ಉಡುಪಿ: ನಗರದ ನಿಟ್ಟೂರು ಬಾಳಿಗಾ ಫಿಶ್ನೆಟ್ನಲ್ಲಿ ಕೆಲಸ ಮಾಡಿಕೊಂಡಿದ್ದ ಉತ್ತರ ಕನ್ನಡ ಜಿಲ್ಲೆ ಕುಮಟಾ ತಾಲೂಕು ಶಿಳ್ಕೆ ನಿವಾಸಿ 23ವರ್ಷದ ಮಾಲತಿ ಗೋಪಾಲ ಗೌಡ ಎಂಬ ಯುವತಿಯು ಸುಮಾರು ಒಂದು ತಿಂಗಳ ಹಿಂದೆ ನಾಪತ್ತೆಯಾಗಿದ್ದಾಳೆ.
ಈವರೆಗೂ ಆಕೆಯ ಸುಳಿವು ಪತ್ತೆಯಾಗಿಲ್ಲ. 5 ಅಡಿ ಎತ್ತರ, ಸಪೂರ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಉಡುಪಿ ನಗರ ಪೊಲೀಸ್ ಠಾಣೆಯನ್ನು ಸಂಪರ್ಕಿಸುವಂತೆ ಎಂದು ಪ್ರಕಟಣೆ ತಿಳಿಸಲಾಗಿದೆ