ಉಡುಪಿ: ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ತೀವ್ರ ಅಸಮಾಧಾನಗೊಂಡ ಕೃಷ್ಣಮೂರ್ತಿ ಆಚಾರ್ಯ ಕಾಂಗ್ರೆಸ್ ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಕಾಂಗ್ರೆಸ್ ಉಡುಪಿ ಜಿಲ್ಲಾಧ್ಯಕ್ಷ ಅಶೋಕ್ ಕುಮಾರ್ ಕೊಡುವೂರು ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದರು. ನಾನು ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡುತ್ತಿದ್ದೇನೆ. ಆದ್ದರಿಂದ ದಯವಿಟ್ಟು ನನ್ನ ರಾಜೀನಾಮೆಯನ್ನು ಸ್ವೀಕರಿಸಬೇಕಾಗಿ ವಿನಂತಿಸಿಕೊಳ್ಳುತ್ತಿದ್ದೇನೆ ಎಂದು ತಿಳಿಸಿದ್ದಾರೆ.
ತೀವ್ರ ಕುತೂಹಲ ಕೆರಳಿಸಿದ್ದ ಉಡುಪಿ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಹೈಕಮಾಂಡ್ ಉದ್ಯಮಿ ಪ್ರಸಾದ್ ರಾಜ್ ಕಾಂಚನ್ ನನ್ನು ಘೋಷಿಸಿದ್ದು, ಇದರಿಂದ ಪ್ರಬಲ ಆಕಾಂಕ್ಷಿಯಾಗಿದ್ದ ಕೃಷ್ಣಮೂರ್ತಿ ಪಕ್ಷದ ವಿರುದ್ಧವೇ ಅಸಾಮಾಧಾನ ಹೊರಹಾಕಿದ್ದಾರೆ. ಅಭಿಮಾನಿಗಳ ಸಭೆ ನಡೆಸಿ, ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ.