Categories: ಉಡುಪಿ

ಉಡುಪಿ: ಆತ್ರಾಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಉಡುಪಿ: ಜಿಲ್ಲೆಯಲ್ಲಿ ರಸ್ತೆಯ ದುರಾವಸ್ಥೆಯಿಂದ ಜನರು ಪ್ರಾಣ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣ ಆಗಿದೆ. ಆದರೆ, ಹೆದ್ದಾರಿಯನ್ನು ದುರಸ್ತಿ ಮಾಡಬೇಕಾದ ಉಡುಪಿ- ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರು ಅಡಗಿ ಕುಳಿತಿದ್ದಾರೆ. ನಮ್ಮ ಸಂಸದೆಯನ್ನು ಹುಡುಕಿಕೊಡಿಯೆಂದು ಪೊಲೀಸ್ ಠಾಣೆಗೆ ದೂರು ನೀಡಬೇಕಾದ ಅನಿವಾರ್ಯತೆ ಸೃಷ್ಟಿಯಾಗಿದೆ ಎಂದು ಮಾಜಿ ಸಚಿವ ವಿನಯಕುಮಾರ್ ಸೊರಕೆ ಟೀಕಿಸಿದರು.

ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ದುರಸ್ತಿಗೊಳಿಸುವಂತೆ ಆಗ್ರಹಿಸಿ ಹಾಗೂ ಬಿಜೆಪಿ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ನೇತೃತ್ವದಲ್ಲಿ ನಗರದಲ್ಲಿ ಇಂದು ಹಮ್ಮಿಕೊಳ್ಳಲಾದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದರು.

ನಮ್ಮ ಸಂಸದೆಗೆ ಸತ್ತವರ ಧರ್ಮ ನೋಡಿ ರಾಜಕೀಯ ಮಾಡುವುದು ಬಿಟ್ಟರೆ, ಜನರ ಸಮಸ್ಯೆ ಆಲಿಸುವ ಸೌಜನ್ಯ ಕೂಡ ಇಲ್ಲ‌. ನಾವು ಏನು ಅನ್ಯಾಯ ಮಾಡಿದ್ದೇವೆ. ನಾವೇನಾದರೂ ಪಾಕಿಸ್ತಾನದಲ್ಲಿ ಇದ್ದೇವಾ ಎಂದು ಪ್ರಶ್ನಿಸಿದರು.

40 ಪರ್ಸೆಂಟ್ ಕಮಿಷನ್, 70ಪರ್ಸೆಂಟ್ ಬೆಲೆ ಏರಿಕೆ, ನಿರುದ್ಯೋಗ ಬಿಜೆಪಿ ಸರ್ಕಾರದ ಕೊಡುಗೆ. ಸಂವಿಧಾನ, ಪ್ರಜಾಪ್ರಭುತ್ವ, ಜಾತ್ಯಾತೀತತೆಯನ್ನು ಕಿತ್ತು ಹಾಕುವ ಹುನ್ನಾರ ದೇಶಾದ್ಯಂತ ನಡೆಯುತ್ತಿದೆ ಎಂದು ವಾಗ್ದಾಳಿ ನಡೆಸಿದರು.

ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಉತ್ತರ ವಲಯದ ಅಧ್ಯಕ್ಷ ಸಂತೋಷ್ ಕುಲಾಲ್ ಪಕ್ಕಾಲು, ಮುಖಂಡರಾದ ಚರಣ್ ವಿಠ್ಠಲ್ ಕುದಿ, ಇಸ್ಮಾಯಿಲ್ ಆತ್ರಾಡಿ, ಶಶಿಧರ್ ಜತನ್ನ, ಉಮೇಶ್ ಕಾಂಚನ್, ಲಕ್ಷ್ಮೀ ನಾರಾಯಣ ಪ್ರಭು, ಗುರುದಾಸ್ ಭಂಡಾರಿ, ದಿಲೀಪ್ ಹೆಗ್ಡೆ, ಕಿರಣ್ ಹೆಗ್ಡೆ, ಸಂತೋಷ್ ಶೆಟ್ಟಿ, ಸೌರಭ್ ಭಲ್ಲಾಳ್ ಮೊದಲಾದವರು ಉಪಸ್ಥಿತರಿದ್ದರು.

ಆತ್ರಾಡಿಯಲ್ಲಿ ರಸ್ತೆ ತಡೆದು ಪ್ರತಿಭಟನೆ

ಉಡುಪಿ ಕಾರ್ಕಳದ ಮುಖ್ಯರಸ್ತೆ ಪರ್ಕಳದಿಂದ ಗುಡ್ಡೆಯಂಗಡಿವರೆಗಿನ ರಾಷ್ಟ್ರೀಯ ಹೆದ್ದಾರಿಯನ್ನು ದುರಸ್ತಿಗೊಳಿಸುವಂತೆ ಆಗ್ರಹಿಸಿ ಕಾಪು ಬ್ಲಾಕ್ ಕಾಂಗ್ರೆಸ್ ಸಮಿತಿ ಉತ್ತರ ವಲಯದ ನೇತೃತ್ವದಲ್ಲಿ ಇಂದು ಆತ್ರಾಡಿಯಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಲಾಯಿತು‌.
ಕಾಂಗ್ರೆಸ್‌ ನ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿ ಬಿಜೆಪಿ ಸರಕಾರದ ವಿರುದ್ದ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಕೆಲಕಾಲ ಹೆದ್ದಾರಿ ತಡೆದು ಜಿಲ್ಲಾಡಳಿತ, ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ರಸ್ತೆಯನ್ನು‌ ಶೀಘ್ರವೇ ದುರಸ್ತಿಗೊಳಿಸದಿದ್ದರೆ, ಸಂಸದರು, ಶಾಸಕರ ಕಚೇರಿಗೆ ಮುತ್ತಿಗೆ ಹಾಕುತ್ತೇವೆ ಎಂದು ಎಚ್ಚರಿಕೆ ನೀಡಿದರು. ರಸ್ತೆಯನ್ನು ಕೂಡಲೇ ದುರಸ್ತಿಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Gayathri SG

Recent Posts

ಕಾಂಗ್ರೆಸ್ ಸರ್ಕಾರದ ಒಂದು ವರ್ಷ, ಕೊಲೆಗಡುಕರಿಗೆ ಹರ್ಷ: ಲೇವಡಿ ಮಾಡಿದ ಆರ್.‌ ಅಶೋಕ್‌

ಒಂದು ವರ್ಷ ಅಧಿಕಾರ ಪೂರೈಸುವ ಹೊತ್ತಿಗೆ ನೂರೊಂದು ಸಮಸ್ಯೆಗಳನ್ನು ತಂದುಕೊಂಡಿದೆ ಎಂದು ಪ್ರತಿಪಕ್ಷ ನಾಯಕ ಆರ್.‌ ಅಶೋಕ್‌ ರಾಜ್ಯ ಸರ್ಕಾರದ…

12 mins ago

ಚಿಕ್ಕಮಗಳೂರು: ಫಲಾನುಭವಿಗಳಿಗೆ ಯಶಸ್ವಿನಿ ಕಾರ್ಡ್ ವಿತರಣೆ

ಆಕಸ್ಮಿಕವಾಗಿ ಸಂಭವಿಸುವ ಕಾಯಿಲೆಗಳಿಗೆ ಸೂಕ್ತ ಚಿಕಿತ್ಸೆ ಪಡೆದುಕೊ ಳ್ಳುವ ಸಲುವಾಗಿ ಸರ್ಕಾರ ಜಾರಿಗೊಳಿಸಿರುವ ಯಶಸ್ವಿನಿ ಯೋಜನೆಯನ್ನು ಸಮರ್ಪಕವಾಗಿ ಬಳಸಿಕೊಳ್ಳ ಬೇಕು…

33 mins ago

ರೈತರಿಗೆ ಪರಿಹಾರ ನೀಡುವಲ್ಲಿ ತಾರತಮ್ಯ ನಿಲ್ಲಿಸಿ ಪರಿಹಾರ ನೀಡಿ: ರಮೇಶ ಹೂಗಾರ ಮನವಿ

ರಾಜ್ಯದಲ್ಲಿ ಭೀಕರ ಬರಗಾಲದಿಂದ ಕಂಗೆಟ್ಟಿರುವ ರೈತರಿಗೆ ರಾಜ್ಯ ಸರಕಾರ ಅಲ್ಪ ಮಟ್ಟಿಗೆ ಪರಿಹಾರ ನೀಡಿ ನಿಟ್ಟುಸಿರು ಬಿಡುವಂತೆ ಮಾಡಿದೆ.ಆದರೆ ಅಫಜಲಪುರ…

54 mins ago

ಅಂಜಲಿ ಕೊಲೆ ಪ್ರಕರಣ ಸಿಐಡಿಗೆ, ನೇಹಾ ಕೇಸ್​ ಸಿಬಿಐಗೆ ಕೊಡಲ್ಲ: ಗೃಹ ಸಚಿವ

ಹುಬ್ಬಳ್ಳಿಯ ನೇಹಾ ಹಿರೇಮಠ್ ಹತ್ಯೆ ಪ್ರಕರಣ ಬೆನ್ನಲ್ಲೇ ಇದೀಗ ಅಂಜಲಿ ಅಂಬಿಗೇರ ಕೊಲೆ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದೆ. ಈ ಬಗ್ಗೆ…

1 hour ago

ಡ್ರಾಪ್​ ಕೊಡುವ ನೆಪದಲ್ಲಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನ

ಚಿಕ್ಕಬಳ್ಳಾಪುರ ತಾಲೂಕಿನ ಪೆರೇಸಂದ್ರ ಠಾಣಾ ವ್ಯಾಪ್ತಿಯಲ್ಲಿ ಯುವಕನೋರ್ವ ಡ್ರಾಪ್​ ಕೊಡುವ ನೆಪದಲ್ಲಿ  ತಡರಾತ್ರಿ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ…

1 hour ago

ಇಬ್ರಾಹಿಂ ರೈಸಿ ನಿಧನ: ನಾಳೆ ಭಾರತದಲ್ಲಿ ಒಂದು ದಿನದ ‘ಶೋಕಾಚರಣೆ’

ಹೆಲಿಕಾಪ್ಟರ್ ದುರಂತದಲ್ಲಿ ನಿಧನರಾದ ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ನಿಧನಕ್ಕೆ ನಾಳೆ (ಮೇ 21) ಭಾರತದಲ್ಲಿ ಒಂದು ದಿನದ ರಾಜ್ಯ…

1 hour ago