News Karnataka Kannada
Thursday, May 09 2024
ಉಡುಪಿ

‘ಮೌಂಟ್ ಎವರೆಸ್ಟ್ ಬೇಸ್ ಕ್ಯಾಂಪ್‌’ನ ಮೇಲೆ ಉಡುಪಿ ಯುವಕನಿಂದ ತುಳು ಧ್ವಜ ಹಾರಾಟ

tulu flag flying
Photo Credit : News Kannada

ಉಡುಪಿ: ಟ್ರೆಕ್ಕಿಂಗ್ ಪ್ರೇಮಿಯಾಗಿರುವ ಸಿದ್ವೀನ್‌ ಶೆಟ್ಟಿ (28) ಉಡುಪಿಯ ಯುವಕ ಸುಮಾರು 18,000 ಕಿ.ಮೀ.ಗೂ ಅಧಿಕ ಪ್ರಯಾಣವನ್ನು ತನ್ನ ಬೈಕ್‌ನಲ್ಲಿಯೇ ಏಕಾಂಗಿಯಾಗಿ ಮುಗಿಸಿ ತುಳುನಾಡಿನ ಧ್ವಜವನ್ನು ವಿಶ್ವದ ಅತೀ ಎತ್ತರದ ಉಮ್ಲಿಂಗ್ ಲಾ ಮತ್ತು ಮೌಂಟ್ ಎವರೆಸ್ಟ್ ಬೇಸ್ ಕ್ಯಾಂಪ್ ನ ಮೇಲೆ ಹಾರಿಸಿ ಬಂದಿದ್ದಾರೆ.

2023 ರ ಮೇ 6 ರಂದು ಉಡುಪಿಯಿಂದ ತನ್ನ ಹಿಮಾಲಯನ್ ಬೈಕ್ ನಲ್ಲಿ ಪ್ರಯಾಣ ಆರಂಭಿಸಿ ಭಾರತ, ನೇಪಾಳ ಮತ್ತು ಭೂತಾನ್ ದೇಶವನ್ನು ಸುತ್ತಿದ್ದು, ಭಾರತದ 21 ರಾಜ್ಯಗಳು, 5 ಕೇಂದ್ರಾಡಳಿತ ಪ್ರದೇಶಗಳನ್ನು ಸುತ್ತಿ ಜುಲೈ 19ರಂದು ಉಡುಪಿಗೆ ವಾಪಾಸಾಗಿದ್ದಾರೆ. ಇದರೊಂದಿಗೆ ವಿಶ್ವದ ಅತೀ ಎತ್ತರದ ಪ್ರದೇಶವಾದ ಉಮ್ಲಿಂಗ್ ಲಾ (19,024ಫೀಟ್), ಮೌಂಟ್ ಎವರೆಸ್ಟ್ ಬೇಸ್ ಕ್ಯಾಂಪ್ (17598 ಫೀಟ್ ಎತ್ತರ) ಮತ್ತು ವಿಶ್ವದ ಅತೀ ಎತ್ತರದ ಶಿವ ದೇವಾಲಯ ತುಂಗನಾಥ್ ಅನ್ನು ಕೂಡ ಸ್ಪರ್ಶಿಸಿ ಬಂದಿದ್ದಾರೆ.

ಈ ಬಗ್ಗೆ ಮಾತನಾಡಿದ ಸಿದ್ವಿನ್ ಶೆಟ್ಟಿ “ನಾನು ನನ್ನ ಪ್ರಯಾಣವನ್ನು ಯಾವುದೇ ರೀತಿಯ ಸುದ್ದಿಯನ್ನು ಮಾಡದೇ ಕೇವಲ ನನ್ನ ತಂದೆ ತಾಯಿ ಮತ್ತು ಸಹೋದರಿಗೆ ತಿಳಿಸುವ ಮೂಲಕ ಮೌನವಾಗಿ ಆರಂಭಿಸಿದೆ. ಏಕೆಂದರೆ 18000 ಕಿಮೀ ಪ್ರಯಾಣ ಕ್ರಮಿಸುವುದು ಎಷ್ಟು ಕಷ್ಟ ಸಾಧ್ಯ ಎನ್ನುವ ಅರಿವು ನನಗಿತ್ತು. ಆದರೆ ನನ್ನ ಮನೆಯವರ ಬೆಂಬಲ ನನ್ನೊಂದಿಗೆ ಇದ್ದ ಕಾರಣ ನಾನು ಅದನ್ನು ಕ್ರಮಿಸಲು ಸಾಧ್ಯವಾಯಿತು. ನನ್ನ ಬೈಕ್ ಸವಾರಿಯ ಸಮಯದಲ್ಲಿ ಹಲವಾರು ಸೇತುವೆಗಳು, ಭೂಕುಸಿತಗಳು, ಪ್ರವಾಹ ಪ್ರದೇಶಗಳು, ಹೊಳೆಗಳು, ಮಂಜುಗಡ್ಡೆಯ ಪ್ರದೇಶಗಳು, ಮರಳು, ಕಲ್ಲುಗಳು, ಪರ್ವತಗಳು, ದಟ್ಟವಾದ ಕಾಡುಗಳನ್ನು ದಾಟಿ ಮುಂದುವರೆದಿದ್ದೇನೆ.

ನನ್ನ ಪ್ರಯಾಣದ ಮುಖ್ಯವಾದ ಸಾಧನೆ ಎಂದರೆ ಸುಮಾರು 17,598 ಅಡಿ ಎತ್ತರ ಮೌಂಟ್ ಎವರೆಸ್ಟ್ ಬೇಸ್ ಕ್ಯಾಂಪನ್ನು ಕೇವಲ 6 ದಿನಗಳಲ್ಲಿ ಯಾವುದೇ ರೀತಿ ಮಾರ್ಗದರ್ಶಕರಿಲ್ಲದೆ ಆರೋಹಣ ಮಾಡಿ ಪೂರ್ಣಗೊಳಿಸಿರುವುದಾಗಿದೆ. ಈ ಎತ್ತರದ ಪ್ರದೇಶಕ್ಕೆ ತೆರಳಿ ಅಲ್ಲಿ ತುಳುನಾಡಿನ ಧ್ವಜವನ್ನು ಹಾರಿಸಿದ್ದೇನೆ ಎಂಬ ಹೆಮ್ಮೆ ನನಗಿದೆ ಎಂದಿದ್ದಾರೆ

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು