News Karnataka Kannada
Saturday, May 04 2024
ಉಡುಪಿ

ಏ.12ರಂದು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸ್ಥಾಪನಾ ದಿನಾಚರಣೆ

Udupi District Working Journalists' Association's Foundation Day to be celebrated on April 12
Photo Credit : News Kannada

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ರಜತ ಮಹೋತ್ಸವ ಸಮಿತಿಯ ಆಶ್ರಯದಲ್ಲಿ ರಜತ ಮಹೋತ್ಸವದ ಪ್ರಯುಕ್ತ ಉಡುಪಿ ಗಾಂಧಿ ಆಸ್ಪತ್ರೆ ಹಾಗೂ ಉಡುಪಿ ಪತ್ರಿಕಾ ಭವನ ಸಮಿತಿಯ ಸಹಯೋಗದೊಂದಿಗೆ ಸಂಘದ ಸ್ಥಾಪನಾ ದಿನಾಚರಣೆಯನ್ನು ಏ.12ರಂದು ಬೆಳಗ್ಗೆ 10.30ಕ್ಕೆ ಉಡುಪಿ ಪತ್ರಿಕಾ ಭವನದಲ್ಲಿ ಆಯೋಜಿಸಲಾಗಿದೆ.

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು, ಕಾರ್ಯಕ್ರಮವನ್ನು ಹಿರಿಯ ಸಾಹಿತಿ ವೈದೇಹಿ ಉದ್ಘಾಟಿಸಲಿರುವರು. ಸ್ಥಾಪನಾ ದಿನಾಚರಣೆ ಕುರಿತು ಸಂಘದ ಸ್ಥಾಪಕಾ ಕೋಶಾಧಿಕಾರಿ ಹಾಗೂ ಮಂಗಳೂರು ವಿಜಯ ಕರ್ನಾಟಕ ಪತ್ರಿಕೆಯ ಪ್ರಧಾನ ವರದಿಗಾರ ಆರೀಫ್ ಪಡುಬಿದ್ರೆ ಮಾತನಾಡಲಿದ್ದಾರೆ ಎಂದರು.

ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷರುಗಳಾದ ಎನ್.ಗುರುರಾಜ್, ದಿನೇಶ್ ಕಿಣಿ ಅಲೆವೂರು, ಕಿರಣ್ ಮಂಜನಬೈಲು, ಗೋಕುಲ್‌ದಾಸ್ ಪೈ, ಜಯಕರ ಸುವರ್ಣ, ಗಣೇಶ್ ಪ್ರಸಾದ್ ಪಾಂಡೇಲು ಅವರನ್ನು ಸನ್ಮಾನಿಸಲಾಗುವುದು. ಸಂಘದ ಫೇಸ್‌ಬುಕ್ ಪೇಜ್ ಅನಾವರಣಗೊಳಿಸಲಾಗುವುದು ಎಂದು ಅವರು ತಿಳಿಸಿದರು.

ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಲಿದ್ದಾರೆ. ರಜತ ಮಹೋತ್ಸವ ಸಮಿತಿಯ ಸಂಚಾಲಕ ಮುಹಮ್ಮದ್ ಶರೀಫ್, ಇಂಡಿಯನ್ ಫೆಡರೇಶನ್ ಆಫ್ ವರ್ಕಿಂಗ್ ಜರ್ನಲಿಸ್ಟ್ಸ್ ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಜಿತ್ ಆರಾಡಿ ಉಪಸ್ಥಿತರಿರುವರು.

ಸುದ್ದಿಗೋಷ್ಠಿಯಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಪತ್ರಿಕಾ ಭವನ ಸಮಿತಿಯ ಸಂಚಾಲಕ ಅಜಿತ್ ಆರಾಡಿ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು