News Karnataka Kannada
Thursday, April 18 2024
Cricket
ಉಡುಪಿ

ದೇಶವನ್ನು ಅರವತ್ತು ವರ್ಷ ಲೂಟಿಗೈದವರು ಒಂದಾಗಿದ್ದಾರೆ: ಶೋಭಾ ಕರಂದ್ಲಾಜೆ 

Those who looted the country for 60 years are one: Shobha Karandlaje 
Photo Credit : Twitter

ಉಡುಪಿ: ದೇಶವನ್ನು ಅರವತ್ತು ವರ್ಷ ಲೂಟಿ ಮಾಡಿದವರು ಒಂದಾಗಿದ್ದಾರೆ. ಬಂದವರು ಎಲ್ಲರೂ ಪ್ರಧಾನಿ ಅಭ್ಯರ್ಥಿಗಳೇ. ಕಳೆದ ಬಾರಿಯಂತೆ ಈ ಬಾರಿ ಮತ್ತೆ ಬಿರುಸಿನ ಪ್ರಚಾರ ಶುರು ಮಾಡಿದ್ದಾರೆ. ತಮ್ಮ ಒಕ್ಕೂಟಕ್ಕೆ ಇಂಡಿಯಾ ಎಂಬ ಹೆಸರು ಇಟ್ಟುಕೊಂಡಿದ್ದಾರೆ. ಬ್ರಿಟಿಷ್ ಲೂಟಿಕೋರರು ಉಪಯೋಗ ಮಾಡಿದ ಹೆಸರು ಇಟ್ಟಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಲೇವಡಿ ಮಾಡಿದರು.

ವಿಪಕ್ಷಗಳ ಮೈತ್ರಿ ಕೂಟದ ಬಗ್ಗೆ ಉಡುಪಿಯಲ್ಲಿಂದು ಪ್ರತಿಕ್ರಿಯಿಸಿದ ಅವರು, ಬ್ರಿಟಿಷರು ಈಸ್ಟ್ ಇಂಡಿಯಾ ಕಂಪನಿ ಮಾಡಿದ್ದರು ಈಗ ಹೊಸ ಈಸ್ಟ್ ಇಂಡಿಯಾ ಕಂಪನಿ ಶುರುವಾಗಿದೆ. ಇದು ಭಾರತ ವರ್ಸಸ್ ಈಸ್ಟ್ ಇಂಡಿಯಾ ಕಂಪನಿ. ಭಾರತದ ಸಾರ್ವಭೌಮತೆಯನ್ನು ಇಡೀ ಪ್ರಪಂಚಕ್ಕೆ ಪಸರಿಸುತ್ತಿರುವ ಪ್ರಧಾನಿ ಮೋದಿ ವಿರುದ್ಧ ಒಟ್ಟಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಸಂವಿಧಾನ ವಿರೋಧಿ ಹೆಸರು ಇಟ್ಟುಕೊಂಡಿದ್ದಾರೆ. ಆರ್ಟಿಕಲ್ 1 ಪ್ರಕಾರ ಇಂಡಿಯಾ ಎನ್ನುವ ಹೆಸರನ್ನು ಯಾವುದೇ ಪಾರ್ಟಿ ಸಂಘಟನೆ ಸಂಸ್ಥೆಗೆ ಇಡುವಂತಿಲ್ಲ. 60 ವರ್ಷ ದೇಶ ಆಳಿದವರು ಬೇರೆ ಯಾವುದೇ ಹೆಸರಿಟ್ಟರೆ ಜನ ಬೆಲೆ ಕೊಡುವುದಿಲ್ಲ. ಈ ಕಾರಣಕ್ಕೆ ಇಂಡಿಯಾ ಎಂಬ ಹೆಸರಿಟ್ಟಿದ್ದಾರೆ. ಇದು ಎನ್ ಡಿ ಎ ವರ್ಸಸ್ ಇಂಡಿಯಾ ಅಲ್ಲ, ಇದು ಭಾರತ ವರ್ಸಸ್ ಇಂಡಿಯಾ. ಭಾರತದಲ್ಲಿ ಈಗ ಹೊಸ ಕಂಪನಿ ಆರಂಭವಾಗಿದೆ‌. ವೆಸ್ಟ್ ಇಂಡಿಯಾ ಕಂಪನಿಯನ್ನು ದೇಶವಾಸಿಗಳು ಓಡಿಸಿದ್ದರು. 2024ರಲ್ಲಿ ಮತ್ತೊಮ್ಮೆ ದೇಶದ ಗರಿಮೆಯನ್ನು ಎತ್ತಿ ಹಿಡಿಯುತ್ತಾರೆ. ಈ ಈಸ್ಟ್ ಇಂಡಿಯಾ ಕಂಪೆನಿಗೆ ನರೇಂದ್ರ ಮೋದಿಯೇ ಟಾರ್ಗೆಟ್. ಭಾರತದ ಜನ ನರೇಂದ್ರ ಮೋದಿಗೆ ಬೆಂಬಲ ನೀಡುತ್ತಾರೆ ಎಂದರು.

ಅಜಿತ್ ಪವರ್ ಎನ್ ಡಿಎ ಸೇರ್ಪಡೆ ವಿಚಾರದ ಬಗ್ಗೆ ಮಾತನಾಡಿದ ಅವರು, ಇದು ಅಜಿತ್ ಪವಾರ್ ಅವರಿಗೆ ಸೇರಿದ ವಿಚಾರ. ಕುಟುಂಬ ರಾಜಕಾರಣದಿಂದ ಬೇಸತ್ತು ಎನ್ ಡಿ ಎ ಸೇರಿದ್ದಾರೆ. ಅಜಿತ್ ಪವಾರ್ ಅವರೇ ಎನ್ ಸಿಪಿ ನಾಯಕ ಎಂದು ಎಲ್ಲರೂ ಹೇಳುತ್ತಿದ್ದರು. ಆದರೆ ಎನ್ ಸಿಪಿ ಅಧ್ಯಕ್ಷನ ಚುನಾವಣೆಯಲ್ಲಿ ಅಜಿತ್ ಪವಾರ್ ರನ್ನು ಗಣನೆಗೆ ತೆಗೆದುಕೊಂಡಿಲ್ಲ. ಕುಟುಂಬ ರಾಜಕಾರಣದಿಂದ ಬೇಸತ್ತು ಅವರು ಆಚೆ ಬಂದಿರಬಹುದು. ಅಜಿತ್ ಪವಾರ್ ಜೊತೆ ಬಿಜೆಪಿ ಗಟ್ಟಿಯಾಗಿ ನಿಲ್ಲುತ್ತೆ. ದೇಶವನ್ನು ಗಟ್ಟಿಗೊಳಿಸುವ ಕಾರ್ಯದಲ್ಲಿ ಅವರು ಜೋಡಣೆಯಾಗಿದ್ದಾರೆಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು