Categories: ಉಡುಪಿ

ತುಳು ಲಿಪಿಯನ್ನು ಸಾರ್ವಜನಿಕ ಪ್ರದೇಶದಲ್ಲಿ ಅಳವಡಿಸಬೇಕು: ಮೊಯಿದೀನ್ ಮನವಿ

ಉಡುಪಿ: ಇಂದು ಉಡುಪಿ ಜಿಲ್ಲಾಧಿಕಾರಿಗಳ ಮೂಲಕ ಕರ್ನಾಟಕ ಸರ್ಕಾರದ ಗೌರವಾನ್ವಿತ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತುಳು ಭಾಷೆ ಲಿಪಿಯ ಅಕ್ಷರಗಳನ್ನು ಸಹ ಸಾರ್ವಜನಿಕ ಪ್ರದೇಶದಲ್ಲಿ ಹಾಗೂ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಅಳವಡಿಸಲು ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗೆ ವಿಶೇಷ ಆದೇಶ ಹೊರಡಿಸುವಂತೆ ಆಗ್ರಹಿಸಿ ಮಾಜಿ ಶಾಸಕ ಮೊಯಿದೀನ್ ಬಾವ ಅವರ ಹಾಗೂ ಎಲ್ಲಾ ತುಳು ಪರ ಸಂಘಟನೆಗಳ ನೇತೃತ್ವದಲ್ಲಿ ತುಳುನಾಡಿನ ಜನರ ಪರವಾಗಿ ಮನವಿ ನೀಡಲಾಯಿತು.

ಉಡುಪಿ ಜಿಲ್ಲೆಯ ಗೌರವಾನ್ವಿತ ಜಿಲ್ಲಾಧಿಕಾರಿಗಳು ಮನವಿಯನ್ನು ಸ್ವೀಕರಿಸಿದರು, ಬಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ಮಸೂದೆ 2024 ರಲ್ಲಿ ತಿಳಿಸಿರುವಂತೆ ಕನ್ನಡ ಭಾಷೆಯನ್ನು ಶೇಕಡ 60 ರ ಬದಲಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಗೌರವಾನ್ವಿತ ನ್ಯಾಯಾಲಯದ ಕನ್ನಡ ನಾಮಫಲಕಗಳಿಗೆ ಕನಿಷ್ಠ ಶೇಕಡ 50 ನ್ನು ನಮೂದಿಸಿ ಹಾಗೂ 2500 ವರ್ಷಗಳ ಇತಿಹಾಸ ಹೊಂದಿರುವ ಸ್ವಂತ ಲಿಪಿ ಹೊಂದಿರುವ ತುಳು ಲಿಪಿಯ ಅಕ್ಷರಗಳಿಗೆ ಶೇಕಡ 30 ರಷ್ಟು ಅವಕಾಶ ನೀಡಬೇಕು ಮತ್ತು ಉಳಿದ ವ್ಯಾವಹಾರಿಕ ಭಾಷೆಗಳಿಗೆ ಶೇಕಡ 20 ರಷ್ಟನ್ನು ತುಳುನಾಡಿನ 2 ಜಿಲ್ಲೆಗಳಿಗೆ ಅನ್ವಯವಾಗುವಂತೆ ಕೂಡಲೇ ವಿಶೇಷ ಆದೇಶ ಹೊರಡಿಸಬೇಕೆಂದು ಆಗ್ರಹಿಸಲಾಯಿತು.

ಈ ಸಂದರ್ಭದಲ್ಲಿ ತುಳು ಸಾಹಿತ್ಯ ಅಕಾಡೆಮಿ ಮಾಜಿ ಸದಸ್ಯರಾದ ಶ್ರೀ ಆಕಾಶ್ ರಾಜ್ ಜೈನ್ ಅವರು, ತುಳುನಾಡ ರಕ್ಷಣಾ ವೇದಿಕೆ ಅಧ್ಯಕ್ಷರಾದ ಶ್ರೀ ಯೋಗೀಶ್ ಶೆಟ್ಟಿ ಜೆಪ್ಪು ಅವರು, ತುಳು ಪರ ಹೋರಾಟಗಾರರಾದ ರೋಷನ್ ರೆನೋಲ್ಡ್, ಜೈ ತುಳುನಾಡು ಸಂಘಟನೆ ಅಧ್ಯಕ್ಷರಾದ ವಿಷು ಶ್ರೀಕೆರಾ, ತುಳುನಾಡು ಒಕ್ಕೂಟದ ಪ್ರಮುಖ ಮುಖಂಡರುಗಳು, ಉಡುಪಿ ರಾಜಕೀಯ ಮುಖಂಡರಾದ ಕೃಷ್ಣಮೂರ್ತಿ ಆಚಾರ್ಯ ಅವರು, ಸೇರಿದಂತೆ ಎಲ್ಲಾ ತುಳು ಪರ ಸಂಘಟನೆಗಳ ಪದಾಧಿಕಾರಿಗಳು ಸದಸ್ಯರುಗಳು ಉಪಸ್ಥಿತರಿದ್ದರು.

Nisarga K

Recent Posts

ಎಸ್​ಎಸ್​ಎಲ್​ಸಿ ಫಲಿತಾಂಶ: ಕಲ್ಯಾಣ ಕರ್ನಾಟಕ ಜಿಲ್ಲೆಗಳಿಗೆ ಕೊನೆ ಸ್ಥಾನ

ಇಂದು ಎಸ್​ಎಸ್​ಎಲ್​ಸಿ ಫಲಿತಾಂಶ ಪ್ರಕಟವಾಗಿದ್ದು, ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳೇ ಕೊನೆಯ ಸ್ಥಾನದಲ್ಲಿ ಮುಂದುವರೆದಿವೆ. 

4 mins ago

ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರದ ಆನೆಯ ಕಾಲಿಗೆ ಗಾಯ; ನಿರ್ವಹಣೆ ನಿರ್ಲಕ್ಷ್ಯ ಆರೋಪ

ರಾಜ್ಯದ ಶ್ರೀಮಂತ ಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯದ ಆನೆ ಕಾಲಿಗೆ ಗಾಯವಾಗಿದೆ. ಆನೆ ಮಾವುತ ಶ್ರೀನಿವಾಸ್ ಮೇಲೆ ಆನೆಯ ನಿರ್ವಹಣೆಯ ನಿರ್ಲಕ್ಷ್ಯದ…

32 mins ago

ಕಾರ್ಕಳ ಜ್ಞಾನಸುಧಾ ಶಾಲೆಯ ವಿದ್ಯಾರ್ಥಿನಿ ಸಹನಾ ರಾಜ್ಯಕ್ಕೆ ತೃತೀಯ

ಎಸ್ ಎಸ್ ಎಲ್ ಸಿ ಪರೀಕ್ಷೆಯ ಫಲಿತಾಂಶ ಘೋಷಣೆಯಾಗಿದ್ದು, ಕಾರ್ಕಳ ತಾಲೂಕಿನ ಗಣಿತನಗರದ ಜ್ಞಾನಸುಧಾ ಆಂಗ್ಲ ಮಾಧ್ಯಮ ಶಾಲೆಯ ಸಹನಾ…

37 mins ago

ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

ಕನ್ನಡದ ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣದ ಸಿನಿಮಾಗಳ ಬಳಿಕ ಬಿಟೌನ್ ನಲ್ಲಿ ಅದೃಷ್ಟ ಖುಲಾಯಿಸಿದೆ. ರಣ್ಬೀರ್ ಕಪೂರ್ ಅವರ 'ಅನಿಮಲ್'…

50 mins ago

ಇಂದು ಏರ್ ಇಂಡಿಯಾ ಎಕ್ಸ್​ಪ್ರೆಸ್​ನ 85 ವಿಮಾನ ಹಾರಾಟ ರದ್ದು

ಇಂದು ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಸ್ಥೆಯ 85 ಫ್ಲೈಟ್​ಗಳು ರದ್ದಾಗಿವೆ.

56 mins ago

ಅಯೋಧ್ಯಾದಲ್ಲಿ ಬಾಲರಾಮನಿಗೆ ತಲೆಬಾಗಿ ನಮಿಸಿದ ರಾಜ್ಯಪಾಲ ಆರಿಫ್‌ ಮೊಹಮ್ಮದ್

ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್  ಖಾನ್‌ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರಿಗೆ ನಮಿಸಿದರು.ಕೇರಳ ರಾಜಭವನದ ಎಕ್ಸ್ ನಲ್ಲಿನ…

59 mins ago