ಉಡುಪಿ: ಕಾಂಗ್ರೆಸ್ ಕಾರ್ಯಕರ್ತರು ಒಗ್ಗಟ್ಟಾಗಿ ಮನಸ್ಸು ಮಾಡಿದ್ರೆ ಕಾಂಗ್ರೆಸ್ ಅನ್ನು ಯಾರಿಂದಲೂ ಸೋಲಿಸಲು ಸಾಧ್ಯವಿಲ್ಲ ಎಂದು ಉಡುಪಿ ಕ್ಷೇತ್ರದ ಅಭ್ಯರ್ಥಿ ಪ್ರಸಾದ್ ರಾಜ್ ಕಾಂಚನ್ ಹೇಳಿದರು.
ವಿಧಾನ ಸಭಾ ಚುನಾವಣೆ ಪೂರ್ವಭಾವಿಯಾಗಿ ತೆಂಕನಿಡಿಯೂರ್ ವಾರ್ಡ್ ನಲ್ಲಿ ಕಾಂಗ್ರೆಸ್ ಮುಖಂಡರಾದ ಸದಾಶಿವ ಕಟ್ಟೆಗುಡ್ಡೆ ನೇತೃತ್ವದಲ್ಲಿ ಕಾಂಗ್ರೆಸ್ ಬ್ಲಾಕ್ ಮಟ್ಟದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಸಭೆಯಲ್ಲಿ ರಾಜ್ಯ ಸಂವಹನ ವಿಭಾಗದ ಮುಖ್ಯಸ್ಥ ಅಮೃತ ಶೆಣೈ, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಕಾಂಗ್ರೆಸ್ ನಾಯಕರಾದ ಪ್ರಖ್ಯಾತ್ ಶೆಟ್ಟಿ ರವಿರಾಜ್, ಮಮತಾ ಶೆಟ್ಟಿ, ಧನಂಜಯ್ ಕುಂದರ್, ಕೀರ್ತಿ ಶೆಟ್ಟಿ , ಗೋಪಾಲಕೃಷ್ಣ ಶೆಟ್ಟಿ, ನಾಗೇಶ್ ಉದ್ಯಾವರ, ಮೀನಾ ಪಿಂಟೊ, ಯತೀಶ್ ಕರ್ಕೇರ, ಗಣೇಶ್ ನೆರ್ಗಿ ಉಪಸ್ಥಿತರಿದ್ದರು.