ಉಡುಪಿ: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮರಾಠಿ ಯುವ ಸಾಂಸ್ಕೃತಿಕ ಕಲಾ ಮತ್ತು ಕ್ರೀಡಾ ಸಂಘ ಪೆರ್ಡೂರು ಇದರ ಸಹಕಾರದೊಂದಿಗೆ “ಗಿರಿಜನ ಉತ್ಸವ – 2023” ಅನ್ನು ಪೆರ್ಡೂರು ಸುಬ್ರಾಯ ಕಲ್ಯಾಣ ಮಂಟಪದಲ್ಲಿ ಇಂದು ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಉದ್ಘಾಟಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಪೆರ್ಡೂರು ಗ್ರಾಮ ಪಂಚಾಯತ್ ಅಧ್ಯಕ್ಷೆ ಚೇತನಾ, ಜಿಲ್ಲಾ ಕೊರಗ ಸಂಘದ ಅಧ್ಯಕ್ಷೆ ಗೌರಿ, ರಾಜ್ಯ ಮಲೆಕುಡಿಯ ಸಂಘದ ಅಧ್ಯಕ್ಷ ಶ್ರೀಧರ ಗೌಡ, ಪೆರ್ಡೂರು ಮರಾಠಿ ಯುವ ಸಾಂಸ್ಕೃತಿಕ ಕಲಾ ಮತ್ತು ಕ್ರೀಡಾ ಸಂಘದ ಅಧ್ಯಕ್ಷ ರವಿ ನಾಯ್ಕ್ ಹರಿಕಂಡಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ ಉಪಸ್ಥಿತರಿದ್ದರು.