News Karnataka Kannada
Tuesday, April 30 2024
ಉಡುಪಿ

ಉದಯನಿಧಿ ಹೇಳಿಕೆ ಮೂಲಕ ವಿಪಕ್ಷಗಳ ಹಿಂದೂ ವಿರೋಧಿ ನಿಲುವು ಬಹಿರಂಗ

Udhayanidhi's statement exposes opposition alliance's anti-Hindu stand
Photo Credit : News Kannada

ಉಡುಪಿ: ತಮಿಳುನಾಡು ಮುಖ್ಯಮಂತ್ರಿ ಪುತ್ರ, ಸಚಿವ ಉದಯನಿಧಿ ಸ್ಟಾಲಿನ್ ಭಾರತದ ಸಾಮಾಜಿಕ ವ್ಯವಸ್ಥೆಯ ಹೆಮ್ಮೆಯ ಪ್ರತೀಕವಾದ ಸನಾತನ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿ ಸಮಸ್ತ ಹಿಂದೂ ಸಮಾಜಕ್ಕೆ ಅವಮಾನಿಸುವ ಮೂಲಕ ಐ ಎನ್ ಡಿ ಎ ವಿಪಕ್ಷಗಳ ಒಕ್ಕೂಟದ ಹಿಂದೂ ವಿರೋಧಿ ನಿಲುವು ಬಹಿರಂಗವಾಗಿದೆ, ತನ್ನ ಓಟ್ ಬ್ಯಾಂಕ್ ರಾಜಕೀಯಕ್ಕಾಗಿ ನಿರ್ದಿಷ್ಟ ಸಮುದಾಯದ ಓಲೈಕೆಗಾಗಿ ಹಿಂದೂ ದ್ವೇಷಿ ಹೇಳಿಕೆಯ ಮೂಲಕ ಸನಾತನ ಧರ್ಮ ಅಪಮಾನಿಸಲು ಮುಂದಾಗಿದ್ದಾರೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಹಿಂದೆ ಬ್ರಿಟಿಷರು, ಮುಸ್ಲಿಂ ಮತಾಂಧ ರಾಜರು ಮತಾಂತರ, ದಬ್ಬಾಳಿಕೆಯ ಮೂಲಕ ಸನಾತನ ಧರ್ಮದ ನಿರ್ಮೂಲನೆಗೆ ವಿಫಲ ಪ್ರಯತ್ನಕ್ಕೆ ಮುಂದಾಗಿದ್ದರು, ಇದೀಗ ಅದೇ ಮನಸ್ಥಿತಿಯಲ್ಲಿ ಉದಯ ನಿಧಿ ಈ ಹೇಳಿಕೆಯ ಮೂಲಕ ಮಹಮ್ಮದ್ ಘೋರಿ, ಘಜನಿ ವಂಶದ ಪರಂಪರೆಯನ್ನು ಮುಂದುವರಿಸುವ ಕಾಯಕದಲ್ಲಿ ತೊಡಗಿದ್ದಾರೆ.

ಸನಾತನ ಧರ್ಮ ಕೇವಲ ಒಂದು ಧರ್ಮವಾಗಿರದೇ ಭಾರತದ ಜನರ ಜೀವನ ಪದ್ಧತಿಯಾಗಿದ್ದು, ಕೇವಲ ಅಲ್ಪ ಸಂಖ್ಯಾತ ಓಲೈಕೆ, ಕ್ರೈಸ್ತ ಮತಾಂತರ ಸಂಸ್ಥೆಗಳ ಹಿಡನ್ ಅಜೆಂಡಾದ ಟೂಲ್ ಕಿಟ್ ಭಾಗವಾಗಿ ಉದಯನಿಧಿ ಬಹು ಸಂಖ್ಯಾತ ಹಿಂದೂ ದ್ವೇಷಿ ನಿಲುವು ತಾಳಿ ಓರ್ವ ಜವಾಬ್ದಾರಿ ಸಚಿವನಾಗಿ ಸಂವಿಧಾನದ ಆಶಯಗಳನ್ನು ಗಾಳಿಗೆ ತೂರಿದ್ದಾರೆ.

ಉದಯನಿಧಿ ಹೇಳಿಕೆಗೆ ಐ ಎನ್ ಡಿ ಎ ಒಕ್ಕೂಟದ ಕಾಂಗ್ರೆಸ್ ಸಹಿತ ವಿವಿಧ ಪಕ್ಷಗಳು ದಿವ್ಯ ಮೌನ ತಾಳುವ ಮೂಲಕ ಪರೋಕ್ಷವಾಗಿ ತಮ್ಮ ಸಹಮತ ಸೂಚಿಸಿ ಹಿಂದೂ ವಿರೋಧಿ ಹೇಳಿಕೆಗೆ ಸಮ್ಮತಿ ಸೂಚಿಸಿದೆ. ವಿಪಕ್ಷ ನಾಯಕರು ತಮ್ಮ ನಿಲುವನ್ನು ಕೂಡಲೇ ಸ್ಪಷ್ಟ ಪಡಿಸಬೇಕು, ತಮಿಳುನಾಡು ಸರ್ಕಾರ ಹಿಂದೂ ವಿರೋಧಿ ಹೇಳಿಕೆ ನೀಡಿದ ಉದಯನಿಧಿಯನ್ನು ಕೂಡಲೇ ಮಂತ್ರಿ ಸ್ಥಾನದಿಂದ ವಜಾಗೊಳಿಸಿ ಕಾನೂನು ಕ್ರಮ ಕೈಗೊಳ್ಳಬೇಕು, ತಪ್ಪಿದಲ್ಲಿ ಮುಂದಿನ ದಿನಗಳಲ್ಲಿ ಜನತೆ ಚುನಾವಣೆಯಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು