Categories: ಉಡುಪಿ

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ರಥೋತ್ಸವ ಸಂಭ್ರಮ

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಶರನ್ನವರಾತ್ರಿ ಅಂಗವಾಗಿ ಅಕ್ಟೋಬರ್ 4ರ ಮಂಗಳವಾರ ಮಧ್ಯಾಹ್ನ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು. ನವರಾತ್ರಿಯಿಂದ ಮಹಾನವಮಿಯವರೆಗೆ ವಿವಿಧ ಪೂಜಾ ಕೈಂಕರ್ಯಗಳು ನಡೆದವು. ಅಲಂಕೃತ ರಥದ ಮೇಲೆ ದೇವಿ ಮೂರ್ತಿಯನ್ನು ಇರಿಸಲಾಗಿದ್ದು, ದೇವಸ್ಥಾನದಿಂದ ಮೆರವಣಿಗೆ ಮೂಲಕ ಹೊರತರಲಾಯಿತು.

ದೇವಸ್ಥಾನದ ಆವರಣದಲ್ಲಿ ಮೂರು ಸುತ್ತು ಪ್ರದಕ್ಷಿಣೆ ಹಾಕಿ ಸಾವಿರಾರು ಜನರು ರಥವನ್ನು ಎಳೆದರು.

ಬೈಂದೂರು ಶಾಸಕ ಬಿ.ಎಂ.ಸುಕುಮಾರ್ ಶೆಟ್ಟಿ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಜಿಲ್ಲಾಧಿಕಾರಿ ಕೂರ್ಮಾರಾವ್, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಚಂದ್ರಶೇಖರ ಶೆಟ್ಟಿ ಕೆರಾಡಿ, ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಮಾಜಿ ಟ್ರಸ್ಟಿಗಳು, ಧಾರ್ಮಿಕ ಮುಖಂಡರು ಉಪಸ್ಥಿತರಿದ್ದರು.

ಸಾವಿರಾರು ಭಕ್ತರು ದೇವಸ್ಥಾನದಲ್ಲಿ ನೆರೆದಿದ್ದರು. ಸ್ಥಳದಲ್ಲಿ ಸಾಕಷ್ಟು ಭದ್ರತೆ ಇತ್ತು. ಬುಧವಾರದ ಧಾರ್ಮಿಕ ವಿಧಿ ವಿಧಾನಗಳು ಮುಂಜಾನೆ 3.00 ಗಂಟೆಗೆ ಪ್ರಾರಂಭವಾದವು. ಸಂಜೆ ವಿಜಯೋತ್ಸವ ಆಚರಣೆ ನಡೆಯಲಿದೆ.

Ashika S

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

48 mins ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

1 hour ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

1 hour ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

2 hours ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

3 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

3 hours ago