News Karnataka Kannada
Friday, May 10 2024
ಉಡುಪಿ

ಕುಡಿಯುವ ನೀರು ಸಮರ್ಪಕ ಪೂರೈಕೆಗೆ ಕ್ರಮ ಕೈಗೊಳ್ಳಿ: ಶಾಸಕ ಯಶ್ ಪಾಲ್ ಸುವರ್ಣ ಸೂಚನೆ

ಉಡುಪಿ ನಗರಸಭೆಯ ವ್ಯಾಪ್ತಿಯಲ್ಲಿ ಮುಂದಿನ ಮಳೆಗಾಲ ಪ್ರಾರಂಭವಾಗುವವರೆಗೆ ಸಮರ್ಪಕ ರೀತಿಯಲ್ಲಿ ನೀರು ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ನಗರಸಭೆ ಅಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಸೂಚನೆ ನೀಡಿದರು.
Photo Credit : News Kannada

ಉಡುಪಿ: ಉಡುಪಿ ನಗರಸಭೆಯ ವ್ಯಾಪ್ತಿಯಲ್ಲಿ ಮುಂದಿನ ಮಳೆಗಾಲ ಪ್ರಾರಂಭವಾಗುವವರೆಗೆ ಸಮರ್ಪಕ ರೀತಿಯಲ್ಲಿ ನೀರು ಪೂರೈಕೆಗೆ ಕ್ರಮ ಕೈಗೊಳ್ಳುವಂತೆ ನಗರಸಭೆ ಅಧಿಕಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಸೂಚನೆ ನೀಡಿದರು.

ಉಡುಪಿ ನಗರ ಸಭೆಗೆ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈಗಾಗಲೇ ತಿಳಿಸಿರುವಂತೆ ನೀರು ಪೂರೈಕೆ ರೇಶನಿಂಗ್ ಮೂಲಕ 3 ದಿನಗಳಿಗೊಮ್ಮೆ ನೀರು ಸರಬರಾಜು ಮಾಡಲು ಕ್ರಮ ಕೈಗೊಳ್ಳುವಂತೆ ಹಾಗೂ ಪ್ರತಿ ವಾರ್ಡಿನ ಬೇಡಿಕೆಯಂತೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.

ನೀರು ಪೂರೈಕೆಯ ಬಗ್ಗೆ ವಾರ್ಡಿನ ನಗರ ಸಭಾ ಸದಸ್ಯರಿಗೆ ಮಾಹಿತಿ ನೀಡಿ ಹಾಗೂ ಸಾರ್ವಜನಿಕರಿಗೆ ಅನುಕೂಲವಾಗುವ ಸಮಯದಲ್ಲಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತೆ ಹೇಳಿದರು.

ಮುಂದಿನ ವಾರ ಮಳೆಗಾಲ ಪೂರ್ವ ಸಿದ್ಧತೆಯಾಗಿ ಚರಂಡಿ ಹೂಳೆತ್ತುವುದು, ಟಾಸ್ಕ್ ಫೋರ್ಸ್ ಹಾಗೂ ಇತರ ತುರ್ತು ಕೆಲಸಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಭೆ ನಡೆಸುವುದಾಗಿ ಹೇಳಿದರು.

ಸಭೆಯಲ್ಲಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ, ಪೌರಾಯುಕ್ತ ರಮೇಶ್ ನಾಯ್ಕ್, ನಗರ ಸಭಾ ಸದಸ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು