News Karnataka Kannada
Saturday, April 13 2024
Cricket
ಉಡುಪಿ

ದೇವಸ್ಥಾನದ ಆಭರಣ ಕಳವು: ಆರೋಪಿಗಳಿಗೆ ಜೈಲು ಶಿಕ್ಷೆ

Temple jewellery theft: Accused sentenced to jail
Photo Credit : News Kannada

ಉಡುಪಿ: ದೇವಸ್ಥಾನದ ಗರ್ಭಗುಡಿಯ ಬಾಗಿಲಿನ ಬೀಗ ಮುರಿದು ಒಳ ಪ್ರವೇಶಿಸಿ, ದೇವರಿಗೆ ಸಂಬಂಧಪಟ್ಟ ಚಿನ್ನದ ಒಡವೆಗಳನ್ನು ಕಳವು ಮಾಡಿದ ಆರೋಪಿಗಳಿಗೆ ನಗರದ ಪ್ರಧಾನ ಸಿ. ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.

2015 ಸೆಪ್ಟಂಬರ್ 21 ರಂದು ನರಸಿಂಹರಾಜು  ಬಸವರಾಜು,  ರಾಜು ಮತ್ತು ಮೊಹಮ್ಮದ್ ಶಬ್ಬೀರ್  ಎಂಬುವವರು ಉಡುಪಿ ತಾಲೂಕು ಶಿರೂರು ಗ್ರಾಮದ ಶ್ರೀ ಮಹಾಲಸಾ ನಾರಾಯಣೀ ದೇವಿ ದೇವಸ್ಥಾನದ ಗರ್ಭಗುಡಿಯ ಬಾಗಿಲಿನ ಬೀಗ ಮುರಿದು, ಒಳ ಪ್ರವೇಶಿಸಿ, ದೇವರಿಗೆ ಸಂಬಂಧಿಸಿದ ಒಟ್ಟು 8,66,800 ರೂ. ಮೌಲ್ಯದ 339.940 ಗ್ರಾಂ ತೂಕದ ಚಿನ್ನದ ಒಡವೆಗಳನ್ನು ಕಳವು ಮಾಡಿರುವ ಹಿನ್ನೆಲೆ, ಉಡುಪಿ ನಗರ ಠಾಣೆಯ ಪೊಲೀಸ್ ಉಪನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು, ಆರೋಪಿಗಳ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.

ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆ, ನಗರದ ಪ್ರಧಾನ ಸಿ.ಜೆ ಮತ್ತು ಜೆ.ಎಂ.ಎಫ್.ಸಿ ನ್ಯಾಯಾಲಯದ ನ್ಯಾಯಾಧೀಶೆ ದೀಪಾ ಅವರು ಆರೋಪಿಗಳಿಗೆ ತಲಾ 2 ವರ್ಷ 6 ತಿಂಗಳು ಜೈಲು ಶಿಕ್ಷೆ ಹಾಗೂ ತಲಾ 5,500 ರೂ. ದಂಡ ವಿಧಿಸಿ, ತೀರ್ಪು ನೀಡಿರುತ್ತಾರೆ. ಸರ್ಕಾರದ ಪರವಾಗಿ ಹಿರಿಯ ಸಹಾಯಕ ಸರ್ಕಾರಿ ಅಭಿಯೋಜಕಿ ಜಯಂತಿ ಕೆ ವಾದ ಮಂಡಿಸಿರುತ್ತಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು