News Karnataka Kannada
Thursday, May 09 2024
ಉಡುಪಿ

ಉಡುಪಿ ಜಿಲ್ಲೆ ದೇಶದಲ್ಲೇ ಪ್ರಸಿದ್ದ ಪ್ರವಾಸಿ ತಾಣವಾಗಲಿ- ಶಾಸಕ ರಘುಪತಿ ಭಟ್

Udupi district should become one of the most popular tourist destinations in the country: MLA Raghupathi Bhat
Photo Credit : News Kannada

ಉಡುಪಿ: ಉಡುಪಿ ಜಿಲ್ಲೆಯಲ್ಲಿನ ಪ್ರವಾಸಿ ತಾಣಗಳ ಬಗ್ಗೆ ದೇಶದ ಪ್ರತಿಷ್ಠಿತ ಬ್ಲಾಗರ್ ಗಳ ಮೂಲಕ, ಜಿಲ್ಲೆಯಲ್ಲಿನ ಹಲವು ಪ್ರವಾಸಿ ತಾಣಗಳ ಬಗ್ಗೆ ವಿನೂತನವಾಗಿ ಅತೀ ಹೆಚ್ಚಿನ ರೀತಿಯಲ್ಲಿ ಪ್ರಚುರಪಡಿಸಿದ್ದು, ಜಿಲ್ಲೆಯನ್ನು ದೇಶದ ಪ್ರಸಿದ್ದ ಪ್ರವಾಸಿತಾಣವನ್ನಾಗಿ ಮಾಡಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುವುದಾಗಿ ಶಾಸಕ ರಘುಪತಿ ಭಟ್ ಹೇಳಿದರು.

ಅವರು ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ, ಉಡುಪಿ ಜಿಲ್ಲಾ ರಜತ ಮಹೋತ್ಸವ ಸಮಾರಂಭ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಪ್ರಾಯೋಜಕತ್ವದಲ್ಲಿ ನಿರ್ಮಿಸಿರುವ “ಉಡುಪಿ ರಜತ ಮಹೋತ್ಸವ ರಥ”ಕ್ಕೆ ಚಾಲನೆ ನೀಡಿ ಮಾತನಾಡಿದರು.

ಉಡುಪಿ ಜಿಲ್ಲೆಯ ರಜತ ಉತ್ಸವದ ಅಂಗವಾಗಿ ಜಿಲ್ಲೆಯನ್ನು ಮುಂದಿನ 25 ವರ್ಷಗಳಲ್ಲಿ ಎಲ್ಲಾ ಕ್ಷೇತ್ರದಲ್ಲಿ ಸಮಗ್ರವಾಗಿ ಅಭಿವೃದ್ದಿಪಡಿಸುವ ಬಗ್ಗೆ ಯೋಜನೆ ಮತ್ತು ಕಾರ್ಯಕ್ರಮಗಳನ್ನು ರೂಪಿಸಲಾಗುತ್ತಿದೆ, ದಿಕ್ಸೂಚಿ ಕಾರ್ಯಕ್ರಮವನ್ನು ಆಯೋಜಿಸುವ ಮೂಲಕ ವಿವಿದ ಕ್ಷೇತ್ರಗಳ ತಜ್ಞರು ನೀಡಿರುವ ಸಲಹೆಗಳನ್ನು ದಾಖಲೀಕರಣ ಮಾಡಿ, ಅದರಂತೆ ಜಿಲ್ಲೆಯನ್ನು ಅಭಿವೃದ್ದಿಗೊಳಿಸಲಾಗುವುದು.ರಜತ ಉತ್ಸವ ಅಂಗವಾಗಿ ಜಿಲ್ಲೆಯ ಪ್ರಗತಿ ಮತ್ತು ಸಂಸ್ಕೃತಿಯನ್ನು ಬಿಂಬಿಸುವ ರಥವನ್ನು ಸಿದ್ದಪಡಿಸಲಾಗಿದ್ದು, ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಸಂಚರಿಸುವ ಈ ರಥವು ಜಿಲ್ಲೆಯ ಪ್ರಗತಿಯನ್ನು ಎಲ್ಲೆಡೆ ಸಾರಲಿದೆ ಎಂದರು.

ಜಿಲ್ಲಾಧಿಕಾರಿ ಕೂರ್ಮರಾವ್ ಎಂ ಮಾತನಾಡಿ, ರಜತ ಉತ್ಸವದ ರಥವು 25 ದಿನಗಳ ಕಾಲ ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಸಂಚರಿಸಲಿದ್ದು, ಜಿಲ್ಲೆಯ ವೈವಿಧ್ಯಮಯ ಪ್ರವಾಸಿತಾಣಗಳ ಬಗ್ಗೆ ಮಾಹಿತಿ ನೀಡಲಿದ್ದು,ರಜತ ಉತ್ಸವದ ಅಂಗವಾಗಿ ಜನವರಿ 20 ರಿಂದ 22 ರ ವರಗೆ ಮಲ್ಪೆ ಬೀಚ್ ನಲ್ಲಿ ಆಕರ್ಷಕ ವೈವಿಧ್ಯಮಯ ಕಾರ್ಯಕ್ರಮಗಳು ನಡೆಯಲಿವೆ ಎಂದರು.

ಎಸ್‌ಸಿಡಿಸಿಸಿ ಬ್ಯಾಂಕ್ ಆಧ್ಯಕ್ಷ ಡಾ.ರಾಜೇಂದ್ರ ಕುಮಾರ್ ಮಾತನಾಡಿ, ಬ್ಯಾಂಕಿಂಗ್ ಕ್ಷೇತ್ರದ ತವರೂರಾದ ಉಡುಪಿ ಜಿಲ್ಲೆಯಲ್ಲಿ ಕೈಗಾರಿಕೆಗಳು ಹೆಚ್ಚಿನ ಸಂಖ್ಯೆಯಲ್ಲಿ ಆರಂಭಗೊಂಡು ಜಿಲ್ಲೆಯು ಆರ್ಥಿಕವಾಗಿ ಮತ್ತಷ್ಟು ಸದೃಢವಾಗಬೇಕಿದೆ, ಪ್ರವಾಸೋದ್ಯಮವು ಅಂತಾರಾಷ್ಟ್ರೀಯ ಪ್ರಸಿದ್ದಿ ಪಡೆಯುವಂತಾಗಲಿ ಎಂದರು.

ಕಾರ್ಯಕ್ರಮದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಶಾಸಕ ಲಾಲಾಜಿ ಆರ್ ಮೆಂಡನ್, ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಪ್ರೈವೇಟ್ ಲಿಮಿಟೆಡ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ಉಡುಪಿ ನಗರ ಸಭೆಯ ಅಧ್ಯಕ್ಷೆ ಸುಮಿತ್ರಾ ಆರ್ ನಾಯಕ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಸನ್ನ ಎಚ್, ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ, ಅಪರ ಜಿಲ್ಲಾಧಿಕಾರಿ ವೀಣಾ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನುಗಾರಿಕಾ ಫೇಡರೇಶನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ, ಸಹಕಾರ ಸಂಘಗಳ ಒಕ್ಕೂಟದ ಉಡುಪಿ ಜಿಲ್ಲಾಧ್ಯಕ್ಷ ಜಯಕರ್ ಶೆಟ್ಟಿ ಇಂದ್ರಾಳಿ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಇದ್ದರು.

ಈ ರಥದಲ್ಲಿ ಉಡುಪಿಯ ಕಲೆ ಸಂಸ್ಕೃತಿಗಳನ್ನು ಬಿಂಬಿಸುವ, ಯಕ್ಷಗಾನ, ಕಂಬಳ, ದೈವಾರಾಧನೆ, ದೇವಾಲಯ, ಹುಲಿವೇಷ ಬಿಂಬಿಸುವ ಆಕರ್ಷಕ ಸ್ಥಬ್ಧಚಿತ್ರಗಳು ಹಾಗೂ ಎಲ್.ಸಿ.ಡಿ. ಪರದೆಯ ಮೂಲಕ ಜಿಲ್ಲೆಯ ಪ್ರವಾಸಿ ತಾಣಗಳು ಮತ್ತು ಅಭಿವೃಧ್ದಿಯನ್ನು ಬಿಂಬಿಸುವ ವೀಡಿಯೋ ಪ್ರದರ್ಶನದ ವ್ಯವಸ್ಥೆ ಇದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು