Categories: ಉಡುಪಿ

ಉಡುಪಿ: ಮುಂದಿನ ಸವಾಲು ಎದುರಿಸಲು ಪತ್ರಕರ್ತರು ಸಿದ್ಧರಾಗುವುದು ಅಗತ್ಯ- ಕೆ.ಪಿ.ರಾವ್

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ರಜತ ಮಹೋತ್ಸವ ಉದ್ಘಾಟನಾ ಸಮಾರಂಭದ ಆಮಂತ್ರಣ ಪತ್ರಿಕೆಯನ್ನು ಬುಧವಾರ ಉಡುಪಿ ಪತ್ರಿಕಾ ಭವನದಲ್ಲಿ ಬಿಡುಗಡೆಗೊಳಿಸಲಾಯಿತು.

ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿ ಮಾತನಾಡಿದ ಕೀಲಿಮಣೆ ತಜ್ಞ, ವಿಜ್ಞಾನಿ ನಾಡೋಜ ಕೆ.ಪಿ.ರಾವ್ ಅವರು, ಬದಲಾಗುತ್ತಿರುವ ಇಂದಿನ ತಾಂತ್ರಿಕ ಯುಗದಲ್ಲಿ ಪತ್ರಕರ್ತರು ಕೆಲಸ ಕೊಳ್ಳುವ ಭೀತಿಯಲ್ಲಿದ್ದಾರೆ. ಆದ್ದರಿಂದ ಮುಂದೆ ಬರುವ ಸವಾಲುಗಳನ್ನು ಎದುರಿಸಲು ಪತ್ರಕರ್ತರು ಇಂದೇ ಸಿದ್ಧರಾಗಬೇಕಾದ ಅಗತ್ಯ ಇದೆ ಎಂದು ಹೇಳಿದರು.

ಇಂದು ಚಾಟ್-ಜಿಪಿಟಿಯಂತಹ ತಂತ್ರಜ್ಞಾನದಲ್ಲಿ ನಾವು ಇದ್ದೇವೆ. 10 ಸೆಂಕೆಂಡ್‌ನಲ್ಲಿ 500 ಪದಗಳನ್ನು ಬರೆಯುವಂತಹ ಮಟ್ಟಕ್ಕೆ ತಂತ್ರಜ್ಞಾನ ಬೆಳೆದು ನಿಂತಿದೆ. ಇಂದು ಸಾಮಾನ್ಯ ಬುದ್ದಿಮತ್ತೆಗಿಂತ ಕೃತಕ ಬುದ್ದಿಮತ್ತೆಯ ಆದ್ಯತೆ ನೀಡಲಾಗುತ್ತಿದೆ. ಇಂದರಿಂದ ಪತ್ರಕರ್ತರು ಕೆಲಸ ಕಳೆದುಕೊಳ್ಳುವ ಅಪಾಯಕ್ಕೆ ಬಂದು ತಲುಪಿದ್ದಾರೆ. ಸುಸ್ಥಿರ ಅಭಿವೃದ್ಧಿ ಬಗ್ಗೆ ಪ್ರತಿಯೊಬ್ಬರೂ ತಿಳಿದುಕೊಳ್ಳಬೇಕು. ನಾಳೆ ಏನಾಗ ಬಹುದು ಎಂಬ ಸಾಮಾನ್ಯ ಕಲ್ಪನೆ ಪತ್ರಕರ್ತರಲ್ಲಿ ಮೂಡಬೇಕು ಎಂದರು.

ಇದೇ ಸಂದರ್ಭದಲ್ಲಿ ಈ ಬಾರಿಯ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಿರಿಯ ಪತ್ರಕರ್ತ ಆರಾಮ ಪಡುಬಿದ್ರಿ ಅವರನ್ನು ಸಮ್ಮಾನಿಸ ಲಾಯಿತು. ಅಧ್ಯಕ್ಷತೆಯನ್ನು ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ವಹಿಸಿದ್ದರು.

ರಜತ ಮಹೋತ್ಸವ ಸಮಿತಿ ಸಂಚಾಲಕ ಮುಹಮ್ಮದ್ ಶರೀಫ್ ಕಾರ್ಕಳ ಪ್ರಾಸ್ತಾವಿಕವಾಗಿ ಮಾತನಾಡಿದರು. ಸಂಘದ ರಾಜ್ಯ ಸಮಿತಿ ಸದಸ್ಯ ಕಿರಣ್ ಮಂಜನಬೈಲು, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ ಸ್ವಾಗತಿಸಿದರು. ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಕರ ಸುವರ್ಣ ವಂದಿಸಿದರು. ಸದಸ್ಯ ಚೇತನ್ ಮಟಪಾಡಿ ಕಾರ್ಯಕ್ರಮ ನಿರೂಪಿಸಿದರು.

Gayathri SG

Recent Posts

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ ರಾಜೀವ್ ಅಮಾನತು

ಅಂಜಲಿ ಅಂಬಿಗೇರ ಕೊಲೆ  ಪ್ರಕರಣಕ್ಕೆ ಸಂಬಂಧಿಸಿದಂತೆ ಹುಬ್ಬಳ್ಳಿ-ಧಾರವಾಡ ಡಿಸಿಪಿ ಪಿ.ರಾಜೀವ್ ಅಮಾನತು ಮಾಡಲಾಗಿದೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವೈಫಲ್ಯ ಹಿನ್ನೆಲೆ  ಅಮಾನತು…

3 hours ago

ಹುಬ್ಬಳ್ಳಿ ಕೊಲೆ ಪ್ರಕರಣ : ಆರೋಪಿ ಎನ್‌ಕೌಂಟರ್‌ಗೆ ಆಗ್ರಹ

ಹುಬ್ಬಳ್ಳಿಯ ವೀರಾಪುರ ಓಣಿ ನಿವಾಸಿ ಅಂಜಲಿ ಅಂಬಿಗೇರ್‌ ಕೊಲೆ ಆರೋಪಿಗೆ ಎನ್‌ಕೌಂಟರ್‌ ಮಾಡಬೇಕೆಂದು ಟೋಕರೆ ಕೋಳಿ ಸಮಾಜ ಸಂಘ ಆಗ್ರಹಿಸಿದೆ.

3 hours ago

ಗತವೈಭವ ಸಾರುವ ಅಪರೂಪದ ಸಂಗೀತ ರುದ್ರೇಶ್ವರ ದೇವಸ್ಥಾನ

ಚಾಲುಕ್ಯರ ಕಾಲದಲ್ಲಿ ಸಂಗೀತ ವಿಶ್ವವಿದ್ಯಾಲಯದ ತಾಣವಾಗಿದ್ದ ಗೋರಟಾ(ಬಿ)ದಲ್ಲಿ ಗತವೈಭವ ಸಾರುವ ಸದುದ್ದೇಶದಿಂದ ಸಂಗೀತ ರುದ್ರೇಶ್ವರರ ವಿಶಿಷ್ಟ ಮತ್ತು ಅಪರೂಪದ ದೇವಸ್ಥಾನ…

3 hours ago

ನ್ಯೂಸ್ ಕರ್ನಾಟಕ ವರದಿಗೆ ಎಚ್ಚೆತ್ತ ತಾಲ್ಲೂಕು ಆಡಳಿತ : ಗ್ರಾಮಕ್ಕೆ ತಹಶೀಲ್ದಾರ್ ಭೇಟಿ

ಸಮಸ್ಯೆ ಬಗೆಹರಿಸಿ ಇಲ್ಲದಿದ್ದರೆ ಒಂದು ತೊಟ್ಟು ವಿಷ ಕೊಡಿ ಎಂದು ಗ್ರಾಮವನ್ನೇ ತೊರೆಯಲು ಮುಂದಾಗಿದ್ದ ಗ್ರಾಮಸ್ಥರಿಗೆ ನಂಜನಗೂಡು ತಹಶೀಲ್ದಾರ್ ಶಿವಕುಮಾರ್…

3 hours ago

ಭಗವಂತ ಖೂಬಾ ಹ್ಯಾಟ್ರಿಕ್‌ ಜಯ ನಿಶ್ಚಿತ : ಶೈಲೇಂದ್ರ

ಮೂರನೇ ಸಲ ಕೇಂದ್ರ ಸಚಿವ ಭಗವಂತ ಖೂಬಾ ಅವರು ಬೀದರ್‌ ಲೋಕಸಭಾ ಕ್ಷೇತ್ರದಿಂದ ಜಯ ಗಳಿಸುವುದು ನಿಶ್ಚಿತ' ಎಂದು ಬಿಜೆಪಿ…

3 hours ago

ಭಾರತೀಯರಿಗೆ ಗುಡ್‌ ನ್ಯೂಸ್‌ : ವೀಸಾ ಇಲ್ಲದೆ ರಷ್ಯಾಕ್ಕೆ ಹೋಗುವ ಅವಕಾಶ

ವಿದೇಶಕ್ಕೆ ಸುತ್ತಬೇಕು ಎನ್ನುವ ಪ್ರವಾಸಿಗರಿಗೆ ಒಂದು ಶುಭ ಸುದ್ದಿ. ಭಾರತೀಯರು ಇನ್ನು ಶೀಘ್ರದಲ್ಲೇ ವೀಸಾ ಇಲ್ಲದೆ ರಷ್ಯಾ ಪ್ರವಾಸ ಮಾಡಬಹುದು.…

4 hours ago