ಉಡುಪಿ: ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್, ಉಡುಪಿ, ತಾಲೂಕು ಆಡಳಿತ ತಾಲೂಕು ಪಂಚಾಯತ್ ಹಾಗೂ ಕಾಪು ಪುರಸಭೆ ಸಹಯೋಗದೊಂದಿಗೆ ಜನತಾ ದರ್ಶನ ಕಾರ್ಯಕ್ರಮವನ್ನು ಕಾಪು ಆಡಳಿತ ಸೌಧದಲ್ಲಿ ಇಂದು ಆಯೋಜಿಸಲಾಯಿತು.
ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಭಾಗವಹಿಸಿ, ಪ್ರಾಕೃತಿಕ ವಿಕೋಪ ಪರಿಹಾರ ನಿಧಿ ಅಡಿ ಮಂಜೂರಾದ ಆದೇಶ ಪತ್ರ ಹಾಗೂ ಸಾಮಾಜಿಕ ಭದ್ರತಾ ಯೋಜನೆ ಅಡಿ ಅರ್ಹ ಫಲಾನುಭವಿಗಳಿಗೆ ಮಂಜೂರಾತಿ ಆದೇಶ ಪತ್ರ ನೀಡಿದರು. ಬಳಿಕ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್, ಸಹಾಯಕ ಆಯುಕ್ತೆ ರಶ್ಮಿ, ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಉದಯ್ ನಾಯಕ್, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್. ಸಿದ್ದಲಿಂಗಪ್ಪ, ಕಾಪು ತಹಶೀಲ್ದಾರ್ ನಾಗರಾಜ್ ನಾಯ್ಕಡ ಉಪಸ್ಥಿತರಿದ್ದರು.