News Karnataka Kannada
Sunday, May 12 2024
ಉಡುಪಿ

ತೆಕ್ಕಟ್ಟೆ: ಇನ್ನೋವಾ ಕಾರು ಮರಕ್ಕೆ ಡಿಕ್ಕಿ; ಯುವತಿ ಸ್ಥಳದಲ್ಲೇ ಮೃತ್ಯು, ನಾಲ್ವರು ಗಂಭೀರ

ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ತೆಕ್ಕಟ್ಟೆ ಸಮೀಪದ ಗುಡ್ಡೆಅಂಗಡಿ ರಾ.ಹೆ.66ರಲ್ಲಿ ಕೊಯ್ಕಾಡಿ ತಿರುವಿನಲ್ಲಿ ಸಂಭವಿಸಿದೆ.
Photo Credit : NewsKarnataka

ಉಡುಪಿ: ಇನ್ನೋವಾ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾಗಿ ಹೊಂಡಕ್ಕೆ ಬಿದ್ದ ಪರಿಣಾಮ ಯುವತಿಯೋರ್ವಳು ಸ್ಥಳದಲ್ಲಿಯೇ ಮೃತಪಟ್ಟು, ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ತೆಕ್ಕಟ್ಟೆ ಸಮೀಪದ ಗುಡ್ಡೆ ಅಂಗಡಿ ರಾ.ಹೆ.66ರಲ್ಲಿ ಕೊಯ್ಕಾಡಿ ತಿರುವಿನಲ್ಲಿ ಸಂಭವಿಸಿದೆ.

ಮೃತರನ್ನು ಬೆಂಗಳೂರಿನ ಫೋನ್‌ ಪೇ ಖಾಸಗಿ ಕಂಪೆನಿಯ ಉದ್ಯೋಗಿ ಕೀರ್ತಿ (25) ಎಂದು‌ ಗುರುತಿಸಲಾಗಿದೆ. ಇವರ ಸ್ನೇಹಿತರಾದ ವಿಘ್ನೇಶ್‌ (28), ಚೇತನ್‌ (28), ಐಶ್ವರ್ಯಾ (27), ಲತಾ (26) ಅವರಿಗೆ ಗಂಭೀರವಾದ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಬೆಂಗಳೂರಿನಿಂದ ಗೋಕರ್ಣದ ಕಡೆಗೆ ಆರು ಮಂದಿ ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಡಿಕ್ಕಿಯಾದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ. ಅಪಘಾತದ ತೀವ್ರತೆಗೆ ಕಾರಿನ ಒಂದು ಪಾರ್ಶ್ವ ಸಂಪೂರ್ಣ ಜಖಂಗೊಂಡಿತ್ತು. ಕಾರಿನ ಒಳಗೆ ಸಿಲುಕಿಕೊಂಡಿದ್ದ ಗಾಯಾಳುಗಳನ್ನು ಹೊರತೆಗೆಯಲು ಸ್ಥಳೀಯರು ಹರಸಾಹಸಪಟ್ಟರು.

ಬ್ರಹ್ಮಾವರ ವೃತ್ತ ನಿರೀಕ್ಷಕ ದಿವಾಕರ್‌ ಹಾಗೂ ಕೋಟ ಪೊಲೀಸ್‌ ಠಾಣಾಧಿಕಾರಿ ತೇಜಸ್ವಿ, ಸಿಬಂದಿ ಪ್ರಸನ್ನ, ಕೃಷ್ಣ ಅವರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೋಟ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ನೇಹಿತರು ಖಾಸಗಿ ಕಂಪೆನಿಯ ಉದ್ಯೋಗಿಗಳಾಗಿದ್ದು, ಎಲ್ಲರೂ ಒಂದಾಗಿ ಮುರ್ಡೇಶ್ವರ, ಗೋಕರ್ಣದ ಕಡೆಗೆ ವೀಕೆಂಡ್‌ ರಜೆಯಲ್ಲಿ ಪ್ರವಾಸಕ್ಕೆ ತೆರಳುತ್ತಿದ್ದರು ಎಂಬ ಮಾಹಿತಿ ತಿಳಿದು ಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು