ಉಡುಪಿ: ಬ್ಲಾಕ್ ಕಾಂಗ್ರೆಸ್ ಸಮಿತಿಯ ನೇತೃತ್ವದಲ್ಲಿ ಪರ್ಕಳದಲ್ಲಿ ನಡೆದ ಉಡುಪಿ ವಿಧಾನಸಭಾ ಕ್ಷೇತ್ರದ ಕರಾವಳಿ ಪ್ರಜಾಧ್ವನಿ ಯಾತ್ರೆ ಸಮಾವೇಶದಲ್ಲಿ ಸಗ್ರಿ ವಾರ್ಡಿನ ಬಿಜೆಪಿ ಪಕ್ಷದ ಸದಸ್ಯರಾದ ಶೋಭಾ ಬೇಕಲ್ ಅವರು ಕಾಂಗ್ರೆಸ್ ಪಕ್ಷದ ಸಿದ್ಧಾಂತವನ್ನು ಒಪ್ಪಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷ ಬಿ ಎಲ್ ಶಂಕರ್, ವಿಧಾನಪರಿಷತ್ ಸದಸ್ಯ ಮಂಜುನಾಥ್ ಭಂಡಾರಿ, ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್, ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ಗೀತಾ ವಾಗ್ಲೆ ಇದ್ದರು