News Karnataka Kannada
Monday, May 20 2024
ಉಡುಪಿ

ಉಡುಪಿ: ಮಾನವೀಯತೆಯಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ- ಜಿಲ್ಲಾಧಿಕಾರಿ ಕೂರ್ಮರಾವ್

Udupi: Humanity can lead to peace in the society: Deputy Commissioner Koorma Rao
Photo Credit : News Kannada

ಉಡುಪಿ: ಸಮಾಜದಲ್ಲಿ ಬದುಕುವ ಎಲ್ಲರೂ ಮೊದಲು ಮಾನವನಾಗುವತ್ತ ಕಾರ್ಯಪ್ರವೃತ್ತರಾದರೆ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ .ಎಂ ತಿಳಿಸಿದರು.

ಅವರು ಉಡುಪಿ ಚರ್ಚ್ನಲ್ಲಿ, ನೆಹರೂ ಯುವಕೇಂದ್ರ ಸಂಘಟನೆ ಉಡುಪಿ ಜಿಲ್ಲೆ, ಯುವ ವಿದ್ಯಾರ್ಥಿ ಸಂಚಲನ, ಉಡುಪಿ ಧರ್ಮಕ್ಷೇತ್ರ ಇವರ ಜಂಟಿ ಆಶ್ರಯದಲ್ಲಿ ಏರ್ಪಡಿಸಲಾದ ಉಡುಪಿ ಜಿಲ್ಲಾ ಮಟ್ಟದ ಯುವ ವಿದ್ಯಾರ್ಥಿ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದರು.

ಮನುಷ್ಯನು ಸದಾ ಕ್ರಿಯಾಶೀಲನಾಗಿರಲು ಬಯಸುತ್ತಾನೆ. ಯಾವುದಾದರೂ ಚಟುವಟಿಕೆಯಲ್ಲಿ ತನ್ನನ್ನೇ ತಾನು ತೊಡಗಿಸಿಕೊಳ್ಳುತ್ತಾನೆ. ಇದು ಮನುಷ್ಯರಲ್ಲಿ ಅಂತರ್ಗತವಾಗಿರುವ ಗುಣ. ವಿದ್ಯಾರ್ಥಿಗಳು ತಮ್ಮ ದಿನನಿತ್ಯದ ಸಮಯವನ್ನು ಸದುಪಯೋಗಪಡಿಸಿಕೊಳ್ಳಬೇಕು. ಶಾಲೆಯಲ್ಲಿ ಪಠ್ಯದೊಂದಿಗೆ ಕ್ರೀಡಾಲಯ ಹಾಗೂ ಗ್ರಂಥಾಲಯಗಳನ್ನು ಸಮರ್ಪಕವಾಗಿ ಬಳಸಬೇಕು. ಉತ್ತಮ ಹವ್ಯಾಸಗಳನ್ನು ರೂಢಿಸಿಕೊಂಡು ಜೀವನದಲ್ಲಿ ಉನ್ನತ ಗುರಿ ಹೊಂದಿರಬೇಕು. ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು ಎಂದರು.

ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ನೆಹರೂ ಯುವಕೇಂದ್ರ ಸಂಘಟನೆಯ ಯುವಜನ ಅಧಿಕಾರಿ ವಿಲ್ಫ್ರೆಡ್ ಡಿ’ಸೋಜ “ಸ್ವಾಮಿ ವಿವೇಕಾನಂದರ ಜಯಂತಿಯ ಸಪ್ತಾಹದಲ್ಲಿ ನಾವಿರುವಾಗ ಅವರ ಆದರ್ಶಗಳನ್ನು ವಿದ್ಯಾರ್ಥಿಗಳು ಅಳವಡಿಸಿಕೊಳ್ಳಬೇಕು. ಪ್ರಧಾನ ಮಂತ್ರಿಗಳು ಉಲ್ಲೇಖಿಸಿದಂತೆ ಈ ಶತಮಾನವು ಭಾರತದ ಯುವಜನರ ಪಾಲಿಗೆ ಉತ್ತಮ ಭವಿಷ್ಯವನ್ನು ನೀಡುವಂತಹದ್ದಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಡುಪಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷ ಡಾ| ಜೆರಾಲ್ಡ್ ಐಸಾಕ್ ಲೋಬೊ ವಹಿಸಿದ್ದರು.
ವಿದ್ಯಾರ್ಥಿಗಳೊಡನೆ ಸಂವಾದದಲ್ಲಿ ಮಾತನಾಡಿದ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚೀಂದ್ರರವರು “ಸಮಾಜದಲ್ಲಿ ಶಾಂತಿ ನೆಲೆಗೊಳಿಸಲು ಮೂರು ಆಯಾಮಗಳಲ್ಲಿ ನಾವೆಲ್ಲರೂ ಶ್ರಮಿಸಬೇಕು. ಮೊದಲನೆಯದಾಗಿ ನಾವು ವೈಯುಕ್ತಿಕವಾಗಿ ಶಾಂತಿ ಜೀವಿಗಳಾಗಬೇಕು, ನಂತರ ನಮ್ಮ ಕುಟುಂಬ, ನೆರೆಹೊರೆ ಹಾಗೂ ಸಮಾಜದಲ್ಲಿ ಇತರರೊಡನೆ ಶಾಂತಿಯಿಂದಿರಬೇಕು ಹಾಗೂ ಮೂರನೆಯದಾಗಿ ನಾವು ಪರಿಸರದೊಂದಿಗೆ ಶಾಂತಿ-ಸಮನ್ವಯತೆಯಲ್ಲಿರಬೇಕೆಂದರು.” ಸಂವಾದದಲ್ಲಿ ಸಮಾಜದಲ್ಲಿ ಶಾಂತಿ ಸ್ಥಾಪಿಸುವಲ್ಲಿ ಪೊಲೀಸ್ ಇಲಾಖೆಯ ಪಾತ್ರ, ಸಾಮಾಜಿಕ ಮಾಧ್ಯಮಗಳಲ್ಲಿ ಹರಿಯುವ ಸುಳ್ಳುಸುದ್ದಿಗಳು, ವಿದ್ಯಾರ್ಥಿಗಳು ಸೈಬರ್ ಅಪರಾಧಗಳಿಗೆ ಬಲಿಯಾಗುವುದು, ವಿದ್ಯಾಭ್ಯಾಸದ ಒತ್ತಡ ನಿವಾರಣೆ ಕುರಿತಂತೆ ವಿದ್ಯಾರ್ಥಿಗಳ ಹಲವು ಪ್ರಶ್ನೆಗಳಿಗೆ ಉತ್ತರಿಸಿದರು.

ಕಾರ್ಯಕ್ರಮದಲ್ಲಿ ಉಡುಪಿ ಕೆಥೋಲಿಕ್ ಎಜ್ಯುಕೇಶನ್ ಸೊಸೈಟಿ ಇದರ ಕಾರ್ಯದರ್ಶಿ ಫಾದರ್ ವಿನ್ಸೆಂಟ್ ಕ್ರಾಸ್ತ, ವೈ.ಎಸ್.ಎಮ್ ಮಾಜಿ ಅಂತಾರಾಷ್ಟ್ರೀಯ ನಿರ್ದೇಶಕ ಫಾದರ್ ಚಾರ್ಲ್ಸ್ ಮಿನೇಜಸ್, ವೈ.ಎಸ್.ಎಮ್ ಉಡುಪಿ ಧರ್ಮಕ್ಷೇತ್ರದ ನಿರ್ದೇಶಕ ಫಾದರ್ ಸ್ಟೀವನ್ ಫೆರ್ನಾಂಡಿಸ್, ಯುವಜನ ಸಂಯೋಜಕ ಡೆರಿಕ್ ಮಸ್ಕರೇನ್ಹಸ್, ಸಚೇತಕರಾದ ಲವಿನಾ ಡಿಸೋಜ, ವೈ.ಎಸ್.ಎಮ್ ಅಧ್ಯಕ್ಷ ಕು| ಮೆಲ್ಡ್ರಿಯಾ ನೊರೊನ್ಹಾ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಮಾನ್ವಿ ವಿ. ಅಮೀನ್ ನಿರೂಪಿಸಿ, ಮರಿಯಾ ವಿಯೋಲಾ ಬಾರೆಟ್ಟೊ ವಂದಿಸಿದರು. ವಿದ್ಯಾರ್ಥಿಗಳಿಗೆ ವಿವಿಧ ಸಾಂಸ್ಕೃತಿಕ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು