News Karnataka Kannada
Friday, May 03 2024
ಉಡುಪಿ

ಉಪ್ಪೂರಿನಲ್ಲಿ ಭೀಕರ ಸರಣಿ ಅಪಘಾತ: ಇಬ್ಬರಿಗೆ ಗಂಭೀರ ಗಾಯ

Two seriously injured in series of accidents in Uppur
Photo Credit : News Kannada

ಉಡುಪಿ: ನಿಯಂತ್ರಣ ತಪ್ಪಿ ರಸ್ತೆಗೆ ಬಿದ್ದ ಬೈಕ್ ಸವಾರನನ್ನು ತಪ್ಪಿಸಲು ಹೋದ ಲಾರಿಗೆ ಹಿಂದಿನಿಂದ ಬಂದ ಇನ್ನೊಂದು‌ ಲಾರಿ ಡಿಕ್ಕಿ ಹೊಡೆದ ಪರಿಣಾಮ ಲಾರಿ ಚಾಲಕನೋರ್ವ ಗಂಭೀರವಾಗಿ ಗಾಯಗೊಂಡ‌ ಘಟನೆ ಬ್ರಹ್ಮಾವರ ತಾಲೂಕಿನ ಉಪ್ಪೂರಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಇಂದು ಸಂಜೆ ನಡೆದಿದೆ. ಸ್ಕಿಡ್ ಆಗಿ ಬಿದ್ದ ಬೈಕ್ ಸವಾರನು‌ ಗಂಭೀರವಾಗಿ ಗಾಯಗೊಂಡಿದ್ದಾನೆ ಎಂದು ತಿಳಿದುಬಂದಿದೆ.

ಗಾಯಗೊಂಡ ಲಾರಿ ಚಾಲಕನನ್ನು ಕುಮಟದ ಕದಗಲ್ ಮೂಲದ ಮಹೇಶ್ ಗೌಡ ಹಾಗೂ ಬೈಕ್ ಸವಾರನನ್ನು ಹರೀಶ್ ಎಂದು ಗುರುತಿಸಲಾಗಿದೆ.

ರಸ್ತೆಗೆ ಬಿದ್ದ ಬೈಕ್ ಸವಾರನನ್ನು ತಪ್ಪಿಸಲು ಹೋದ ಲಾರಿಗೆ ಹಿಂದಿನಿಂದ ಬಂದ ಲಾರಿ ಡಿಕ್ಕಿ‌ಹೊಡೆದು, ರಸ್ತೆ ಬದಿಯ ದಾರಿದೀಪದ ಕಂಬಕ್ಕೆ ಡಿಕ್ಕಿಯಾಗಿದೆ. ಇದರ ಪರಿಣಾಮ ಲಾರಿಯ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

ಅಪಘಾತದಲ್ಲಿ ಗಾಯಗೊಂಡ ಬೈಕ್ ಸವಾರ ಹಾಗೂ ಲಾರಿ ಚಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ಪರಿಣಾಮ ಉಪ್ಪೂರಿನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಅರ್ಧ ತಾಸುಕ್ಕಿಂತಲೂ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಉಂಟಾಯಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು