Categories: ಉಡುಪಿ

ಬೈಲೂರು ಪರಶುರಾಮ ಥೀಂ ಪಾರ್ಕ್ ನ ಸಮಗ್ರ ತನಿಖೆ ಆಗಬೇಕು: ಉದಯಕುಮಾರ್ ಶೆಟ್ಟಿ ಒತ್ತಾಯ

ಉಡುಪಿ: ಬೈಲೂರು ಪರಶುರಾಮ ಥೀಂ ಪಾರ್ಕ್ ಹಾಗೂ ಅಲ್ಲಿನ ಪರಶುರಾಮ ಮೂರ್ತಿಯ ನೈಜತೆ ಬಗ್ಗೆ ಅನುಮಾನವಿದೆ. ಅಲ್ಲಿರುವ ಪರಶುರಾಮನ ಮೂರ್ತಿ ನಕಲಿ ಎಂದು ತಿಳಿದು ಬಂದಿದೆ. ಹೀಗಾಗಿ ಕೂಡಲೇ ಬಗ್ಗೆ ಸೂಕ್ತ ತನಿಖೆ ನಡೆಸಬೇಕು. ಆ ಬಳಿಕವೇ ಬಾಕಿ ಇರುವ ಕಾಮಗಾರಿ ಮುಂದುವರಿಸಬೇಕು ಎಂದು ಕಾಂಗ್ರೆಸ್ ಮುಖಂಡ ಮುನಿಯಾಲು ಉದಯಕುಮಾರ್ ಶೆಟ್ಟಿ ಒತ್ತಾಯಿಸಿದ್ರು.

ಉಡುಪಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಮಗಾರಿ ಪೂರ್ಣಗೊಳಿಸಲು ನಮ್ಮದು ಯಾವುದೇ ತಕರಾರು ಇಲ್ಲ. ಆದರೆ ಈವರೆಗೆ ನಡೆದಿರುವ ಕಾಮಗಾರಿ ಬಗ್ಗೆ ತನಿಖೆ ಆಗಬೇಕು. ಮೂರ್ತಿಯ ನೈಜತೆಯನ್ನು ಜನರಿಗೆ ತಿಳಿಸಬೇಕು ಎಂದರು.

ಇದೊಂದು ಭಾವನಾತ್ಮಕ ವಿಚಾರ, ಧಾರ್ಮಿಕ ವಿಚಾರ. ತನಿಖೆ ಆಗುವವರೆಗೆ ಯಾವುದೇ ಕಾಮಗಾರಿ ನಡೆಸಬಾರದು. ಇದನ್ನು ಗೋಮಾಲ ಜಾಗದಲ್ಲಿ ನಿರ್ಮಿಸಿದ್ದಾರೆ. ಪಾರ್ಕ್ ಉದ್ಘಾಟನೆ ಆದ ಬಳಿಕ ಇದು ಗೋಮಾಳ ಜಾಗ ಇಲ್ಲಿ ಏನೂ ಮಾಡಬಾರದೆಂದು ಸರಕಾರದ ಅಧೀನ ಕಾರ್ಯದರ್ಶಿ ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದರು. ಡಿಸಿ ಕೂಡ ಏನೂ ಮಾಡಬಾರದು ಎಂದು ತಿಳಿಸಿದ್ದಾರೆ. ತಹಶೀಲ್ದಾರ್ ಕೂಡ ಎರ್ಲಪಾಡಿ ಗ್ರಾಪಂಗೆ ಲಿಖಿತವಾಗಿ ಪತ್ರ ಬರೆದಿದ್ದಾರೆ ಎಂದು ಹೇಳಿದ್ರು.

ಪರಶುರಾಮ ಮೂರ್ತಿಯ ಉಮಿಕ್ಕಳ್ ಬೆಟ್ಟ ಗೊಂದಲದ ಗೂಡಾಗಿದೆ. ಪರಶುರಾಮ ಮೂರ್ತಿಯ ಮೊಣಕಾಲು ಗಂಟಿನವರೆಗೆ ಕಂಚಿನ ಮೂರ್ತಿಯಾಗಿದ್ದು, ಅಲ್ಲಿಂದ ಮೇಲಿನದ್ದು ನಕಲಿಯಾಗಿದೆ. ಈಗ ಕೊಡಲಿ ಹಿಡಿದದ್ದು ಸರಿಯಿಲ್ಲ, ಬಿಲ್ಲು ಹಿಡಿದದ್ದು ಸರಿಯಿಲ್ಲ ಎನ್ನುತ್ತಿದ್ದಾರೆ. ಯಾಕಂದ್ರೆ ಈಗಿರುವ ಮೂರ್ತಿಯನ್ನು ತೆಗೆದು, ಬೆಂಗಳೂರಿನಲ್ಲಿ ರೆಡಿ ಆಗುತ್ತಿರುವ ವರ್ಜಿನಲ್ ಮೂರ್ತಿಯನ್ನು ತಂದು ಪ್ರತಿಷ್ಠಾಪಿಸಬೇಕಿದೆ. ಅದಕ್ಕೆ ಈ ರೀತಿಯ ನೆಪವೊಡ್ಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ರು.

Ashika S

Recent Posts

ಮನುಷ್ಯನ ಆರೋಗ್ಯಕ್ಕೆ ಕ್ರೀಡೆಗಳು ಅತ್ಯಂತ ಸಹಕಾರಿ : ತಮ್ಮಯ್ಯ

ಕ್ರೀಡೆಗಳು ಮನುಷ್ಯನ ಆರೋಗ್ಯವನ್ನು ಸುಸ್ಥಿರವಾಗಿ ಕಾಪಾಡುವ ಜೊ ತೆಗೆ ಮನಸ್ಸನ್ನು ಹತೋಟಿಗಿಡುವ ಬಹುದೊಡ್ಡ ಸಾಧನ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ…

10 mins ago

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು- ತಮ್ಮಯ್ಯ

ಮಹಿಳೆಯರು ಆರ್ಥಿಕವಾಗಿ ಸ್ವಾವಲಂಬಿಯಾಗಬೇಕು. ಆ ನಿಟ್ಟಿನಲ್ಲಿ ಸ್ವಯಂ ಉದ್ಯೋಗ ಕೈಗೊಳ್ಳಬೇಕೆಂದು ಶಾಸಕ ಎಚ್.ಡಿ. ತಮ್ಮಯ್ಯ ಅವರು ಹೇಳಿದ್ದಾರೆ. ನಗರದ ಬಸವನಹಳ್ಳಿಯ…

21 mins ago

ಮಕ್ಕಳು ಬೇಸಿಗೆ ರಜೆಯಲ್ಲಿ ಶಿಕ್ಷಣದಿಂದ ವಂಚಿತರಾಗಬಾರದು : ಶಿಕ್ಷಕ ಬಾಲಾಜಿ

ಬೇಸಿಗೆ ರಜೆಯಲ್ಲಿ ಪಾಲಕರು ತಮ್ಮ ಮಕ್ಕಳನ್ನು ಖಾಸಗಿ ಸಂಸ್ಥೆಗಳ ಬೇಸಿಗೆ ತರಬೇತಿ ಶಿಬಿರಗಳಿಗೆ ಮುಂದಿನ ವಿದ್ಯಾಭ್ಯಾಸದ ಅನುಕೂಲಕ್ಕಾಗಿ ಕಳಿಸುವುದು ಸಾಮಾನ್ಯ.…

30 mins ago

ಚರಂಡಿ ಸ್ವಚ್ಛಗೊಳಿಸುವಂತೆ ಸಾರ್ವಜನಿಕರ ಆಗ್ರಹ

ಪಟ್ಟಣದ ವಿವಿಧ ವಾರ್ಡ್‌ಗಳು ಹಾಗೂ ಪ್ರಮುಖ ವೃತ್ತಗಳಲ್ಲಿನ ಚರಂಡಿಗಳು ಕಟ್ಟಿಕೊಂಡು ದುರ್ನಾತ ಬೀರುತ್ತಿದ್ದು, ಜನರು ಮೂಗು ಮುಚ್ಚಿಕೊಂಡು ಓಡಾಡುವಂತಾಗಿದೆ. ಅಧಿಕಾರಿಗಳ…

42 mins ago

ನಿವೃತ್ತಿ ಘೋಷಿಸಿದ ಇಂಗ್ಲೆಂಡ್​ ತಂಡ ವೇಗದ ಬೌಲರ್​ : ಕಾರಣ ಇಲ್ಲಿದೆ

ಇಂಗ್ಲೆಂಡ್ ತಂಡದ ವೇಗದ ಬೌಲರ್ ಜೇಮ್ಸ್ ಆ್ಯಂಡರ್ಸನ್ ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ನಿವೃತ್ತಿ ಘೋಷಿಸಿದ್ದಾರೆ. ಲಾರ್ಡ್ಸ್ ಕ್ರಿಕೆಟ್ ಮೈದಾನದಲ್ಲಿ ಇಂಗ್ಲೆಂಡ್ ಮತ್ತು…

54 mins ago

ಹಾಡಹಗಲೇ ಮನೆಗೆ ನುಗ್ಗಿ‌ದ ದುಷ್ಕರ್ಮಿಗಳು : ಜೀಪ್​ಗೆ ಬೆಂಕಿ ಹಚ್ಚಿ ಪರಾರಿ

ಹಾಡಹಗಲೇ ದುಷ್ಕರ್ಮಿಗಳು ಮನೆಗೆ ನುಗ್ಗಿ‌ ಟಿವಿ, ಫ್ರಿಡ್ಜ್ ಹಾಳು ಮಾಡಿರುವ ಘಟನೆ ಪಂಚಾಕ್ಷರಿ ನಗರದಲ್ಲಿ ನಡದಿದೆ.

58 mins ago