Categories: ಉಡುಪಿ

ಉಡುಪಿ: ಜ.8ರಂದು ಬಾರ್ಕೂರು ವಿದ್ಯಾಭಿವರ್ಧಿನಿ ಸಂಘದ ಅಮೃತಮಹೋತ್ಸವ ಸಮಾರಂಭ

ಉಡುಪಿ: ಬಾರ್ಕೂರು ವಿದ್ಯಾಭಿವರ್ಧಿನಿ ಸಂಘದ ಅಮೃತಮಹೋತ್ಸವ ಸಮಾರಂಭವು ಇದೇ ಜ. 8ರಂದು ಬಾರ್ಕೂರು ನ್ಯಾಶನಲ್ ಹೈಸ್ಕೂಲ್ ಮತ್ತು ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ನಡೆಯಲಿದೆ ಎಂದು ಅಮೃತಮಹೋತ್ಸವ ಸಮಿತಿ ಅಧ್ಯಕ್ಷ ಬಿ.ರಾಜರಾಮ್ ಶೆಟ್ಟಿ ಹೇಳಿದರು.

ಉಡುಪಿಯಲ್ಲಿಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ 10ಗಂಟೆಗೆ ಬಾರ್ಕೂರು ಭಂಡಾರಕೇರಿ‌ ಮಠದ ವಿದ್ಯೇಶತೀರ್ಥ ಸ್ವಾಮೀಜಿ ಸಮಾರಂಭವನ್ನು ಉದ್ಘಾಟಿಸಲಿದ್ದಾರೆ. ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಶೆಟ್ಟಿ, ಡಿಡಿಪಿಯು ಮಾರುತಿ, ಡಿಡಿಪಿಐ ಶಿವರಾಜ ಕೆ.ಎನ್., ಉದ್ಯಮಿ ಬಾರ್ಕೂರು ಸುಧಾಕರ ಶೆಟ್ಟಿ, ಎಚ್. ವಿಶ್ವನಾಥ ಹೆಗ್ಡೆ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.

ಬೆಳಿಗ್ಗೆ 11.30ಕ್ಕೆ ಹೊಸ ಶಿಕ್ಷಣ ನೀತಿ- 2020 ಕುರಿತು ಅವಲೋಕನ ನಡೆಯಲಿದೆ. ಸಂಜೆ 5ಗಂಟೆಗೆ ನಡೆಯುವ ಸಮಾರೋಪದಲ್ಲಿ ನಿವೃತ್ತ ಲೋಕಾಯುಕ್ತ ಸಂತೋಷ್ ಹೆಗ್ಡೆ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮೊದಲಾದವರು ಭಾಗವಹಿಸಲಿದ್ದಾರೆ. ಆ ಬಳಿಕ ಶಾಲಾ ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬಾರ್ಕೂರು ವಿದ್ಯಾಭಿವರ್ಧಿನಿ ಸಂಘದ ಅಧ್ಯಕ್ಷ ಬಿ. ಶಾಂತಾರಾಮ ಶೆಟ್ಟಿ, ಕಾರ್ಯದರ್ಶಿ ಬಿ. ಸೀತಾರಾಮ ಶೆಟ್ಟಿ, ಉಪಾಧ್ಯಕ್ಷ ಶೇಡಿಕೊಡ್ಲು ಎಚ್. ವಿಠಲ ಶೆಟ್ಟಿ, ಸಮಿತಿಯ ಕಾರ್ಯದರ್ಶಿ ಎನ್. ಮಂಜುನಾಥ್ ಭಟ್ ಉಪಸ್ಥಿತರಿದ್ದರು.

Sneha Gowda

Recent Posts

ಕೇಜ್ರಿವಾಲ್‌ಗೆ ಷರತ್ತು ವಿಧಿಸಿ ಜಾಮೀನು ನೀಡಿದ ಸುಪ್ರೀಂಕೋರ್ಟ್‌

ಮದ್ಯ ನೀತಿ ಪ್ರಕರಣದಲ್ಲಿ ಜೈಲು ಸೇರಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ಗೆ ಸುಪ್ರೀಂಕೋರ್ಟ್‌ ಮಧ್ಯಂತ ಜಾಮೀನು ನೀಡಿದ್ದು, ಕೆಲವು ಷರತ್ತುಗಳನ್ನು ಸಹ…

22 mins ago

ಅಶ್ಲೀಲ‌ ವಿಡಿಯೋ ಕೇಸ್: ಮೂಡಿಗೆರೆಯಲ್ಲಿ ಪ್ರಜ್ವಲ್ ಬಂಧನ

ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಹಗರಣಕ್ಕೆ ಸಂಬಂಧಿಸಿದಂತೆ ಚಿಕ್ಕಮಗಳೂರಿನಲ್ಲಿ ಪೊಲೀಸರು ಪ್ರಜ್ವಲ್ ನನ್ನು ಬಂಧಿಸಿದ್ದಾರೆ.

48 mins ago

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿಯ ಶವ ಪತ್ತೆ

ಎಸ್ಎಸ್ಎಲ್ ಸಿ ವಿದ್ಯಾರ್ಥಿನಿಯನ್ನು ಕೊಂದು ತಲೆಮರೆಸಿಕೊಂಡಿದ್ದ ಆರೋಪಿ ಪ್ರಕಾಶ್‌ ಶವವಾಗಿ ಪತ್ತೆಯಾಗಿದ್ದಾನೆ.

57 mins ago

ದಾಭೋಲ್ಕರ ಹತ್ಯೆ ಕೇಸ್ ನಲ್ಲಿ ಸನಾತನ ಸಂಸ್ಥೆಯ ನಿರಪರಾಧಿತನ ಸಾಬೀತು; ಸನಾತನ ಸಂಸ್ಥೆ ಸಂತಸ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆಯ ವಿಶೇಷ ನ್ಯಾಯಾಲಯ ಇಂದು ಇಬ್ಬರು ಆರೋಪಿಗಳನ್ನು ತಪ್ಪಿತಸ್ಥರೆಂದು ಪರಿಗಣಿಸಿ…

57 mins ago

ಕೊಲ್ಲೂರು ಪುಣ್ಯ ನದಿಗಳ ಮಾಲಿನ್ಯ: ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ದಕ್ಷಿಣ ಭಾರತದ ಪುಣ್ಯ ಕ್ಷೇತ್ರಗಳಲ್ಲಿ ಒಂದಾದ ಕೊಲ್ಲೂರಿನ ಪುಣ್ಯ ನದಿಗಳನ್ನು ಮಾಲಿನ್ಯಗೊಳಿಸುತ್ತಿರುವ, ಪರಿಸರ ನಾಶಗೊಳಿಸುತ್ತಿರುವ ಹಾಗೂ ಸರ್ಕಾರಿ ಭೂಮಿಗಳ ಅತಿಕ್ರಮಣದ…

1 hour ago

ಪ್ರವೀಣ್ ನೆಟ್ಟಾರು ಹತ್ಯೆ ಕೇಸ್; ಪ್ರಮುಖ ಆರೋಪಿ ಬಂಧನಕ್ಕೆ ಪತ್ನಿ ನೂತನ ಸಂತಸ

ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರ್ ಹತ್ಯೆ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಪ್ರಮುಖ ಆರೋಪಿ ಮುಸ್ತಫಾ ಪೈಚಾರನ್ನ ಎನ್‌ಐಎ ಅಧಿಕಾರಿಗಳು ಬಂಧಿಸಿದ್ದು, ಮುಸ್ತಫಾ…

1 hour ago