News Karnataka Kannada
Thursday, May 02 2024
ಉಡುಪಿ

ಉಡುಪಿ: ವಿದ್ಯಾರ್ಥಿಗಳಿಗೆ ಸರ್ಕಾರಿ ಬಸ್ಸಿನ ವ್ಯವಸ್ಥೆ ಕಲ್ಪಿಸಿಕೊಡುವಂತೆ ಎಬಿವಿಪಿ ಪ್ರತಿಭಟನೆ

ABVP demands government buses for students
Photo Credit : News Kannada

ಉಡುಪಿ: ವಿದ್ಯಾರ್ಥಿಗಳಿಗೆ ಸೂಕ್ತ ಸರ್ಕಾರಿ ಬಸ್ಸಿನ ವ್ಯವಸ್ಥೆ ಕಲ್ಪಿಸಿಕೊಡುವ ಕುರಿತು ಒತ್ತಾಯಿಸಿ ಎಬಿವಿಪಿ ಸಂಘಟನೆ ನೇತೃತ್ವದಲ್ಲಿ ಇಂದು ಅಜ್ಜರಕಾಡಿನ ಹುತಾತ್ಮ ಸ್ಮಾರಕದ ಬಳಿ ಪ್ರತಿಭಟನೆ ನಡೆಸಲಾಯಿತು.

ಹಳ್ಳಿಯಿಂದ ಪಟ್ಟಣದ ಕಾಲೇಜುಗಳಿಗೆ ವಿದ್ಯಾಭ್ಯಾಸ ಮಾಡಲು ಬರುವತಂಹ ವಿದ್ಯಾರ್ಥಿಗಳಿಗೆ ಬಸ್ಸಿನ ಸಮಸ್ಯೆ ಉಂಟಾಗಿದೆ. ಏಕೆಂದರೆ ಕರ್ನಾಟಕದಲ್ಲಿ ನೂತನ ಸರ್ಕಾರವು “ಶಕ್ತಿ ಯೋಜನೆ” ಅಡಿಯಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಅಂತ ಘೋಷಿಸಿರುವುದರಿಂದ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿರುವ ಕಾರಣದಿಂದಾಗಿ ಶಾಲಾ- ಕಾಲೇಜುಗಳಿಗೆ ಬರುವಂತಹ ವಿದ್ಯಾರ್ಥಿಗಳಿಗೆ ಸಮಸ್ಯೆ ಉಂಟಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

ಸರ್ಕಾರಿ ಬಸ್ಸುಗಳು ತುಂಬಿ ತುಳುಕುತ್ತಿರುವುದರಿಂದ ಸಕಾಲದಲ್ಲಿ ತರಗತಿಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಪರೀಕ್ಷೆಗಳಿಗೆ ಹಾಜರಾಗಲು ವಿದ್ಯಾರ್ಥಿಗಳಿಗೆ ಕಷ್ಟದ ಪರಿಸ್ಥಿತಿಯನ್ನುಂಟು ಮಾಡಿದೆ. ಸಾಮಾನ್ಯವಾಗಿ ಹಳ್ಳಿಗಳಲ್ಲಿ ಸಮರ್ಪಕವಾಗಿ ಎಷ್ಟು ಸಂಖ್ಯೆಯಲ್ಲಿ ಬಸ್ಸಿನ ಸಂಖ್ಯೆ ಬೇಕೂ ಅಷ್ಟು ಸಂಖ್ಯೆಯಲ್ಲಿ ಬಸ್ಸುಗಳು ಸಂಚರಿಸುವುದಿಲ್ಲ. ಇದರಿಂದಾಗಿ ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ನಡೆದುಕೊಂಡು ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಬಸ್ಸಿನ ಸಮಸ್ಯೆಯಿಂದಾಗಿ ಕೆಲ ದಿನಗಳ ಹಿಂದೆ ಹಾವೇರಿಯಲ್ಲಿ ವಿದ್ಯಾರ್ಥಿನಿಗೆ ಬಸ್ಸನ್ನು ಹತ್ತಲು ಹೋದಾಗ ಅಪಘಾತವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆಯುತ್ತಿದ್ದಾರೆ. ಹಾಗಾಗಿ ವಿದ್ಯಾರ್ಥಿಗಳು ಶಾಲಾ-ಕಾಲೇಜಿಗೆ ತೆರಳುವ ಸಮಯದಲ್ಲಿ ಹಾಗೂ ಹಿಂತಿರುಗುವ ಸಮಯದಲ್ಲಿ ಬಸ್ಸಿನ ಸಂಖ್ಯೆಯನ್ನು ಹೆಚ್ಚಿಸಕೊಡಬೇಕು ಹಾಗೂ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಬಸ್ಸಿನ ವ್ಯವಸ್ಥೆಯನ್ನು ಕಲ್ಪಿಸಿಕೊಡಬೇಕು ಎಂದು ಎಬಿವಿಪಿ ಒತ್ತಾಯಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು