ಉಡುಪಿ

ಕಾರ್ಕಳದ ಜನರ ಪಾಲಿಗೆ ಟಿಎಮ್ಎ ಪೈ ರೋಟರಿ ಆಸ್ಪತ್ರೆ ಬಹುದೊಡ್ಡ ಕೊಡುಗೆ- ವಿ. ಸುನಿಲ್ ಕುಮಾರ್

ಕಾರ್ಕಳ: ಕಾರ್ಕಳದ ಜನರ ಪಾಲಿಗೆ ಕಾರ್ಕಳದ ಮಣಿಪಾಲ ಟಿಎಮ್ಎ ಪೈ ರೋಟರಿ ಆಸ್ಪತ್ರೆ ಬಹುದೊಡ್ಡ ಕೊಡುಗೆ ಯಾಗಿದ್ದು ಆರೋಗ್ಯಕ್ಕೆ ಹೆಚ್ಚಿನ ಮಹತ್ವ ನೀಡುತ್ತಿದೆ ಎಂದು ಇಂಧನ ಮತ್ತು ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನಿಲ್ ಕುಮಾರ್ ಹೇಳಿದರು.

ಅವರು ಮಂಗಳವಾರ ಕಾರ್ಕಳದ ಮಣಿಪಾಲ ಟಿಎಮ್ಎ ಪೈ ರೋಟರಿ ಆಸ್ಪತ್ರೆ ಯ ವಿಸ್ತೃತವಾದ ಆಸ್ಪತ್ರೆಯ ಕೆ ಕೃಷ್ಣ ಪ್ರಭು ಒಪಿಡಿ ಬ್ಲಾಕ್ ಮತ್ತು ಹೊಸ ಆಪರೇಷನ್ ಥಿಯೇಟರ್ ಕಾಂಪ್ಲೆಕ್ಸ್ ನ ಉದ್ಘಾಟನೆ ಮಾತನಾಡಿದರು. ಮಣಿಪಾಲ ಆಸ್ಪತ್ರೆಗಳು ಆರೋಗ್ಯ ಸೇವೆಗೆ ಭದ್ರತೆ ನೀಡುತ್ತಿದೆ. ಮೂಲಭೂತ ಸೌಕರ್ಯಗಳಲ್ಲಿ ಆರೋಗ್ಯವು ಮುಖ್ಯವಾಗಿದೆ. ಕೋವಿಡ್ ಸಮಯದಲ್ಲಿ ಮಣಿಪಾಲ ಅಸ್ಪತ್ತೆಯ ಸೇವೆ ಅಭಿನಂದನೀಯವಾಗಿದೆ ಎಂದು ಹೇಳಿದರು.

ಉಪಕುಲಪತಿ ಲೆಫ್ಟಿನೆಂಟ್ ಜನರಲ್ (ಡಾ) ಎಂ ಡಿ ವೆಂಕಟೇಶ್ ಮಾತನಾಡಿ ಕಾರ್ಕಳ ತಾಲೂಕಿಗೆ ತಜ್ಞ ವೈದ್ಯಕೀಯ ವ್ಯವಸ್ಥೆ ಯು ಸ್ಥಳೀಯ ನೀಡಲಾಗುತ್ತಿದೆ. ಸುಮಾರು 6 ಕೋಟಿ ರೂಪಾಯಿ ವೆಚ್ಚದಲ್ಲಿ ಕಟ್ಟಡ ನವೀಕರಣ ಮಾಡಲಾಗಿದೆ ಎಂದರು.

ಮಾಹೆ ಮಣಿಪಾಲಸಹ ಕುಲಾಧಿಪತಿಗಳು ಡಾ. ಎಚ್.ಎಸ್. ಬಲ್ಲಾಳ್ , ಮಾತನಾಡಿ ಸದ್ಯದಲ್ಲೇ ಈ ಅಸ್ಪ ಪ್ರೆಯು ಅತ್ಯಂತ ಸುಸಜ್ಜಿತ ಆಸ್ಪತ್ರೆಯಾಗಿ ಮೆಲ್ದರ್ಜೆಗೆ ಏರಲಿದೆ. ಕೋವಿಡ್ ಸಮಯದಲ್ಲಿ ಉಡುಪಿಯ ಟಿ ಎಂ ಪೈ ಆಸ್ಪತ್ರೆ ದೇಶದಲ್ಲಿ ಮೊತ್ತ ಮೊದಲ ಬಾರಿಗೆ ಕೋವಿಡ್ ಆಸ್ಪತ್ರೆ ಯನ್ನಾಗಿ ಪರಿವರ್ತಿಸುವ ಮೂಲಕ ಜನರ ಮೆಚ್ಚುಗೆ ಗೆ ಪಾತ್ರವಾಗಿತ್ತು ಎಂದರು.

