೇಷನ್ ಕಾರ್ಡ್ ಪರಿಷ್ಕರಣೆ ಸಹಿತ ಇಲಾಖೆಗಳ ಕೆಲಸ ಕಾರ್ಯಗಳಿಗೆ ವೇಗ ನೀಡಬೇಕು. ಈ ಎಲ್ಲ ಸಮಸ್ಯೆಗಳನ್ನು ಮುಂದಿನ 10 ದಿನಗಳೊಳಗೆ ಪರಿಹರಿಸದೇ ಇದ್ದಲ್ಲಿ ಜಿಲ್ಲೆಯ ಜನತೆಯ ಜೊತೆಗೆ ಜಿಲ್ಲಾಧಿಕಾರಿಗಳ ಕಛೇರಿಗೆ ಮುತ್ತಿಗೆ ಹಾಕುವ ಮೂಲಕ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು