Categories: ಉಡುಪಿ

ಉಡುಪಿ: ಪರಿಸರ ಸಮತೋಲನ ಕಾಪಾಡಿ- ನ್ಯಾ. ಶಾಂತವೀರ ಶಿವಪ್ಪ

ಉಡುಪಿ: ದೈನಂದಿನ ಜೀವನದಲ್ಲಿ ನಮ್ಮ ಸುತಮುತ್ತಲಿನ ಪರಿಸರದಲ್ಲಿ ಪರಿಸರ ಸ್ನೇಹಿ ಚಟುವಟಿಕೆಗಳನ್ನು ಕೈಗೊಳ್ಳುವ ಮೂಲಕ ಪರಿಸರ ಸಮತೋಲನ ಕಾಪಾಡುವಂತೆ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಆಧ್ಯಕ್ಷ ಶಾಂತವೀರ ಶಿವಪ್ಪ ಹೇಳಿದರು.

ಅವರು ಇಂದು ರಜತಾದ್ರಿಯ ಅಟಲ್ ಬಿಹಾರಿ ವಾಜಪೇಯಿ ಸಭಾಂಗಣದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಉಡುಪಿ, ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಉಡುಪಿ ಇವರ ಸಹಯೋಗದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪರಿಸರ ಜಾಗೃತಿಯ ಕಾರಣ ರಾಜ್ಯದಲ್ಲಿ ಪ್ರತೀ ವರ್ಷ ಶೇ. 1.5 ರಷ್ಟು ಅರಣ್ಯದ ಬೆಳವಣಿಗೆ ಆಗುತ್ತಿದ್ದು , ಹಸಿರು ವಲಯ ಹೆಚ್ಚಳವಾಗುತ್ತಿದೆ. ಪರಿಸರ ಸಂರಕ್ಷಣೆಗಾಗಿ ಗಿಡಗಳನ್ನು ನೆಡುವಾಗ ಒಂದೇ ರೀತಿಯ ಗಿಡಗಳನ್ನು ನೆಡದೇ ಆ ಪರಿಸರಕ್ಕೆ ಸೂಕ್ತವಾದ ಹಾಗೂ ಹಣ್ಣಿನ ಗಿಡಗಳನ್ನು ನೆಟ್ಟು ಪೋಷಿಸುವ ಮೂಲಕ ಪರಿಸರ ಸಮತೋಲನ ಕಾಪಾಡಬೇಕು. ಅರಣ್ಯ ಪ್ರದಶದಲ್ಲಿ ಹಣ್ಣಿನ ಗಿಡಗಳನ್ನು ನೆಡುವುದರಿಂದ ಮಾನವ ಮತ್ತು ವನ್ಯ ಜೀವಿ ಸಂಘರ್ಷ ತಡೆಯಲು ಸಾಧ್ಯ. ಪ್ಲಾಸ್ಟಿಕ್ ಬಳಕೆಯನ್ನು ಕಡಿಮೆ ಮಾಡುವ ಮೂಲಕ ಪ್ಲಾಸ್ಟಿಕ್ ಮಾಲಿನ್ಯ ನಿಯಂತ್ರಣ ಮಾಡಬೇಕು ಎಂದರು.

ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಮಾತನಾಡಿ, ಪರಿಸರ ನಾಶದಿಂದ ಮಾನವ ಹಾಗೂ ಪ್ರಾಣಿ ಸಂಕುಲದ ನಾಶವಾಗಲಿದ್ದು, ಅಂತರ್ಜಲ ಸಂರಕ್ಷಣೆ ಮತ್ತು ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಅತ್ಯಂತ ಪ್ರಮುಖವಾದುದು ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಪ್ರಕೃತಿಯು ಮಾನವನ ಸಹಜ ಅವಶ್ಯಕತೆಗಳನ್ನು ಪೂರೈಸಲಿದೆ ಆದರೆ ದುರಾಸೆಗಳನ್ನಲ್ಲ. ಪರಿಸರ ಸಂರಕ್ಷಣೆಯ ಕಾರ್ಯಕ್ರಮಗಳಲ್ಲಿ ವ್ಯವಸ್ಥಿತ ರೀತಿಯ ಯೋಜನೆಗಳನ್ನು ರೂಪಿಸಿ, ಅದರಂತೆ ಅನುಷ್ಠಾನಗೊಳಿಸಬೇಕು. ಉಡುಪಿ ಜಿಲ್ಲೆ ನೈಸರ್ಗಿಕ ಸಮೃದ್ದಿಯಿಂದ ಕೂಡಿದ ಜಿಲ್ಲೆಯಾಗಿದ್ದು , ಜಿಲ್ಲೆಯಲ್ಲಿನ ಪರಿಸರ ಸಂರಕ್ಷಣೆಯ ಬಗ್ಗೆ ಪ್ರತಿಯೊಬ್ಬರಲ್ಲೂ ಸ್ವಯಂ ಜಾಗೃತಿ ಮೂಡಬೇಕು ಎಂದರು.

ಕಾರ್ಯಕ್ರಮದಲ್ಲಿ ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ , ಜಿಲ್ಲಾ ಪ್ರಾದೇಶಿಕ ಪರಿಸರ ಅಧಿಕಾರಿ ಡಾ.ಕೆ.ಎಂ. ರಾಜು ಮಾತನಾಡಿ, ಕೇಂದ್ರ ಮತ್ತು ರಾಜ್ಯದಲ್ಲಿ ವಿಷನ್ ಲೈಪ್ ಕಾರ್ಯಕ್ರಮ ನಡೆಯುತ್ತಿದ್ದು, ಅದರಂತೆ ನಮ್ಮ ಜೀವನ ಶೈಲಿಯಲ್ಲಿ ನೀರು, ವಿದ್ಯುತ್ ನ ಮಿತಬಳಕೆ, ಸಾವಯವ ಆಹಾರ ಉತ್ಪಾದನೆ ಮತ್ತು ಬಳಕೆಯ ಮೂಲಕ ಪರಿಸರ ಸಂರಕ್ಷಣೆ ಸಾಧ್ಯವಾಗಲಿದ್ದು, ದೈನಂದಿನ ಜೀವನದಲ್ಲಿ ಪ್ಲಾಸ್ಟಿಕ್ ನ ಕಡಿಮೆ ಬಳಕೆ , ಮರುಬಳಕೆ, ನಿಷೇಧದ ಮೂಲಕ ಅದರ ದುಷ್ಪರಿಣಾಮಗಳನ್ನು ತಡೆಯಲು ಸಾಧ್ಯವಾಗಲಿದೆ ಎಂದರು.

ಪರಿಸರ ದಿನಾಚರಣೆ ಅಂಗವಾಗಿ ನಡೆದ ವಿವಿಧ ಸ್ಪರ್ದೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ಜಿಲ್ಲೆಯಲ್ಲಿ ಪರಿಸರ ಸಂರಕ್ಷಣೆಯ ಕಾರ್ಯದಲ್ಲಿ ಗಮನಾರ್ಹ ಚಟುವಟಿಕೆಗಳನ್ನು ಕೈಗೊಂಡಿರುವ ಕೋಟದ ಪಂಚವರ್ಣ ಯುವಕ ಮಂಡಲವನ್ನು ಅಭಿನಂದಿಸಲಾಯಿತು. ಪರಿಸರ ಸಂರಕ್ಷಣೆ ಕುರಿತಂತೆ ಪ್ರತಿಜ್ಞಾ ವಿಧಿ ಭೋದಿಸಲಾಯಿತು. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪ ನಿರ್ದೇಶಕ ಗಣಪತಿ, ಜಿಲ್ಲಾ ಸ್ಕೌಟ್ ಮತ್ತು ಗೈಡ್ಸ್ ನ ಆಯುಕ್ತ ಡಾ.ವಿಜಯೇಂದ್ರ ವಸಂತ ರಾವ್ ಉಪಸ್ಥಿತರಿದ್ದರು.

ಪ್ಲಾಸ್ಟಿಕ್ ಮಾಲಿನ್ಯ ಮತ್ತು ಪರಿಹಾರಗಳ ಬಗ್ಗೆ ಜೋಸೆಫ್ ಎಂ ರೆಬೆಲ್ಲೂ ವಿಶೇಷ ಉಪನ್ಯಾಸ ನೀಡಿದರು. ಸಹಾಯಕ ಪರಿಸರ ಅಧಿಕಾರಿ ಅಮೃತಾ ವಂದಿಸಿದರು.

ಪರಿಸರ ದಿನಾಚರಣೆಯ ಅಂಗವಾಗಿ ಮಣಿಪಾಲದ ಎಂ.ಜೆ.ಸಿ.ಕಾಲೇಜು ಮೈದಾನದಿಂದ ರಜತಾದ್ರಿಯ ವಾಜಪೇಯಿ ಸಭಾಂಗಣದವರೆಗೆ ವಿವಿಧ ಶಾಲಾ ವಿದ್ಯಾರ್ಥಿಗಳಿಂದ ಪರಿಸರ ಜಾಥಾ ನಡೆಯಿತು.

Gayathri SG

Recent Posts

ರಾಜೀನಾಮೆ ನೀಡಿದ ಪೇಟಿಎಂ ಸಿಒಒ ಭವೇಶ್ ಗುಪ್ತಾ

ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…

14 mins ago

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…

43 mins ago

ಬೆಂಗಾವಲು ಪಡೆಯ ವಾಹನದ ಮೇಲೆ ಭಯೋತ್ಪಾದಕರ ದಾಳಿ: ಐವರು ಅಧಿಕಾರಿಗಳಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…

1 hour ago

ಬಿ.ವೈ ರಾಘವೇಂದ್ರ ಪರ ಮತಯಾಚನೆ ನಡೆಸಿದ ವೇದವ್ಯಾಸ್ ಕಾಮತ್

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…

1 hour ago

ಜಾತಿಗಿಂತ‌ ದೇಶದ ಹಿತ‌ ಮುಖ್ಯ: ವಿಜಯ್ ಜೋಶಿ ಮನವಿ

ಕಳೆದ 25 ವರ್ಷಗಳಿಂದ ವಿಜಯಪುರ ಜಿಲ್ಲೆಯ ಪ್ರಬುದ್ಧ ಮತದಾರರು ಯಾವುದೇ ಜಾತಿ, ಮತ, ಪಂಥ ನೋಡದೇ ಜಾತಿಗಿಂತ ದೇಶದ ಹಿತವೇ…

2 hours ago

ಪ್ರತಿ ಬೂತ್ ನಲ್ಲಿ ಬಿಜೆಪಿ ಪರ ಅಲೆ, ಕಾರ್ಯಕರ್ತರಲ್ಲಿ ಅತ್ಯುತ್ಸಾಹ : ಪ್ರಕಾಶ ಅಕ್ಕಲಕೋಟ.

ವಿಜಯಪುರ ಲೋಕಸಭಾ ಕ್ಷೇತ್ರದ ಪ್ರತಿಯೊಂದು ಬೂತ್ ಗಳಲ್ಲಿ ಬಿಜೆಪಿ‌ ಪರ ಉತ್ತಮ ವಾತಾವರಣ ಸೃಷ್ಟಿಯಾಗಿದ್ದು, ಬಿಜೆಪಿ ಪರ‌ ಅಲೆ‌ ಇದೆ…

2 hours ago