News Karnataka Kannada
Monday, May 06 2024
ಉಡುಪಿ

ಉಡುಪಿ: ಮನೆ ಕಳ್ಳತನ ಆರೋಪಿಯ ಬಂಧನ, 7 ಲಕ್ಷ ಮೌಲ್ಯದ ಚಿನ್ನಾಭರಣ ವಶ

Udupi
Photo Credit : By Author

ಉಡುಪಿ: ಬ್ರಹ್ಮಾವರ ಠಾಣಾ ವ್ಯಾಪ್ತಿಯ ವಿವಿಧ ಕಡೆ ನಡೆದ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಖ್ಯಾತ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ‌. ಬಂಧಿತ ಆರೋಪಿಯನ್ನು ಕಾಡೂರು ಗ್ರಾಮದ ತಂತ್ರಾಡಿ ನಿವಾಸಿ ವಿಜಯ ಕುಮಾರ್‌ ಎಂದು ಗುರುತಿಸಲಾಗಿದೆ.

ಡಿ.19ರಂದು ಸಂಜೆ ನೀಲಾವರ ಕ್ರಾಸ್‌ ಬಳಿ ಪೊಲೀಸರು ತಪಾಸಣೆ ಮಾಡುತ್ತಿರುವಾಗ ಈತನನ್ನು ಬಂಧಿಸಿದ್ದಾರೆ. ಈತನು ಬ್ರಹ್ಮಾವರ ಮತ್ತು ಕೋಟ ಠಾಣಾ ವ್ಯಾಪ್ತಿಯಲ್ಲಿ ನಡೆದ ವಿವಿಧ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವುದು ತಿಳಿದುಬಂದಿದೆ.

2022ರ ಮಾರ್ಚ್‌ ಮತ್ತು ಎಪ್ರೀಲ್ ತಿಂಗಳ ಮಧ್ಯಾವಧಿಯಲ್ಲಿ ಕಾಡೂರು ಗ್ರಾಮದ ತಂತ್ರಾಡಿ ಸದಾಶಿವ ಮಹಾಬಲೇಶ್ವರ ರಾವ್‌ ಹಳೇ ಮನೆಯ ಬಾಗಿಲು ಮುರಿದು 1.40 ಲಕ್ಷ ಮೌಲ್ಯದ ಏಳು ಮೂಟೆ ಕಾಳು ಮೆಣಸುಗಳನ್ನು ಕಳವು ಮಾಡಿರುವ ಪ್ರಕರಣ, ಜುಲೈ ತಿಂಗಳಲ್ಲಿ ರಾತ್ರಿ ನಡೂರು ಗ್ರಾಮದ ನಡೂರು ಅಂತಯ್ಯ ಶೆಟ್ಟಿ ಸ್ಮಾರಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬೀಗ ಮುರಿದು ಒಂದು ಇಂಡೇನ್‌ ಕಂಪೆನಿಯ ಗ್ಯಾಸ್‌ ಸಿಲಿಂಡರ್‌ ಕಳವು ಪ್ರಕರಣ, ಅದೇ ತಿಂಗಳಲ್ಲಿ ಯಡ್ತಾಡಿ ಗ್ರಾಮದ ವಾಣಿ ಭಂಡಾರಿ ಅವರ ಮನೆಯಲ್ಲಿ ರಾತ್ರಿ ಮನೆಯ ಬಾಗಿಲು ಮುರಿದು 5.04 ಲಕ್ಷ ರೂ ಮೌಲ್ಯದ ಚಿನ್ನಾಭರಣ ಹಾಗೂ 15 ಸಾವಿರ ನಗದನ್ನು ಕಳವು‌ ಮಾಡಿದ್ದಾನೆ. ಅಲ್ಲದೆ, ನವೆಂವರ್ ತಿಂಗಳಿನಲ್ಲಿ ಬಿಲ್ಲಾಡಿ ಸುಜಾತ ಶೆಟ್ಟಿ ಎಂಬವರ ಮನೆ ಕಳ್ಳತನ. ಆರೂರು ಗ್ರಾಮದ ಮೇಲಡ್ಪು ಭಾಸ್ಕರ ಶೆಟ್ಟಿ ಮನೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾಗಿದ್ದಾನೆ ಎಂದು ವಿಚಾರಣೆಯಲ್ಲಿ ತಿಳಿದುಬಂದಿದೆ. ಆರೋಪಿಯಿಂದ ಒಟ್ಟು 7 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು