Categories: ಉಡುಪಿ

ಡಿವೈಡರ್ ಗೆ ಡಿಕ್ಕಿ ಹೊಡೆದ ಇನ್ನೋವಾ ಕಾರು; ಓರ್ವ ಮೃತ್ಯು, ಇಬ್ಬರು ಗಂಭೀರ

ಉಡುಪಿ: ಚಾಲಕ ನಿಯಂತ್ರಣ ತಪ್ಪಿದ ಕಾರೊಂದು ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಕುಂದಾಪುರದ ಕೆಎಸ್‌ಆರ್‌ಟಿಸಿ ಡಿಪೋ ಎದುರುಗಡೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ.

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದು ಕೇರಳ ರಾಜ್ಯದ ಪಾಂಡಿಚೇರಿ ಮಾಹಿತಿ ಎಂಬಲ್ಲಿಗೆ ಹಿಂತಿರುಗುತ್ತಿದ್ದ ಮೂವರು ಭಕ್ತರು ಪ್ರಯಾಣಿಸುತ್ತಿದ್ದ ಟೊಯೋಟಾ ಇನ್ನೋವಾ ಕಾರು ಅಪಘಾತಕ್ಕೀಡಾಗಿದೆ.

ಕುಂದಾಪುರ-ಉಡುಪಿ ನಡುವಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕುಂದಾಪುರ ಸಮೀಪದ ಕೆಎಸ್‌ಆರ್‌ಟಿಸಿ ಡಿಪೋ ಎದುರಿಗೆ ಫೈ ಓವ‌ರ್ ಮೇಲೆ ಚಲಿಸುತ್ತಿದ್ದ ಕಾರು ಏಕಾಏಕಿ ಸರ್ವಿಸ್ ರಸ್ತೆ ಮತ್ತು ಹೆದ್ದಾರಿ ನಡುವಿನ ಡಿವೈಡರ್‌ಗೆ ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಡಿಕ್ಕಿ ಹೊಡೆದ ಫಾರ್ಚುನ‌ರ್ ಇನ್ನೋವಾ ಕಾರು ಕಬ್ಬಿಣದ ಗ್ರಿಲ್‌ಗಳನ್ನು ಮುರಿದು ಸರ್ವಿಸ್ ರಸ್ತೆ ಮೇಲೆ ತಲೆಕೆಳಗಾಗಿ ಬಿದ್ದಿದೆ. ಇನ್ನೋವಾ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಗಂಭೀರ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಅಪಘಾತದ ಸಂದರ್ಭ ಸರ್ವಿಸ್ ರಸ್ತೆಯಲ್ಲಿ ಯಾವುದೇ ವಾಹನ ಸಂಚಾರ ಇಲ್ಲದ ಕಾರಣ ಹೆಚ್ಚಿನ ಅನಾಹುತ ತಪ್ಪಿದೆ.

Chaitra Kulal

Recent Posts

ಭಾರೀ ಗಾಳಿ ಮಳೆ: ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

ಸಂಜೆ ಸುರಿದ ಜೋರಾದ ಮಳೆಗೆ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ರಾಷ್ಟ್ರೀಯ ಹೆದ್ದಾರಿಯ ಕಲ್ಲಡ್ಕ ಸಮೀಪದ ಕುದ್ರೆಬೆಟ್ಟು ಎಂಬಲ್ಲಿ ಪಲ್ಟಿಯಾದ…

3 mins ago

ದ.ಕ ಬರ ಪರಿಸ್ಥಿತಿ ಹಿನ್ನಲೆ ನೀರು ಪೂರೈಕೆಗೆ ಜಿಲ್ಲಾಡಳಿತ ಮುಂಜಾಗೃತ ಕ್ರಮ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬರ ಪರಿಸ್ಥಿತಿ ಹಿನ್ನಲೆಯಲ್ಲಿ ಸಾರ್ವಜನಿಕರಿಗರ ಕುಡಿಯುವ ನೀರನ್ನು ಪೂರೈಸಲು ಜಿಲ್ಲಾಡಳಿತದಿಂದ ಈಗಾಗಲೇ ಸಾಕಷ್ಟು ಕ್ರಮ ಕೈಗೊಳ್ಳಲಾಗುತ್ತಿದೆ.…

9 mins ago

ಕಲ್ಲಡ್ಕದಲ್ಲಿ ಪ್ರಥಮ ಮಳೆಗೆ ಹದಗೆಟ್ಟ ರಾಷ್ಟ್ರೀಯ ಹೆದ್ದಾರಿ : ಸಂಚಾರ ಅಸ್ತವ್ಯಸ್ತ

ನಿನ್ನೆ ಸುರಿದ ಪ್ರಥಮ ಮಳೆಗೆ ಕಲ್ಲಡ್ಕದಲ್ಲಿ ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಹದಗೆಟ್ಟಿದ್ದು ವಾಹನ ಸಂಚಾರಕ್ಕೆ ತೊಡುಕುಂಟಾಗಿದೆ.

15 mins ago

ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣ: ಭಾರತೀಯ ಮೂಲದ ವ್ಯಕ್ತಿ ಬಂಧನ

ಕೆನಡಾದಲ್ಲಿ ಬಹುಕೋಟಿ ಡಾಲರ್‌ ಮೌಲ್ಯದ ಚಿನ್ನ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ಮೂಲದ ವ್ಯಕ್ತಿಯನ್ನು ಟೊರೊಂಟೋ ವಿಮಾನ ನಿಲ್ದಾಣದಲ್ಲಿ ಅರೆಸ್ಟ್‌…

28 mins ago

ಸಿಬಿಎಸ್‌ಇ 12ನೇ ತರಗತಿ ಫಲಿತಾಂಶ ಪ್ರಕಟ : ಆನ್‌ಲೈನ್‌ನಲ್ಲಿ ಹೀಗೆ ನೋಡಿ

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) 12ನೇ ತರಗತಿ ಫಲಿತಾಂಶ ಇಂದು ಪ್ರಕಟವಾಗಿದೆ. ಈ ವರ್ಷದ ತೇರ್ಗಡೆ ಪ್ರಮಾಣ…

37 mins ago

ಪತ್ರಿಕಾ ವಿತರಕ ರೈಲಿಗೆ ಸಿಲುಕಿ ಆತ್ಮಹತ್ಯೆ

ರೈಲಿಗೆ ಸಿಲುಕಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಂಜನಗೂಡು ತಾಲೂಕಿನ ಬಸವನಪುರ ಗ್ರಾಮದ ಬಳಿ ನಡೆದಿದೆ.

51 mins ago