Categories: ಉಡುಪಿ

ಉಡುಪಿ: ಕಾರ್ಮಿಕರ ಹಿತರಕ್ಷಣೆಗೆ ಬಿಜೆಪಿ ಸರಕಾರ ಬದ್ಧ – ಯಶ್ ಪಾಲ್ ಸುವರ್ಣ

ಉಡುಪಿ: ಕಾರ್ಮಿಕ ವರ್ಗದ ಶ್ರಮದ ಫಲವಾಗಿ ಇಂದು ಬೃಹತ್ ಕೈಗಾರಿಕೆಗಳು ಯಶಸ್ವಿಯಾಗಿ ಕಾರ್ಯಾಚರಣೆ ನಡೆಸಿ ದೇಶದ ಆರ್ಥಿಕತೆಗೆ ಶಕ್ತಿ ತುಂಬುತ್ತಿದೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಮತ್ತು ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಕಾರ್ಮಿಕರ ಏಳಿಗೆಗಾಗಿ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸುವ ಮೂಲಕ ಕಾರ್ಮಿಕ ವರ್ಗದ ಹಿತರಕ್ಷಣೆಗೆ ಬಿಜೆಪಿ ಸರ್ಕಾರ ಬದ್ಧತೆ ಮೆರೆದಿದೆ. ಉಡುಪಿ ಕ್ಷೇತ್ರದಲ್ಲಿ ಹೊಸ ಕೈಗಾರಿಕೆಗಳ ಸ್ಥಾಪನೆಗೆ ವಿಶೇಷ ಪ್ರೋತ್ಸಾಹ ನೀಡಿ ಉದ್ಯೋಗ ಸೃಷ್ಟಿಸುವುದಾಗಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಹೇಳಿದರು.

ಮಣಿಪಾಲ ಭಾಗದ ವಿವಿಧ ಗಾರ್ಮೆಂಟ್ಸ್ ಹಾಗೂ ಕೈಗಾರಿಕಾ ಘಟಕಗಳಿಗೆ ಶಾಸಕ ರಘುಪತಿ ಭಟ್ ರವರೊಂದಿಗೆ ಭೇಟಿ ನೀಡಿ ಕಾರ್ಮಿಕರಲ್ಲಿ ಮತಯಾಚನೆ ಮಾಡಿದರು.

ಶಾಸಕ ರಘುಪತಿ ಭಟ್ ಮಾತನಾಡಿ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ರನ್ನು ಗೆಲ್ಲಿಸಿ ಬಿಜೆಪಿ ಸರ್ಕಾರದ ಮೂಲಕ ಕ್ಷೇತ್ರದ ಅಭಿವೃದ್ಧಿಗೆ ಕೈ ಕೊಡಿಸುವಂತೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ನಗರ ಸಭಾ ಸದಸ್ಯರಾದ ಮಂಜುನಾಥ್‌ ಮಣಿಪಾಲ್‌ ,ಕಲ್ಪನಾ‌ ಸುಧಾಮ, ಮಾಜಿ ನಗರಸಭಾ ಸದಸ್ಯ ನರಸಿಂಹ ನಾಯಕ್ ಡಾ. ಬಾಲಕೃಷ್ಣ ಮದ್ದೋಡಿ, ಸತೀಶ್ ಸಾಲ್ಯಾನ್ ,ಆಲ್ವಿನ್ ಡಿಸೋಜ ಮೊದಲಾದವರು ಉಪಸ್ಥಿತರಿದ್ದರು.

Ashika S

Recent Posts

ಭೂದೇವಿ ಸಮೇತ ಶ್ರೀಲಕ್ಷ್ಮಿವರಾಹಸ್ವಾಮಿಗೆ ಅಭಿಷೇಕ

ವರಹಾ ಜಯಂತಿಯ ಅಂಗವಾಗಿ ಕೃ?ರಾಜಪೇಟೆ ತಾಲ್ಲೂಕಿನ ಕಲ್ಲಹಳ್ಳಿಯ ಭೂದೇವಿ ಸಮೇತ ಶ್ರೀಲಕ್ಷ್ಮಿ ಭೂವರಾಹಸ್ವಾಮಿಯ ಶಿಲಾಮೂರ್ತಿಗೆ ವಿಶೇ? ಅಭಿ?ಕ ನಡೆಯಿತಲ್ಲದೆ, ಸ್ವಾಮಿಯ…

6 hours ago

ನನ್ನ ವಿರುದ್ಧ ದೇವರಾಜೇಗೌಡ ಮಾಡಿರುವ ಆಪಾದನೆಗಳು ಆಧಾರ ರಹಿತ: ಡಿಕೆ ಶಿವಕುಮಾರ್

ಹಾಸನ ವಿಡಿಯೋ ಪೆನ್​ಡ್ರೈವ್​ ಸೂತ್ರಧಾರಿ ಡಿಕೆ ಶಿವಕುಮಾರ್ ಎಂದು ಬಿಜೆಪಿ ಮುಖಂಡ, ವಕೀಲ ದೇವರಾಜೇಗೌಡ ಗಂಭೀರ ಆರೋಪ ಮಾಡಿ ಆಡಿಯೋವೊಂದನ್ನು…

7 hours ago

ರಾಜ್ಯದ ಹಲವೆಡೆ ಮುಂದಿನ 5 ದಿನಗಳ ಕಾಲ‌ ಗುಡುಗು ಸಹಿತ ಮಳೆ ಸಾಧ್ಯತೆ

ರಾಜ್ಯದ ಹಲವೆಡೆ ಇಂದಿನಿಂದ ಮೇ 11ರವರೆಗೆ ವರುಣ ಆಗಮನ ಆಗುವ ಮುನ್ಸೂಚನೆ. ಹಾಗೂ ಮುಂದಿನ 5 ದಿನಗಳ ಕಾಲ‌ ಗುಡುಗು…

7 hours ago

ಬೀದರ್ ಮಾರುಕಟ್ಟೆಯಲ್ಲಿ ಎಲ್ಲಿ ನೋಡಿದರು ಮಾವಿನ ಹಣ್ಣಿನ ದರ್ಬಾರ್‌

ಯುಗಾದಿ ಮುಗಿಯುತ್ತಿದ್ದಂತೆ ಎಲ್ಲೆಡೆ ಮಾವಿನ ಹಣ್ಣುಗಳ ದರ್ಬಾರ ಕಂಡುಬರುತ್ತಿದೆದೆ. ಮಾರುಕಟ್ಟೆಗೆ ಮಾವಿನಕಾಯಿ ಹೆಚ್ಚಾಗಿ ಬರುತ್ತಿದೆ. ಸಾಲಾಗಿ ಜೋಡಿಸಿಟ್ಟ ಮಾವಿನ ಹಣ್ಣು…

7 hours ago

ಬಾಲಕಿ ಮೇಲೆ 2 ರಾಟ್‌ವೀಲರ್ ನಾಯಿಗಳಿಂದ ದಾಳಿ: ಮಾಲೀಕ ಅರೆಸ್ಟ್

ಎರಡು ರಾಟ್‌ವೀಲರ್ ನಾಯಿಗಳು ಐದು ವರ್ಷದ ಬಾಲಕಿ ಮೇಲೆ ದಾಳಿ ಮಾಡಿದ ಘಟನೆ ಚೆನ್ನೈನ ಥೌಸಂಡ್ ಲೈಟ್ಸ್ ಪ್ರದೇಶದ ಸಾರ್ವಜನಿಕ…

8 hours ago

ಬೀದರ್: ಬಿಸಿಲಿನ ಝಳಕ್ಕೆ ಚುನಾವಣೆ ಸಿಬ್ಬಂದಿ ತತ್ತರ

ಮಂಗಳವಾರ ನಡೆಯಲಿರುವ ಲೋಕಸಭೆ ಚುನಾವಣೆಗೆ ಚುನಾವಣೆ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದ್ದು, ಸೋಮವಾರ ಮಧ್ಯಾಹ್ನದಿಂದಲೇ ಕರ್ತವ್ಯ ನಿರತ ಸಿಬ್ಬಂದಿ ಮತಗಟ್ಟೆಗೆ…

8 hours ago