News Karnataka Kannada
Sunday, May 05 2024
ಉಡುಪಿ

ಉಡುಪಿ: ಫೆ.5 ರಿಂದ ಕಾಂಗ್ರೆಸ್ ಕರಾವಳಿ- ಮಲೆನಾಡು ಪ್ರಜಾಧ್ವನಿ ಯಾತ್ರೆ ಆರಂಭ

Udupi: Congress to begin Prajadhvani Yatra from February 5
Photo Credit : News Kannada

ಉಡುಪಿ: ಇದೇ ಬರುವ ಫೆ. 5ರಿಂದ ಉಡುಪಿ ಸಹಿತ ಐದು ಜಿಲ್ಲೆಗಳಲ್ಲಿ ಕಾಂಗ್ರೆಸ್ ಕರಾವಳಿ- ಮಲೆನಾಡು ಪ್ರಜಾಧ್ವನಿ ಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಹಿರಿಯ ಕಾಂಗ್ರೆಸ್ ಮುಖಂಡ ಆರ್.ವಿ.ದೇಶಪಾಂಡೆ ಹೇಳಿದರು.

ಉಡುಪಿ‌ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.5ರಂದು ಸುಳ್ಯ ಕ್ಷೇತ್ರದಲ್ಲಿ ಯಾತ್ರೆಗೆ ಚಾಲನೆ ನೀಡಲಾಗುವುದು. ಬಳಿಕ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗಳ 26 ಕ್ಷೇತ್ರಗಳಲ್ಲಿ ಯಾತ್ರೆ ಸಂಚರಿಸಲಿವೆ.

ಈ ಯಾತ್ರೆಯ ಪ್ರಯುಕ್ತ ಪ್ರತಿ ಕ್ಷೇತ್ರದಲ್ಲಿ ಸಭೆ, ಮುಖಂಡರೊಂದಿಗೆ ಅಭಿವೃದ್ಧಿ ಬಗ್ಗೆ ಚರ್ಚೆ ಹಾಗೂ ಜನಾಭಿಪ್ರಾಯವನ್ನು ಪಡೆದುಕೊಳ್ಳಲಾಗುವುದು ಎಂದರು.

ಮೊದಲ ಹಂತದಲ್ಲಿ ಫೆ.6ರಂದು ಮೂಡಬಿದ್ರೆ, 7ರಂದು ಕಾಪು, 8ರಂದು ಕುಂದಾಪುರ, 9ರಂದು ಶೃಂಗೇರಿಯಲ್ಲಿ ಯಾತ್ರೆ ನಡೆಯಲಿದೆ ಎಂದು ತಿಳಿಸಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು