News Karnataka Kannada
Tuesday, April 30 2024
ಉಡುಪಿ

ಉಡುಪಿ: ಅನಧಿಕೃತ ಸಭೆ, ಹೇಳಿಕೆಗಳನ್ನು ಸಹಿಸುವುದಿಲ್ಲ, ಬಿಜೆಪಿ ಮುಖಂಡರಿಗೆ ಕುಯಿಲಾಡಿ ಎಚ್ಚರಿಕೆ

Kuyiladi warns BJP leaders that unauthorised meetings, statements will not be tolerated
Photo Credit : News Kannada

ಉಡುಪಿ: ಪಕ್ಷದ ಟಿಕೆಟ್ ಯಾರಿಗೆ ನೀಡಬೇಕು ಎನ್ನುವ ತೀರ್ಮಾನವನ್ನು ಪಕ್ಷ ಹಾಗೂ ವರಿಷ್ಠರು ತೀರ್ಮಾನಿಸಲಿದ್ದಾರೆ. ಪ್ರತಿ ಕಾರ್ಯಕರ್ತನಿಗೂ ಟಿಕೆಟ್ ಕೇಳುವ ಅವಕಾಶ ಇದೆ. ಆದರೆ ಎಲ್ಲಿ, ಯಾರನ್ನ ಕೇಳಬೇಕು ಅಲ್ಲಿಯೇ ಕೇಳಬೇಕೇ ಹೊರತು ನನಗೆ ಟಿಕೆಟ್ ಆಗಿದೆ ಎಂದು ಗೊಂದಲ ನಿರ್ಮಾಣ ಮಾಡುವುದು ಸರಿಯಲ್ಲ. ಪಕ್ಷದ ಹಿತಕ್ಕೆ ತೊಡಕಾಗುವ ಅನಧಿಕೃತ ಸಭೆ, ಹೇಳಿಕೆಗಳನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಎಚ್ಚರಿಕೆ ನೀಡಿದ್ದಾರೆ.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಂಘಟನೆಗಾಗಿ ಕೆಲಸ ಮಾಡುವ ಯಾರನ್ನೆ ಆಗಲಿ ಸ್ವಾಗತಿಸುತ್ತೇವೆ. ತಳಮಟ್ಟದ ಸಂಘಟನೆ ಇರುವ ಬಿಜೆಪಿಯಲ್ಲಿ ಎಲ್ಲರಿಗೂ ಸಮಾನ ಅವಕಾಶ ಇದೆ. ಗುಜರಾತ್ ಹಾಗೂ ಉತ್ತರಕಾಂಡ್ ರಾಜ್ಯದ ಚುನಾವಣಾ ಮಾದರಿಯಲ್ಲಿ ರಾಜ್ಯದಲ್ಲಿಯೂ ಬದಲಾವಣೆಯ ನಿರೀಕ್ಷೆಗಳು ಇದೆ. 3-4 ಬಾರಿ ಶಾಸಕರಾದವರು, ಹೊಸಬರಿಗೆ ಅವಕಾಶ ನೀಡುವ ಸ್ವಯಂ ತೀರ್ಮಾನ ಕೈಗೊಳ್ಳಬೇಕು. ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪಕ್ಷದ ಸಂಘಟನೆ ಹಾಗೂ ಹಿಂದುತ್ವ ಪರವಾದ ಅಲೆ ಪ್ರಬಲವಾಗಿರುವ ಕಾರಣದಿಂದಾಗಿ ಜಾತಿ ಸಮೀಕರಣಗಿಂತ, ಪಕ್ಷದ ತತ್ವ, ಸಿದ್ದಾಂತ ಒಪ್ಪಿಕೊಳ್ಳುವ ಅಭ್ಯರ್ಥಿಗಳಿಗೆ ಅವಕಾಶ ದೊರಕುವ ಸಾಧ್ಯತೆಗಳನ್ನು ಅಲ್ಲಗಳಿಯುವಂತಿಲ್ಲ ಎಂದರು.

