News Karnataka Kannada
Friday, April 19 2024
Cricket
ಉಡುಪಿ

ಉಡುಪಿ: ಎರಡು ವರ್ಷಗಳ ಬಳಿಕ ಕುಟುಂಬ ಸೇರಿದ ಮಾಜಿ ಪಂಚಾಯಿತಿ ಅಧ್ಯಕ್ಷ

Udupi: Former panchayat president joins family after two years
Photo Credit : News Kannada

ಉಡುಪಿ: ಮಾಜಿ ಗ್ರಾಪಂ ಅಧ್ಯಕ್ಷರೊಬ್ಬರು ಕುಟುಂಬದಿಂದ ದೂರಾಗಿ ಎರಡು ವರ್ಷದ ಬಳಿಕ ಮತ್ತೆ ಕುಟುಂಬ ಸೇರಿದ ಘಟನೆ ಉಡುಪಿಯಲ್ಲಿ ನಡೆದಿದೆ.

ಕೋಲಾರದ ನಿವಾಸಿ 53ವರ್ಷದ ಪ್ರಭಾಕರ ಅವರು ಎರಡು ವರ್ಷದ ಬಳಿಕ ಕುಟುಂಬ ಸೇರಿದ ವ್ಯಕ್ತಿ. ಇವರು ಮಾನಸಿಕ ಅಸ್ವಸ್ಥತೆಯಿಂದ ಕಾಪು ಪರಿಸರದಲ್ಲಿ ಅಲೆದಾಡುತ್ತಿದ್ದರು. ಇವರನ್ನು ಸಮಾಜ ಸೇವಕ ವಿಶುಶೆಟ್ಟಿ ಅಂಬಲಪಾಡಿ ರಕ್ಷಿಸಿ, ಉಡುಪಿಯ ಬಾಳಿಗಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದರು. ಅಲ್ಲದೆ, ಪ್ರಭಾಕರ್ ಸಂಪೂರ್ಣ ಗುಣಮುಖರಾದ ಬಳಿಕ ಅವರ ಕುಟುಂಬದವರನ್ನು ಸಂಪರ್ಕಿಸಿ ಮಾಹಿತಿ ನೀಡಿದ್ದರು. ಅದರಂತೆ ಇಂದು ಪತ್ನಿ, ಸಹೋದರ ಹಾಗೂ ಮಗ ಉಡುಪಿ ಬಂದಿದ್ದು, ಕಳೆದ ಎರಡು ವರ್ಷಗಳಿಂದ ಇವರನ್ನು ಹುಡುಕುತ್ತಿದ್ದೇವೆ ಎಂಬ ಮಾಹಿತಿ ನೀಡಿದ್ದರು.

ಪ್ರಭಾಕರ ಅವರು ಪದವೀಧರನಾಗಿದ್ದು, ಪಂಚಾಯಿತಿ ಒಂದರ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಉತ್ತಮ ಸಮಾಜ ಸೇವಕರಾಗಿದ್ದರು ಎಂಬ ಮಾಹಿತಿ ತಿಳಿದುಬಂದಿದೆ.

ಉಡುಪಿಯ ಪ್ರಸಿದ್ದ ಸಮಾಜ ಸೇವಕ ವಿಶು ಶೆಟ್ಟಿ ಅವರು ವ್ಯಕ್ತಿಯನ್ನು ಎರಡು ವರ್ಷಗಳ ಬಳಿಕ ತನ್ನ ಕುಟುಂಬವನ್ನು ಸೇರುವಲ್ಲಿ ಯಶಸ್ವಿಯಾಗಿದ್ದಾರೆ.

ಪ್ರಭಾಕರ ಅವರು ಕಾಪು ಪರಿಸರದಲ್ಲಿ ಮಳೆಗೆ ಒದ್ದೆಯಾಗಿ ತಿರುಗಾಡುತ್ತಾ, ಅಸಹಾಯಕ ಜೀವನ ಸಾಗಿಸುತ್ತಿರುವುದನ್ನು ಕಂಡು ಅವರನ್ನು ರಕ್ಷಿಸಿ ವಾರದ ಹಿಂದೆ ಬಾಳಿಗಾ ಆಸ್ಪತ್ರೆಗೆ ದಾಖಲಿಸಲಾಗಿತ್ತು.ಅಲ್ಲಿನ ಚಿಕಿತ್ಸೆಗೆ ಸ್ಪಂದಿಸಿದ ಅವರು, ತಮ್ಮ ಕುಟುಂಬದ ವಿಳಾಸವನ್ನು ನೀಡಲು ಶಕ್ತರಾದರು. ಈ ಮೂಲಕ ಅವರ ಕುಟುಂಬದವರನ್ನು ಸಂಪರ್ಕಿಸಿ ಉಡುಪಿಗೆ ಕರೆಯಿಸಿ ರೋಗಿಯನ್ನು ಹಸ್ತಾಂತರಿಸಿದ್ದೇವೆ. ಪ್ರಭಾಕರ ಅವರು ಎರಡು ವರ್ಷಗಳ ಬಳಿಕ ತನ್ನ ಕುಟುಂಬವನ್ನು ಸೇರಿರುವುದು ಸಂತಸ ತಂದಿದೆ ಎಂದು ವಿಶು ಶೆಟ್ಟಿ ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು