Categories: ಉಡುಪಿ

ಉಡುಪಿಯಲ್ಲಿ ಚುರುಕುಗೊಂಡ ಮತದಾನ ಪ್ರಕ್ರಿಯೆ: ಬೆಳಿಗ್ಗೆ 11 ಗಂಟೆಯವರೆಗೆ ಶೇ. 30.26ರಷ್ಟು ಮತದಾನ

ಉಡುಪಿ: ಜಿಲ್ಲೆಯ ಐದು ವಿಧಾನ ಸಭಾ ಕ್ಷೇತ್ರಗಳಲ್ಲಿ ಇಂದು ಬೆಳಗ್ಗೆಯಿಂದ ಮತದಾನ ಆರಂಭಗೊಂಡಿತು.  ಮತದಾರರು ಬೆಳಗ್ಗೆಯೇ ಮತಗಟ್ಟೆಗಳಿಗೆ ಆಗಮಿಸಿ ಸರತಿ ಸಾಲಿನಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು.

ಹೆಚ್ಚಿನ ಮತಗಟ್ಟೆಗಳ ಮುಂದೆ ಮತದಾರರ ಸಾಲುಗಟ್ಟಿ ನಿಂತಿರುವುದು ಕಂಡುಬಂತು. ಯಾವುದೇ ಆಹಿತಕರ ಘಟನೆ ನಡೆಯದಂತೆ ಹೆಚ್ಚಿನ ಭದ್ರತೆ ಒದಗಿಸಲಾಗಿದೆ.

ಜಿಲ್ಲೆಯಲ್ಲಿ 11 ಗಂಟೆಯವರೆಗೆ ಒಟ್ಟಾರೆ ಶೇ. 30.26ರಷ್ಟು ಮತದಾನ ಆಗಿದೆ. ಬೈಂದೂರು ವಿಧಾನಸಭಾ ಕ್ಷೇತ್ರದಲ್ಲಿ 27.06%, ಕುಂದಾಪುರ ವಿಧಾನಸಭಾ ಕ್ಷೇತ್ರದಲ್ಲಿ 32.14%, ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ 29.44 %, ಕಾಪು ವಿಧಾನಸಭಾ ಕ್ಷೇತ್ರದಲ್ಲಿ 28.5% ಹಾಗೂ ಕಾರ್ಕಳ ವಿಧಾನಸಭಾ ಕ್ಷೇತ್ರದಲ್ಲಿ 32.7% ಮತದಾನವಾಗಿದೆ.

Ashika S

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

3 hours ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

3 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

3 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

5 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

5 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

5 hours ago