ಕಾರ್ಕಳ ಆಸ್ಪತ್ರೆಯ ವಿಸ್ತರಣೆಯು ಕಾರ್ಕಳ ಮತ್ತು ಸುತ್ತಮುತ್ತಲಿನ ಜನರಿಗೆ ಕೈಗೆಟುಕುವ ಮತ್ತು ಸುಲಭವಾಗಿ ಆರೋಗ್ಯ ಸೇವೆಯನ್ನು ಒದಗಿಸುವ ನಮ್ಮ ಬದ್ಧತೆಯ ಮಹತ್ವದ ಮೈಲಿಗಲ್ಲು. ಹೊಸ ಸೌಲಭ್ಯಗಳು, ಉಪಕರಣಗಳು ಮತ್ತು ಸೇವೆಗಳೊಂದಿಗೆ, ನಾವು ನಮ್ಮ ರೋಗಿಗಳಿಗೆ ಉತ್ತಮ ಸೇವೆ ಸಲ್ಲಿಸಲು ಸಾಧ್ಯವಾಗುತ್ತದೆ ಎಂದರು. ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ಡೀನ್ ಡಾ ಪದ್ಮರಾಜ್ ಹೆಗ್ಡೆ, ಮಾಹೆ ಮಣಿಪಾಲದ ಬೋಧನಾ ಆಸ್ಪತ್ರೆಗಳ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ ಆನಂದ್ ವೇಣುಗೋಪಾಲ್, ಕಸ್ತೂರ್ಬಾ ಆಸ್ಪತ್ರೆ ಮಣಿಪಾಲದ ವೈದ್ಯಕೀಯ ಅಧೀಕ್ಷಕ ಡಾ.ಅವಿನಾಶ್ ಶೆಟ್ಟಿ, ಉಪಸ್ಥಿತರಿದ್ದರು. ಕೀರ್ತಿನಾಥ ಬಲ್ಲಾಳ ಸ್ವಾಗತಿಸಿದರು. ಸಹಕುಲಪತಿ ಡಾ ಶರತ್ ಕುಮಾರ್ ರಾವ್ ಪ್ರಸ್ತಾವನೆ ಗೈದರು. ಡಾ.ಸಂಜಯ್ ಪ್ರಭು ಧನ್ಯವಾದ ವಿತ್ತರು.

Gayathri SG

Recent Posts

ತೆಂಗಿನ ಗರಿಯಲ್ಲಿ ಬಸ್‌ ನಿಲ್ದಾಣ ನಿರ್ಮಿಸಿದ ಮಹಿಳೆಯರು

ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್‌ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…

6 hours ago

ಮಗುವಿನ ಬೆರಳಿನ ಬದಲು ನಾಲಗೆಗೆ ಶಸ್ತ್ರಚಿಕಿತ್ಸೆ ಮಾಡಿ ವೈದ್ಯರ ಯಡವಟ್ಟು !

ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…

7 hours ago

ತೀರ್ಥದಲ್ಲಿ ನಿದ್ರೆ ಬರುವ ಮಾತ್ರೆ ಬೆರೆಸಿ ಅರ್ಚಕನಿಂದ ಟಿವಿ ನಿರೂಪಕಿಯ ಅತ್ಯಾಚಾರ

ತಮಿಳುನಾಡಿನ ಖಾಸಗಿ ಟಿವಿ ಚಾನೆಲ್‌ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್‌ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್‌ ಮುನಿಸ್ವಾಮಿ…

8 hours ago

ಮರಿ ಆನೆಗೆ ಕುಟುಂಬದಿಂದ Z+ ಭದ್ರತೆ: ವಿಡಿಯೋ ವೈರಲ್

ಆನೆಗಳು ಕುಟುಂಬ ಸಮೇತ ಕಾಡಿನಲ್ಲಿ ಹಾಯಾಗಿ ಮಲಗಿ ವಿಶ್ರಾಂತಿ ಪಡೆಯುತ್ತಿರುವ ಕ್ಯೂಟ್ ದೃಶ್ಯವನ್ನು ಕಂಡು ನೆಟ್ಟಿಗರು ಮನಸೋತಿದ್ದಾರೆ.‌ ಹೌದು. .…

8 hours ago

ಆರ್‌ಸಿಬಿ vs ಸಿಎಸ್‌ಕೆ ಫ್ಯಾನ್ಸ್‌ ಗೆ ಎಚ್ಚರಿಕೆ ಕೊಟ್ಟ ಬೆಂಗಳೂರು ಪೊಲೀಸರು

ಮೇ 18ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ ಆರ್‌ಸಿಬಿ vs ಸಿಎಸ್‌ಕೆ ಪಂದ್ಯಕ್ಕೆ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಎರಡೂ ತಂಡಗಳಿಗೂ…

8 hours ago

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಮೃತ್ಯು

ಬೋರ್ಡ್ ಪರೀಕ್ಷೆಯಲ್ಲಿ 99.70% ಅಂಕ ಗಳಿಸಿ ಟಾಪರ್ ಆಗಿದ್ದ ಗುಜರಾತ್‌ನ ಮೊರ್ಬಿಯ 16 ವರ್ಷದ ಹುಡುಗಿ ಮೆದುಳಿನ ರಕ್ತಸ್ರಾವದಿಂದ ಸಾವನ್ನಪ್ಪಿದ್ದಾಳೆ.

8 hours ago