ಉಡುಪಿ

ಉಡುಪಿ: ಮಾಚೀದೇವರ ವಿಚಾರಧಾರೆಗಳನ್ನು ಅಳವಡಿಸಿಕೊಳ್ಳಿ ಎಂದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ: ಮಡಿವಾಳ ಮಾಚೀದೇವ ಅವರ ಆದರ್ಶ,ಆಲೋಚನೆ ಮತ್ತು ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವುದರೊಂದಿಗೆ ಅವರು ಯಾವ ಧ್ಯೇಯಕ್ಕಾಗಿ ಸಮಾಜದಲ್ಲಿ ಶ್ರಮಿಸಿದರು ಎಂದು ನಾವು ಅರಿತುಕೊಳ್ಳಬೇಕಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಇಂದು ನಗರದ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ ಮಡಿವಾಳ ಮಾಚೀದೇವ ಜಯಂತಿ ಕಾರ್ಯಕ್ರಮದಲ್ಲಿ ಮಾಚೀದೇವರ ಭಾವಚಿತ್ರöಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಮಾತನಾಡಿದರು.

ಒಂದು ಕಾಲದಲ್ಲಿ ಬಡವರಿಗೆ ಶಿಕ್ಷಣ ಇರಲಿಲ್ಲ. ಅಸ್ಪೃಶ್ಯತೆಯನ್ನು ಅನುಭವಿಸುತ್ತಿದ್ದರು. ಸಮಾಜದಲ್ಲಿ ಶಿಕ್ಷಣಕ್ಕೆ ಮತ್ತು ಆರೋಗ್ಯಕ್ಕೆ ಖಚಿತವಾದ ವ್ಯವಸ್ಥೆಯಿಲ್ಲದೇ ಬಳಲುತ್ತಿದ್ದರು. ಸಮಾಜದಲ್ಲಿರುವ ಬಡ ಮಕ್ಕಳಿಗೆ ಒಳ್ಳೆಯ ಶಿಕ್ಷಣ ಒದಗಿಸುವ ಮೂಲಕ ಅವರು ತಮ್ಮ ಕಾಲ ಮೇಲೆ ತಾವು ನಿಲ್ಲುವ ಹಾಗೆ ಒಳ್ಳೆಯ ಸಂಸ್ಕಾರವನ್ನು ನೀಡಬೇಕು ಎಂದರು.

ಇದೇ ಸಂದರ್ಭದಲ್ಲಿ ಮಡಿವಾಳ ಸಮುದಾಯದ ಆರ್ಥಿಕ ಅಭಿವೃದ್ಧಿಗೆ 25 ಲಕ್ಷ ರೂ. ಗಳನ್ನು ಬಿಡುಗಡೆ ಮಾಡುವ ಉದ್ದೇಶವನ್ನು ಇಟ್ಟುಕೊಂಡಿದ್ದೇವೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, 12 ನೇ ಶತಮಾನದಲ್ಲಿ ಮಡಿವಾಳ ಮಾಚೀದೇವ ಅವರು ಅಸಮಾನತೆ ಮತ್ತು ಶೋಷಣೆಯನ್ನು ತಮ್ಮ ಸಾಹಿತ್ಯದ ಮೂಲಕ ಜನರಲ್ಲಿ ಅರಿವು ಮೂಡಿಸಿದ್ದಾರೆ. ಯಾವುದೇ ಸಮುದಾಯ ವರ್ಗದವರಾದರೂ ಸಮಾಜದಲ್ಲಿ ಅವರು ಯಶಸ್ಸು ಕಾಣಬೇಕಾದರೆ, ಉತ್ತಮ ಶಿಕ್ಷಣ ವ್ಯವಸ್ಥೆ ಹೊಂದಿರಬೇಕು ಎಂದರು.

ರಜಕ ಯಾನೆ ಮಡಿವಾಳ ಸಂಘದ ಜಿಲ್ಲಾಧ್ಯಕ್ಷ ಪ್ರದೀಪ್ ಮಡಿವಾಳ ಹೆರ್ಗ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಬ್ರಹ್ಮಾವರ ತಹಶೀಲ್ದಾರ್ ರಾಜಶೇಖರ್ ಮೂರ್ತಿ, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಮಾಜದ ಮುಖಂಡರುಗಳು, ಪದಾಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಸ್ವಾಗತಿಸಿ, ಭಾರತಿ ಚಂದ್ರಶೇಖರ್ ವಂದಿಸಿದರು.

Ashika S

Recent Posts

ಕೇಸ್​ನಲ್ಲಿ ರಿಕವರಿ ಮಾಡಿದ್ದ ಅರ್ಧ ಕೆ.ಜಿ ಚಿನ್ನ ಕದ್ದ ಪೊಲೀಸ್​ ಪೇದೆ

ರಕ್ಷಕರೇ ಭಕ್ಷಕರಾದ ಘಟನೆಯೊಂದು ಕೋಲಾರದಲ್ಲಿ ನಡೆದಿದೆ . ಕಳವು ಕೇಸ್​ನಲ್ಲಿ ರಿಕವರಿ ಮಾಡಿದ್ದ 1 ಕೆಜಿ 408 ಗ್ರಾಂ ಚಿನ್ನದಲ್ಲಿ…

3 mins ago

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ: ಕಂಗನಾ ರಣಾವತ್

ಪ್ರಧಾನಿ ನರೇಂದ್ರ ಮೋದಿಯವರು ಮಣ್ಣಿನ ಮಗ, ಬಡ ಕುಟುಂಬದಲ್ಲಿ ಹುಟ್ಟಿ ದೇಶದ ಕಲ್ಯಾಣ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿದ್ದಾರೆ. ಎಂದು ಹಿಮಾಚಲ…

19 mins ago

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

47 mins ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

55 mins ago

ಕಿಯಾ ಕಾರಿಗೆ ಅಡ್ಡ ಬಂದ ಕುದುರೆ: ಸರಣಿ ಅಪಘಾತ

ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…

56 mins ago

ಹಿರಿಯಡ್ಕ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

1 hour ago