News Karnataka Kannada
Tuesday, April 30 2024
ಉಡುಪಿ

ಉಡುಪಿ: ಗ್ರಾಪಂ ವ್ಯಾಪ್ತಿಯಲ್ಲಿ ಟ್ಯಾಂಕರ್ ನೀರು ಪೂರೈಕೆಗೆ ಕ್ರಮ – ಯಶ್ ಪಾಲ್ ಸುವರ್ಣ

Action will be taken to supply tanker water in Udupi gram panchayat limits: Yashpal Suvarna
Photo Credit : News Kannada

ಉಡುಪಿ: ವಿಧಾನಸಭಾ ಕ್ಷೇತ್ರದ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ತಕ್ಷಣ ಸ್ಪಂದಿಸಿ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲು ಗ್ರಾಮ ಪಂಚಾಯತ್ ಗಳಿಗೆ ನಿರ್ದೇಶನ ನೀಡುವಂತೆ ಶಾಸಕ ಯಶ್ ಪಾಲ್ ಸುವರ್ಣ ಜಿಪಂ ಸಿಇಒಗೆ ಮನವಿ ಮಾಡಿದರು.

ಕುಡಿಯುವ ನೀರಿಗೆ ಸಂಬಂಧಿಸಿದಂತೆ ಜಿಪಂ ಸಿಇಒ ಪ್ರಸನ್ನ ಎಚ್ ಅವರೊಂದಿಗೆ ಇಂದು ಚರ್ಚೆ ನಡೆಸಿದರು. ಗ್ರಾಮೀಣ ಭಾಗದ ಜನರ ಕುಡಿಯುವ ನೀರಿನ ಸಮಸ್ಯೆಯನ್ನು ಪರಿಹರಿಸುವ ನಿಟ್ಟಿನಲ್ಲಿ ಆದ್ಯತೆಯ ಮೇರೆಗೆ ಟ್ಯಾಂಕರ್ ನೀರು ಪೂರೈಕೆಗೆ ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು ವಿಶೇಷ ಮುತುವರ್ಜಿ ವಹಿಸಿ ತಕ್ಷಣದಿಂದಲೇ ಕಾರ್ಯ ಪ್ರವೃತ್ತರಾಗುವಂತೆ ನಿರ್ದೇಶನ ನೀಡುವಂತೆ ಅವರು ತಿಳಿಸಿದರು.

ಈ ಬಗ್ಗೆ ಉಡುಪಿ ಮತ್ತು ಬ್ರಹ್ಮಾವರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳು ಕೂಡಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿ ಕುಡಿಯುವ ನೀರಿನ ಪೂರೈಕೆಗೆ ಸೂಕ್ತ ವ್ಯವಸ್ಥೆ ಮಾಡುವಂತೆ ಸಲಹೆ ನೀಡಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು