News Karnataka Kannada
Saturday, April 27 2024
ಉಡುಪಿ

ತುಳು ಲಿಪಿಯನ್ನು ಸಾರ್ವಜನಿಕ ಪ್ರದೇಶದಲ್ಲಿ ಅಳವಡಿಸಬೇಕು: ಮೊಯಿದೀನ್ ಮನವಿ

ಇಂದು ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ಕರ್ನಾಟಕ ಸರ್ಕಾರದ ಗೌರವಾನ್ವಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತುಳು ಭಾಷೆ ಲಿಪಿಯ ಅಕ್ಷರಗಳನ್ನು ಸಹ ಸಾರ್ವಜನಿಕ ಪ್ರದೇಶದಲ್ಲಿ ಹಾಗೂ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಅಳವಡಿಸಲು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ವಿಶೇಷ ಆದೇಶ ಹೊರಡಿಸುವಂತೆ ಆಗ್ರಹಿಸಿ ಮಾಜಿ ಶಾಸಕ ಮೊಯಿದೀನ್ ಬಾವ ಅವರ ಹಾಗೂ ಎಲ್ಲಾ ತುಳು ಪರ ಸಂಘಟನೆಗಳ ನೇತೃತ್ವದಲ್ಲಿ ತುಳುನಾಡಿನ ಜನರ ಪರವಾಗಿ ಮನವಿ ನೀಡಲಾಯಿತು.
Photo Credit : News Kannada

ಉಡುಪಿ: ಇಂದು ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ಕರ್ನಾಟಕ ಸರ್ಕಾರದ ಗೌರವಾನ್ವಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತುಳು ಭಾಷೆ ಲಿಪಿಯ ಅಕ್ಷರಗಳನ್ನು ಸಹ ಸಾರ್ವಜನಿಕ ಪ್ರದೇಶದಲ್ಲಿ ಹಾಗೂ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಅಳವಡಿಸಲು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ವಿಶೇಷ ಆದೇಶ ಹೊರಡಿಸುವಂತೆ ಆಗ್ರಹಿಸಿ ಮಾಜಿ ಶಾಸಕ ಮೊಯಿದೀನ್ ಬಾವ ಅವರ ಹಾಗೂ ಎಲ್ಲಾ ತುಳು ಪರ ಸಂಘಟನೆಗಳ ನೇತೃತ್ವದಲ್ಲಿ ತುಳುನಾಡಿನ ಜನರ ಪರವಾಗಿ ಮನವಿ ನೀಡಲಾಯಿತು.

ಉಡುಪಿ ಜಿಲ್ಲೆಯ ಗೌರವಾನ್ವಿತ ಜಿಲ್ಲಾಧಿಕಾರಿಗಳು ಮನವಿಯನ್ನು ಸ್ವೀಕರಿಸಿದರು, ಬಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ಮಸೂದೆ 2024 ರಲ್ಲಿ ತಿಳಿಸಿರುವಂತೆ ಕನ್ನಡ ಭಾಷೆಯನ್ನು ಶೇಕಡ 60 ರ ಬದಲಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗೌರವಾನ್ವಿತ ನ್ಯಾಯಾಲಯದ ಕನ್ನಡ ನಾಮಫಲಕಗಳಿಗೆ ಕನಿಷ್ಠ ಶೇಕಡ 50 ನ್ನು ನಮೂದಿಸಿ ಹಾಗೂ 2500 ವರ್ಷಗಳ ಇತಿಹಾಸ ಹೊಂದಿರುವ ಸ್ವಂತ ಲಿಪಿ ಹೊಂದಿರುವ ತುಳು ಲಿಪಿಯ ಅಕ್ಷರಗಳಿಗೆ ಶೇಕಡ 30 ರಷ್ಟು ಅವಕಾಶ ನೀಡಬೇಕು ಮತ್ತು ಉಳಿದ ವ್ಯಾವಹಾರಿಕ ಭಾಷೆಗಳಿಗೆ ಶೇಕಡ 20 ರಷ್ಟನ್ನು ತುಳುನಾಡಿನ 2 ಜಿಲ್ಲೆಗಳಿಗೆ ಅನ್ವಯವಾಗುವಂತೆ ಕೂಡಲೇ ವಿಶೇಷ ಆದೇಶ ಹೊರಡಿಸಬೇಕೆಂದು ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯರಾದ ಶ್ರೀ ಆಕಾಶ್ ರಾಜ್ ಜೈನ್ ಅವರು, ತುಳುನಾಡ ರಕ್ಷಣಾ ವೇದಿಕೆ ಅಧ್ಯಕ್ಷರಾದ ಶ್ರೀ ಯೋಗೀಶ್ ಶೆಟ್ಟಿ ಜೆಪ್ಪು ಅವರು, ತುಳು ಪರ ಹೋರಾಟಗಾರರಾದ ರೋಷನ್ ರೆನೋಲ್ಡ್, ಜೈ ತುಳುನಾಡು ಸಂಘಟನೆ ಅಧ್ಯಕ್ಷರಾದ ವಿಷು ಶ್ರೀಕೆರಾ, ತುಳುನಾಡು ಒಕ್ಕೂಟದ ಪ್ರಮುಖ ಮುಖಂಡರುಗಳು, ಉಡುಪಿ ರಾಜಕೀಯ ಮುಖಂಡರಾದ ಕೃಷ್ಣಮೂರ್ತಿ ಆಚಾರ್ಯ ಅವರು, ಸೇರಿದಂತೆ ಎಲ್ಲಾ ತುಳು ಪರ ಸಂಘಟನೆಗಳ ಪದಾಧಿಕಾರಿಗಳು ಸದಸ್ಯರುಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು