Categories: ಉಡುಪಿ

ಉಡುಪಿ: ಅದಾನಿ ವ್ಯವಹಾರದ ವಿರುದ್ಧ ಹಿಂಡನ್ ಬರ್ಗ್ ವರದಿ, ಸಮಗ್ರ ತನಿಖೆಗೆ ಕಾಂಗ್ರೆಸ್ ಒತ್ತಾಯ

ಉಡುಪಿ: ಅದಾನಿ ವ್ಯವಹಾರದ ವಿರುದ್ಧ ಹಿಂಡನ್ ಬರ್ಗ್ ಪ್ರಕಟಿಸಿರುವ ವರದಿಯ ಸಮಗ್ರ ತನಿಖೆಗೆ ನಡೆಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ಇಂದು ಉಡುಪಿ ಅಜ್ಜರಕಾಡುವಿನ ಎಲ್‌ಐಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ನೂರಾರು ಸಂಖ್ಯೆಯಲ್ಲಿ ಜಮಾಯಿಸಿದ್ದ ಕಾರ್ಯಕರ್ತರು ಅದಾನಿ ಸಂಸ್ಥೆ ಹಾಗೂ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಬಳಿಕ ಮಾತನಾಡಿದ ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಅವರು, ಗೌತಮ್ ಅದಾನಿ ಕೇಂದ್ರ ಸರಕಾರದ ನೆರವು ಪಡೆದು ಬಡಜನರ ಹಣವನ್ನು ದೋಚಿದ್ದಾರೆ. ಕಂಪೆನಿಯ ವ್ಯವಹಾರದಲ್ಲಿ ವಂಚನೆ ಎಸಗಿ ದೇಶದ ಜನರಿಗೆ ದ್ರೋಹ ಎಸಗಿದ್ದಾರೆ. ಹಾಗಾಗಿ ಅದಾನಿ ಸಮೂಹ ಸಂಸ್ಥೆಯ ವ್ಯವಹಾರದ ಕುರಿತು ಹಿಂಡನ್ ಬರ್ಗ್ ಪ್ರಕಟಿಸಿರುವ ವರದಿ ಸಮಗ್ರ ತನಿಖೆ‌ ನಡೆಸಬೇಕು ಎಂದು ಆಗ್ರಹಿಸಿದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ. ಗಫೂರ್ ಮಾತನಾಡಿ, ಅದಾನಿ ಸೇರಿದಂತೆ ಈವರೆಗೆ ದೇಶದ 29 ಮಂದಿ ಉದ್ಯಮಿಗಳು ಬ್ಯಾಂಕ್‌ಗಳಿಂದ 10 ಲಕ್ಷ ಕೋಟಿ ರೂ. ಹಣವನ್ನು ದೋಚಿಸಿದ್ದಾರೆ. ಆ ಮೂಲಕ ದೇಶದಲ್ಲಿ ಒಂದು ರೀತಿಯ ಅರಾಜಕತೆ ಸೃಷ್ಟಿಸಿದ್ದಾರೆ. ದೇಶದ ಹಣ ದೋಚುವುದು ಕೂಡ ಒಂದು ರೀತಿಯ ಉಗ್ರವಾದ. ಈ ಬಗ್ಗೆ ಸರಕಾರ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಪ್ಯಾನಲಿಸ್ಟ್ ವರೋನಿಕಾ ಕರ್ನೆಲಿಯೋ, ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಕುಶಲ್ ಶೆಟ್ಟಿ, ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್, ಮುಖಂಡರಾದ ಹರೀಶ್ ಕಿಣಿ, ಅಣ್ಣಯ್ಯ ಶೇರಿಗಾರ್, ಪ್ರಖ್ಯಾತ್ ಶೆಟ್ಟಿ, ನರಸಿಂಹ ಮೂರ್ತಿ, ದಿನೇಶ್ ಪುತ್ರನ್ ಮೊದಲಾದವರು ಉಪಸ್ಥಿತರಿದ್ದರು.

Ashika S

Recent Posts

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಸೈಬರ್ ವಂಚನೆ: ಓರ್ವ ವಶಕ್ಕೆ

ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…

1 second ago

ಯಾರನ್ನು ಬಂಧಿಸಬೇಕೋ ಅವರನೆಲ್ಲಾ ಬಂಧಿಸಿ ಜೈಲಿಗೆ ತಳ್ಳಿ ಎಂದು ಮೋದಿಗೆ ಚಾಲೆಂಜ್‌ ಹಾಕಿದ ಕೇಜ್ರಿವಾಲ್

ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…

10 mins ago

ಜುಲೈ 1ರಿಂದ ಮೂರು ಹೊಸ ಕ್ರಿಮಿನಲ್ ಕಾನೂನು ಜಾರಿ

ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…

31 mins ago

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

55 mins ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

1 hour ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

2 hours ago