ಬೈಂದೂರು ಸೇರಿದಂತೆ ಜಿಲ್ಲೆಯ 5 ವಿಧಾನ ಸಭಾ ಕ್ಷೇತ್ರಗಳಲ್ಲಿ ಬಿಜೆಪಿ ಪಕ್ಷದಿಂದ ಅಭ್ಯರ್ಥಿಗಳು ಯಾರು ಎನ್ನುವುದು ಇನ್ನೂ ಅಂತಿಮವಾಗಿಲ್ಲ. ಆದರೆ ಕೆಲವು ಕ್ಷೇತ್ರಗಳಲ್ಲಿ ಟಿಕೆಟ್ ನಮಗೆ ಆಗಿದೆ ಪಕ್ಷ ತಿರುಗಲು ಹೇಳಿದೆ ಎನ್ನುವ ಮೂಲಕ ಅನಗತ್ಯ ಗೊಂದಲ ಸೃಷ್ಟಿಸಲಾಗುತ್ತಿದೆ. ಪಕ್ಷ ಇದನ್ನು ಗಂಭೀರವಾಗಿ ಪರಿಗಣಿಸಲಿದ್ದು, ಇಂತಹವರ ವಿರುದ್ಧ ನೋಟಿಸು ನೀಡಿ, ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಬೈಂದೂರು ಕ್ಷೇತ್ರದ ಶಾಸಕರಾದ ಬಿ.ಎಂ. ಸುಕುಮಾರ ಶೆಟ್ಟಿಯವರು ಸಾಕಷ್ಟು ಅಭಿವೃದ್ಧಿ ಕೆಲಸಗಳನ್ನು ಮಾಡಿದ್ದಾರೆ. ಕ್ಷೇತ್ರದ ಜನರಿಗೆ ಸ್ಪಂದಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಪಕ್ಷದ ಶಾಸಕರಾಗಿರುವುದರಿಂದಾಗಿ ಅವರೇ ನಮ್ಮ ನಾಯಕರಾಗಿದ್ದಾರೆ. 243 ಬೂತ್‌ಗಳಲ್ಲೂ ಪಕ್ಷ ಸಶಕ್ತವಾಗಿ ಕೆಲಸ ಮಾಡುತ್ತಿದೆ. ಜಿಲ್ಲೆಯ ಪ್ರತಿ ಗ್ರಾಮ ಪಂಚಾಯಿತಿ ಹಾಗೂ ಬೂತ್ ಮಟ್ಟದಲ್ಲಿ ಸಂಘಟನೆಯ ಅವಲೋಕನ ನಡೆಸಲಾಗಿದೆ. ಜಿಲ್ಲೆಯ ಎಲ್ಲ 5 ಕ್ಷೇತ್ರಗಳ ಶಾಸಕರು ಉತ್ತಮವಾಗಿದ್ದಾರೆ. ಸ್ಥಳಿಯಾಡಳಿತ, ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿ, ವಿಧಾನಸಭೆ, ಲೋಕಸಭೆ, ವಿಧಾನಪರಿಷತ್ ಚುನಾವಣೆಗಳಲ್ಲಿ ಪಕ್ಷಕ್ಕೆ ಬಹುಮತ ಇರುವುದರಿಂದ ಮುಂದಿನ ಚುನಾವಣೆಯಲ್ಲಿಯೂ ಪಕ್ಷದ ಅಭ್ಯರ್ಥಿಗಳು ನಿಚ್ಚಳವಾಗಿ ಗೆಲುವು ಸಾಧಿಸಲಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಹಗಲುಗನಸು ಕಾಣುವುದು ಬೇಡ ಎಂದರು.

ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಬೈಂದೂರು ಮಂಡಲದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಪ್ರಿಯದರ್ಶಿನಿ ದೇವಾಡಿಗ, ಪ್ರಕಾಶ್ ಪೂಜಾರಿ ಜಡ್ಡು, ಕೋಶಾಧಿಕಾರಿ ಅಶೋಕ ಕುಮಾರ ಶೆಟ್ಟಿ ಸಂಸಾಡಿ, ಜಿಲ್ಲಾ ಅಲ್ಪಸಂಖ್ಯಾಕ ಘಟಕದ ಅಧ್ಯಕ್ಷ ದಾವೂದ್ ಇದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು