ಉಡುಪಿ: ನಗರಸಭಾ ವ್ಯಾಪ್ತಿಯ ಮಣಿಪಾಲ ವಾರ್ಡಿನ ಮಣಿಪಾಲ ಸಿಂಡಿಕೇಟ್ ಸರ್ಕಲ್ ನಿಂದ ಅನಂತನಗರ ಹುಡ್ಕೋ ಕಾಲೋನಿ ರಸ್ತೆ ಅಭಿವೃದ್ಧಿಗೆ ಶಾಸಕ ಕೆ. ರಘುಪತಿ ಭಟ್ ಅವರ ಶಿಫಾರಸ್ಸಿನ ಮೇರೆಗೆ ರೂ. 2 ಕೋಟಿ ಅನುದಾನ ಮಂಜೂರಾಗಿದೆ.
ಕಾಮಗಾರಿ ಆರಂಭಿಸುವ ಕುರಿತು ಇಂದು ಶಾಸಕ ಕೆ. ರಘುಪತಿ ಭಟ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶೀಘ್ರವೇ ಕಾಮಗಾರಿ ಆರಂಭಿಸುವಂತೆ ಗುತ್ತಿಗೆದಾರರಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಸ್ಥಳೀಯ ನಗರಸಭಾ ಸದಸ್ಯೆ ಕಲ್ಪನಾ ಸುಧಾಮ, ಲೋಕೋಪಯೋಗಿ ಇಲಾಖೆಯ ಸಹಾಯಕ ಅಭಿಯಂತರ ಗಿರೀಶ್, ಗುತ್ತಿಗೆದಾರ ಉದಯ್ ಕುಮಾರ್ ಶೆಟ್ಟಿ ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.