News Karnataka Kannada
Sunday, April 28 2024
ಉಡುಪಿ

ಉಡುಪಿ: ಪೌರ ಕಾರ್ಮಿಕರಿಗೆ ಸೌಲಭ್ಯಗಳ ಬಗ್ಗೆ ಮಾಹಿತಿ ನೀಡಿ ಎಂದ ಜಿಲ್ಲಾಧಿಕಾರಿ ಕೂರ್ಮರಾವ್

Deputy Commissioner Koorma Rao has asked pourakarmikas to be informed about the facilities provided to them.
Photo Credit : News Kannada

ಉಡುಪಿ: ಜಿಲ್ಲೆಯ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಕಾರ್ಮಿಕರಿಗೆ, ಅವರಿಗೆ ಸರ್ಕಾರದ ವಿವಿಧ ಯೋಜನೆಗಳಲ್ಲಿ ದೊರೆಯುವ ಸೌಲಭ್ಯಗಳ ಬಗ್ಗೆ ಸಮಗ್ರ ಮಾಹಿತಿಯನ್ನು ನೀಡುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದರು.

ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಫಾಯಿ ಕರ್ಮಚಾರಿಗಳ ಜಿಲ್ಲಾ ಜಾಗೃತ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಕಾರ್ಮಿಕರಿಗೆ ಮತ್ತು ಅವರು ಕುಟುಂಬದವರಿಗೆ ವಿವಿಧ ಇಲಾಖೆಗಳಲ್ಲಿ ಹಲವು ಸೌಲಭ್ಯಗಳಿದ್ದು, ಈ ಬಗ್ಗೆ ಎಲ್ಲಾ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಮಾಹಿತಿ ಪಡೆದು ಅವರಿಗೆ ತಿಳಿಸಿ, ಯೋಜನೆಯ ಪ್ರಯೋಜನ ಪಡೆಯುವಂತೆ ನೋಡಿಕೊಳ್ಳಬೇಕು ಎಂದರು.

ಕೋವಿಡ್ ಮುನ್ನೆಚ್ಚರಿಕೆಯಾಗಿ ಎಲ್ಲಾ ಪೌರಕಾರ್ಮಿಕರಿಗೆ ಮಾಸ್ಕ್, ಸ್ಯಾನಿಟೈಸರ್ ಸೇರಿದಂತೆ ಎಲ್ಲಾ ಮುನ್ನೆಚ್ಚರಿಕಾ ಸಾಮಾಗ್ರಿಗಳನ್ನು ಹಾಗೂ ದೈನಂದಿನ ಕಾರ್ಯ ನಿರ್ವಹಿಸಲು ಅಗತ್ಯವಿರುವ ಸುರಕ್ಷತಾ ಉಪಕರಣಗಳನ್ನು ನೀಡುವಂತೆ ಮತ್ತು ಅವರ ಸಮಗ್ರ ಆರೋಗ್ಯ ತಪಾಸಣೆ ಮಾಡುವಂತೆ ತಿಳಿಸಿದ ಜಿಲ್ಲಾಧಿಕಾರಿಗಳು, ಎಲ್ಲರಿಗೂ ಬೂಸ್ಟರ್ ಡೋಸ್ ನೀಡಲು ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು. ಸರಕಾರಿ ಆಸ್ಪತ್ರೆಯಲ್ಲಿ ಲಸಿಕೆ ಲಭ್ಯವಿಲ್ಲದಿದ್ದಲ್ಲಿ ಖಾಸಗಿ ವ್ಯವಸ್ಥೆಯಿಂದ ಆದರೂ ಲಸಿಕೆ ಖರೀದಿಸಿ ಅವರಿಗೆ ಆದ್ಯತೆಯಲ್ಲಿ ಬೂಸ್ಟರ್ ಲಸಿಕೆ ನೀಡುವಂತೆ ಸೂಚನೆ ನೀಡಿದರು.

ಪೌರ ಕಾಮಿಕರ ಮಕ್ಕಳಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರವೇಶಕ್ಕೆ ಅವಕಾಶವಿದ್ದು, ಈ ಬಗ್ಗೆ ಅವರಿಗೆ ಮಾಹಿತಿ ನೀಡುವಂತೆ ತಿಳಿಸಿದ ಅವರು, ಜಿಲ್ಲೆಯಲ್ಲಿ ಯಾವುದೇ ಕಾರಣಕ್ಕೂ ಮ್ಯಾನ್ಯುವಲ್ ಸ್ಕಾö್ಯವೆಂರ‍್ಸ್ಗಳು ಕಂಡು ಬರದಂತೆ ಸಕ್ಕಿಂಗ್ ಮತ್ತು ಜಟ್ಟಿಂಗ್ ಯಂತ್ರಗಳ ಬಳಕೆ ಸೇರಿದಂತೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಹೆಚ್., ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಕಿರಣ್ ಫಡ್ನೇಕರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕಿ ಅನಿತ ಮಡ್ಲೂರು, ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ಪ್ರತಿಭಾ ಹಾಗೂ ವಿವಿಧ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು