News Karnataka Kannada
Sunday, May 05 2024
ಉಡುಪಿ

ಉಡುಪಿ: ಡಿ. 8ರಿಂದ 10ರವರೆಗೆ ಸುಣ್ಣಾರಿ ಎಕ್ಸಲೆಂಟ್ ಕ್ರೀಡಾಂಗಣದಲ್ಲಿ ವಾಲಿಬಾಲ್ ಪಂದ್ಯಾಟ

Udupi: D. State-level volleyball tournament to be held at Sunnari Excellent Stadium from 8th to 10th
Photo Credit : News Kannada

ಉಡುಪಿ: ಪದವಿ ಪೂರ್ವ ಶಿಕ್ಷಣ ಇಲಾಖೆ, ಎಕ್ಸಲೆಂಟ್ ಪದವಿ ಪೂರ್ವ ಕಾಲೇಜು ಮತ್ತು ಫ್ರೌಢಶಾಲೆ ಸುಣ್ಣಾರಿ ಕುಂದಾಪುರ, ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ ಹಾಗೂ ಎಂ.ಎಂ. ಹೆಗ್ಡೆ ಎಜುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ಇದರ ಸಂಯುಕ್ತ ಆಶ್ರಯದಲ್ಲಿ ಪದವಿ ಪೂರ್ವ ವಿದ್ಯಾರ್ಥಿಗಳ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟವು ಇದೇ ಬರುವ ಡಿ. 8ರಿಂದ 10ರ ವರೆಗೆ ಕುಂದಾಪುರದ ಸುಣ್ಣಾರಿ ಎಕ್ಸಲೆಂಟ್ ಕಾಲೇಜು ಕ್ರೀಡಾಂಗಣದಲ್ಲಿ ನಡೆಯಲಿದೆ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಮಾರುತಿ ಹೇಳಿದರು.

ಉಡುಪಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಪಂದ್ಯಾಟದಲ್ಲಿ ರಾಜ್ಯದ 33 ಜಿಲ್ಲೆಗಳಿಂದ ಒಟ್ಟು 66 ಬಾಲಕ ಹಾಗೂ ಬಾಲಕಿಯರ ತಂಡಗಳು ಭಾಗವಹಿಸಲಿವೆ. 19ರ ವಯೋಮಿತಿಯ ಬಾಲಕ, ಬಾಲಕಿಯರ ರಾಷ್ಟ್ರಮಟ್ಟಕ್ಕೆ ತಂಡವನ್ನು ಇಲ್ಲಿಯೇ ಆಯ್ಕೆ ಮಾಡಲಾಗುತ್ತದೆ ಎಂದರು.

ಸುಜ್ಞಾನ್ ಎಜುಕೇಶನ್ ಟ್ರಸ್ಟ್ ನ ಅಧಕ್ಷರು ಆಗಿರುವ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಡಾ ರಮೇಶ್ ಶೆಟ್ಟಿ ಮಾತನಾಡಿ, ಕ್ರೀಡಾಪಟುಗಳಿಗೆ ಊಟೋಪಚಾರ, ಬಾಲಕ, ಬಾಲಕಿಯರಿಗೆ ಪ್ರತ್ಯೇಕ ವಸತಿ ವ್ಯವಸ್ಥೆ ಮಾಡಲಾಗಿದೆ. 7 ಕ್ರೀಡಾಂಗಣವನ್ನು ಸಜ್ಜುಗೊಳಿಸಲಾಗಿದ್ದು, ಮೊದಲ ದಿನ ರಾತ್ರಿಯೂ ಪಂದ್ಯಾಟ ನಡೆಯಲಿದೆ ಎಂದು ಮಾಹಿತಿ ನೀಡಿದರು.
ಸುಜ್ಞಾನ ಎಜುಕೇಶನ್ ಟ್ರಸ್ಟ್ ಕೋಶಾಧಿಕಾರಿ ಭರತ್ ಶೆಟ್ಟಿ ಮಾತನಾಡಿ, ಡಿ. 8ರಂದು ಮಧ್ಯಾಹ್ನ 3ಗಂಟೆಗೆ ಕುಂದಾಪುರ ಬೋರ್ಡ್ ಹೈಸ್ಕೂಲ್ ನಿಂದ ಪುರಮೆರವಣಿಗೆ ಜರುಗಲಿದೆ. ಅಂದು ಸಂಜೆ 5.30ಕ್ಕೆ ಎಕ್ಸಲೆಂಟ್ ಕ್ರೀಡಾಂಗಣದಲ್ಲಿ ಉದ್ಘಾಟನಾ ಸಮಾರಂಭ ನೆರವೇರಲಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ವಾಲಿಬಾಲ್ ಪಂದ್ಯಾಟಕ್ಕೆ ಚಾಲನೆ ನೀಡಲಿದ್ದಾರೆ. ಶಾಸಕ ಹಾಲಾಡಿ ಶ್ರೀನಿವಾಸ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ ಎಂದರು.

ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಎಂ.ಎಂ. ಹೆಗ್ಡೆ ಎಜುಕೇಶನಲ್ ಆ್ಯಂಡ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಎಂ. ಮಹೇಶ್ ಹೆಗ್ಡೆ, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಭೋಜೆಗೌಡ ಮೊದಲಾದವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ‌. ಡಿ.10ರಂದು ಸಮಾರೋಪ ಕಾರ್ಯಕ್ರಮ ಜರಗಲಿದೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಪ.ಪೂ. ಶಿಕ್ಷಣ ಇಲಾಖೆ ಕ್ರೀಡಾ ಸಂಯೋಜಕ ದಿನೇಶ್ ಕುಮಾರ್, ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಕಾರ್ಯದರ್ಶಿ ಮಂಜುನಾಥ್ ಜೋಗಿ, ಪ.ಪೂ. ಶಿಕ್ಷಣ ಇಲಾಖೆಯ ಗಿರೀಶ್ ಕುಲಕರ್ಣಿ, ನಮನ್ ಗೋಕರ್ಣ, ದೈಹಿಕ‌ ಶಿಕ್ಷಣ ನಿರ್ದೇಶಕ ಸತೀಶ್ ಶೆಟ್ಟಿ ಇದ್ದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು