News Karnataka Kannada
Tuesday, April 30 2024
ಉಡುಪಿ

ಅಡಿಕೆ ಕಳವು ಪ್ರಕರಣ : ಮೂವರು ಆರೋಪಿಗಳ ಬಂಧನ

ಹಲವು ಕಡೆಗಳಲ್ಲಿ ನಡೆದ ಅಡಿಕೆ ಕಳವು ಪ್ರಕರಣಗಳಿಗೆ ಸಂಬಂಧಿಸಿ ಶಂಕರನಾರಾಯಣ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
Photo Credit : NewsKarnataka

ಉಡುಪಿ: ಹಲವು ಕಡೆಗಳಲ್ಲಿ ನಡೆದ ಅಡಿಕೆ ಕಳವು ಪ್ರಕರಣಗಳಿಗೆ ಸಂಬಂಧಿಸಿ ಶಂಕರನಾರಾಯಣ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕುಂದಾಪುರ ಗುಲ್ವಾಡಿ ಗ್ರಾಮದ ಅಮೀರ್ ಝೈನುದ್ದೀನ್ (23), ಭಟ್ಕಳ ಬಿಳಲಖಂಡ ಗ್ರಾಮದ ಮುನಾವರ್(21), ಭಟ್ಕಳ ಉಸ್ಮಾನ್ ನಗರದ ನಿಸಾರ್ ಆಸೀಫ್ ಅನ್ನಾರ್(24) ಎಂದು ಗುರುತಿಸಲಾಗಿದೆ.

ಬಂಧಿತರು ಶಂಕರನಾರಾಯಣ ವ್ಯಾಪ್ತಿಯ ಹಾಲಾಡಿ ಮತ್ತು ಕ್ರೂಡ ಬೈಲೂರು, ಕೊಲ್ಲೂರು ಠಾಣಾ ವ್ಯಾಪ್ತಿಯ ಜಡ್ಕಲ್ ಹಾಗೂ ಗಂಗೊಳ್ಳಿ ಠಾಣಾ ವ್ಯಾಪ್ತಿಯ ನೂಜಾಡಿ ಎಂಬಲ್ಲಿ ನಡೆದ ಅಡಿಕೆ ಕಳವು ಪ್ರಕರಣದಲ್ಲಿ ಭಾಗಿಯಾಗಿದ್ದರು. ಬಂಧಿತರಿಂದ 11.25 ಕ್ವಿಂಟಾಲ್ ಸಿಪ್ಪೆಅಡಿಕೆ, 40ಕೆ.ಜಿ. ಒಣ ಅಡಿಕೆ, ಮತ್ತು ಕೃತ್ಯಕ್ಕೆ ಬಳಸಿದ್ದ ಪಿಕ್‌ಆಪ್ ವಾಹನ ಹಾಗೂ ಸ್ಕೂಟರ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಇವುಗಳ ಒಟ್ಟು ಮೌಲ್ಯ 4,05,750ರೂ. ಅಂದಾಜಿಸಲಾಗಿದೆ. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆರೋಪಿಗಳಿಗೆ 15 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು