Categories: ಉಡುಪಿ

ಉಡುಪಿ: ಸರಕಾರಿ ಶಾಲೆಗಳಿಗೂ ತಟ್ಟಿದ ಕುಡಿಯುವ ನೀರಿನ ಸಮಸ್ಯೆ, ವಿದ್ಯಾರ್ಥಿಗಳ ಪರದಾಟ

ಉಡುಪಿ: ನಗರದಲ್ಲಿ ನೀರಿನ ಸಮಸ್ಯೆ ಮತ್ತಷ್ಟು ಉಲ್ಬಣಿಸಿದ್ದು, ಜನರು‌ ನೀರಿಗಾಗಿ ಪರದಾಡುವ ಸ್ಥಿತಿ ನಿರ್ಮಾಣ ಆಗಿದೆ. ಇದೀಗ ಸರಕಾರಿ ಶಾಲೆಗಳಲ್ಲೂ‌ ತೀವ್ರ ನೀರಿನ ಅಭಾವ ಉಂಟಾಗಿದೆ.

ನಗರದ ಒಳಕಾಡು ಸರಕಾರಿ ಸಂಯುಕ್ತ ಪ್ರೌಢಶಾಲೆಗೂ‌ ನೀರಿನ ಸಮಸ್ಯೆ ಕಾಡಿದ್ದು, ವಿದ್ಯಾರ್ಥಿಗಳು ನೀರಿಲ್ಲದೆ ತೊಂದರೆ ಅನುಭವಿಸುವಂತಾಗಿದೆ.

ಈ ಶಾಲೆಯೂ ಬಾವಿಯ ನೀರನ್ನೇ ಬಹುತೇಕವಾಗಿ ಅವಲಂಬಿಸಿಕೊಂಡಿತ್ತು. ಆದರೆ, ಮುಂಗಾರು‌ಪೂರ್ವ ಮಳೆಯ ಅಭಾವದಿಂದಾಗಿ ಬಾವಿ ನೀರು ಬತ್ತಿದೆ. ಇದರಿಂದ ಮಕ್ಕಳ ಶೌಚ ,ಕುಡಿಯಲು ಶುದ್ಧ ನೀರು, ಊಟ ತಿಂಡಿ ಮಾಡಿ ಶುಚಿಗೊಳಿಸುವುದಕ್ಕೆ ಸಾಕಷ್ಟು ನೀರಿನ ಅಗತ್ಯ ಇದೆ. ಆದರೆ ಬೇಸಿಗೆ ಮಳೆ ಬಾರದ ಹಿನ್ನೆಲೆಯಲ್ಲಿ ನೀರಿನ‌ ಕೊರತೆ ಶಾಲಾ ವಿದ್ಯಾರ್ಥಿಗಳಿಗೂ ತಟ್ಟಿದೆ.

ನಗರಸಭೆಯ ಅರ್ದಂಬರ್ಧ ಯೋಜನೆಗಳು ,ಕುಡಿಯುವ ನೀರಿನ ಯೋಜನೆಯಲ್ಲಿನ ವಿಳಂಬವೇ ಈ ಸಮಸ್ಯೆಗೆ ಕಾರಣವಾಗಿದೆ. ಕಳೆದ ವಾರ ಜಿಲ್ಲಾಸ್ಪತ್ರೆಯಲ್ಲೂ ನೀರಿನ‌ ಕೊರತೆ ಉಂಟಾಗಿ ರೋಗಿಗಳಿಗೆ ಸಮಸ್ಯೆ ಉಂಟಾಗಿತ್ತು.ಈಗ ಶಾಲೆಗೂ ಈ ಸಮಸ್ಯೆ ತಟ್ಟಿದ್ದು ದುರದೃಷ್ಟಕರ. ಸ್ಥಳೀಯಾಡಳಿತ ಮತ್ತು ಶಾಸಕರು ಈ ಸಮಸ್ಯೆಗೆ ಪರಿಹಾರ ದೊರಕಿಸಿಕೊಡಬೇಕು ಎಂದು ಹಳೆವಿದ್ಯಾರ್ಥಿ ಸಂಘದ ಮುಖಂಡರು ಒತ್ತಾಯಿಸಿದ್ದಾರೆ.

Gayathri SG

Recent Posts

ಸಾಕು ನಾಯಿ ಕಾಣೆ : ಬೇಸರದಿಂದ 12 ವರ್ಷದ ಬಾಲಕಿ ಆತ್ಮಹತ್ಯೆ

ಪ್ರೀತಿಯ ಶ್ವಾನ ನಾಪತ್ತೆಯಾಗಿದೆ ಎಂದು ಬೇಸರ ಗೊಂಡು 12 ವರ್ಷದ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಯಾಣದಲ್ಲಿ ನಡೆದಿದೆ.

4 mins ago

ಪ್ರಜ್ವಲ್​ ರೇವಣ್ಣ ವಿಡಿಯೋ ಕೇಸ್‌ಗೆ ಟ್ವಿಸ್ಟ್‌ : ಸಂತ್ರಸ್ತೆಯಿಂದ ದೂರು ದಾಖಲು

ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಅಶ್ಲೀಲ ವಿಡಿಯೋ ಪೆನ್​ ಡ್ರೈವ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ದೂರು ದಾಖಲಾಗಿದೆ. ನೊಂದ ಸಂತ್ರಸ್ತೆ…

9 mins ago

ಐಪಿಎಲ್​ ಬೆಟ್ಟಿಂಗ್​ನಲ್ಲಿ 10 ಲಕ್ಷ ಕಳೆದುಕೊಂಡು ವಿದ್ಯಾರ್ಥಿ ಆತ್ಮಹತ್ಯೆ

ಐಪಿಎಲ್ ಬೆಟ್ಟಿಂಗ್​ನಿಂದ 10 ಲಕ್ಷ ಕಳೆದುಕೊಂಡು ವಿದ್ಯಾರ್ಥಿಯೋರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತೆಲಂಗಾಣದಲ್ಲಿ ನಡೆದಿದೆ.

26 mins ago

ನಾಳೆ (ಏ. 29) ಬಾಗಲಕೋಟೆಗೆ ಪ್ರಧಾನಿ ಮೋದಿ ಆಗಮನ

ಲೋಕಸಭಾ ಚುನಾವಣೆ ಪ್ರಯುಕ್ತ ವಿಜಯಪುರ ಹಾಗೂ ಬಾಗಲಕೋಟೆ ಅವಳಿ ಜಿಲ್ಲೆ ಬಿಜೆಪಿ ಅಭ್ಯರ್ಥಿಗಳ ಪರ ಪ್ರಚಾರಾರ್ಥ ವಿಶ್ವನಾಯಕ, ದೇಶದ ನೆಚ್ಚಿನ…

1 hour ago

1.5 ಲಕ್ಷ ಮೌಲ್ಯದ ನಶೆ ಗುಳಿಗೆ ವಶಕ್ಕೆ ಪಡೆದ ಅಬಕಾರಿ ಇಲಾಖೆ

ಅಬಕಾರಿ ಅಧಿಕಾರಿಗಳ ಖಚಿತ ಮಾಹಿತಿ ಮೇರೆಗೆ ನಗರದ ಮಾಂಗರವಾಡಿ ಗಲ್ಲಿಯ ಮನೆಯೊಂದರ ಮೇಲೆ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಅಬಕಾರಿ ಇಲಾಖೆ…

2 hours ago

ಮೋದಿಯನ್ನು ಮತ್ತೊಮ್ಮೆ ಪ್ರಧಾನ ಮಂತ್ರಿ ಸ್ಥಾನಕ್ಕೇರಿಸಬೇಕು: ಅರವಿಂದ ಬೆಲ್ಲದ

ಹಲವಾರು ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸಿರುವ ನರೇಂದ್ರ ಮೋದಿ ಅವರನ್ನು ಬೆಂಬಲಿಸುವ ಮುಖಾಂತರ ಮತ್ತೊಮ್ಮೆ ಪ್ರಧಾನ ಮಂತ್ರಿ ಸ್ಥಾನಕ್ಕೇರಿಸಬೇಕು ಎಂದು ವಿಧಾನಸಭೆಯ…

2 hours ago