News Karnataka Kannada
Sunday, April 28 2024
ಉಡುಪಿ

ಬ್ರಹ್ಮಾವರ: ಸೀತಾ ನದಿಯಲ್ಲಿ ಮುಳುಗಿ ಇಬ್ಬರು ಯುವಕರು ಮೃತ್ಯು

ದೋಣಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕರಿಬ್ಬರು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಬಾರ್ಕೂರು ಹೊಸಾಳ ಸಮೀಪದ ಸೀತಾ ನದಿಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ.
Photo Credit : NewsKarnataka

ಉಡುಪಿ: ದೋಣಿಯಲ್ಲಿ ಮೀನು ಹಿಡಿಯಲು ತೆರಳಿದ್ದ ಯುವಕರಿಬ್ಬರು ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ದಾರುಣ ಘಟನೆ ಬಾರ್ಕೂರು ಹೊಸಾಳ ಸಮೀಪದ ಸೀತಾ ನದಿಯಲ್ಲಿ ಇಂದು ಮಧ್ಯಾಹ್ನ ಸಂಭವಿಸಿದೆ. ಮೃತರನ್ನು ಹೊಸಾಳ ನಿವಾಸಿಗಳಾದ ಪ್ರಶಾಂತ (35) ಹಾಗೂ ಶ್ರೀಶಾ(21) ಎಂದು ಗುರುತಿಸಲಾಗಿದೆ.

ಇಂದು ಬೆಳಿಗ್ಗೆ 9 ಗಂಟೆಯ ಸುಮಾರಿಗೆ ಪ್ರಶಾಂತ್ ಹಾಗೂ ಶ್ರೀಶಾ ಎಂಬವರು ಮನೆ ಸಮೀಪದ‌ ಸೀತಾ ನದಿಗೆ ಮೀನು ಹಿಡಿಯಲು ತೆರಳಿದ್ದರು. ದೋಣಿಯಲ್ಲಿ ಮೀನಿಗಾಗಿ ಬಲೆ‌ ಹಾಕುತ್ತಿರುವ‌ ಸಂದರ್ಭದಲ್ಲಿ ಆಕಸ್ಮಿಕವಾಗಿ ನೀರಿನಲ್ಲಿ ಮುಳುಗಿದ್ದಾರೆ ಎನ್ನಲಾಗಿದೆ.
ಸಮೀಪದಲ್ಲೇ‌ ಬಟ್ಟೆ ತೊಳೆಯುತ್ತಿದ್ದ ಮಹಿಳೆ ಗಮನಿಸಿ ಸ್ಥಳೀಯರಿಗೆ ಸುದ್ದಿ ಮುಟ್ಟಿಸಿದ್ದರು. ಆದರೆ, ಸ್ಥಳೀಯರು ಸ್ಥಳಕ್ಕೆ ಧಾವಿಸುವಷ್ಟರಲ್ಲೇ ಇಬ್ಬರ ಪ್ರಾಣಪಕ್ಷಿ ಹಾರಿಹೋಗಿತ್ತು. ಬ್ರಹ್ಮಾವರ ಠಾಣಾಧಿಕಾರಿ ಮಧು ಪಿ.ಎಸ್ ಹಾಗೂ ಸಿಬ್ಬಂದಿ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು