News Karnataka Kannada
Monday, April 29 2024
ಉಡುಪಿ

ಉಡುಪಿ: ಹಣಕ್ಕಾಗಿ ಸ್ನೇಹಿತನನ್ನೇ ಚೂರಿ ಇರಿದು‌ ಕೊಲೆಗೈದ  ಆರೋಪಿ‌ಗೆ ಜೀವಾವಧಿ ಶಿಕ್ಷೆ

Udupi
Photo Credit : News Kannada

ಉಡುಪಿ: ಕಳೆದ ಐದು ವರ್ಷಗಳ ಹಿಂದೆ ಚೇರ್ಕಾಡಿ ಗ್ರಾಮದ ಪೇತ್ರಿಯ ಯುವಕ ಮಂಡಲದ ಬಳಿ ಹಣಕ್ಕಾಗಿ ಚೂರಿ ಇರಿದು ಸ್ನೇಹಿತನನ್ನೇ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ ಆರೋಪಿ ಪ್ರಶಾಂತ್ ಎಂಬಾತನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಲಯವು ಜೀವಾವಧಿ ಶಿಕ್ಷೆ ಹಾಗೂ 60ಸಾವಿರ‌ ರೂ. ದಂಡ ವಿಧಿಸಿ ಇಂದು ತೀರ್ಪು ನೀಡಿದೆ.

ಚೇರ್ಕಾಡಿ ಗ್ರಾಮದ ಪೇತ್ರಿ ನಿವಾಸಿ 38 ವರ್ಷದ ಪ್ರಕಾಶ್ ನಾಯ್ಕ್ ಕೊಲೆಯಾದ ವ್ಯಕ್ತಿ. ಆತನ ಸ್ನೇಹಿತನಾಗಿದ್ದ ಚೇರ್ಕಾಡಿ ಗ್ರಾಮದ 31 ವರ್ಷದ ಪ್ರಶಾಂತ್ ಎಂಬಾತನೇ ಕೊಲೆ ಆರೋಪಿ.

ಆರೋಪಿ ಪ್ರಶಾಂತ್ ನು 2017ರ ಮಾರ್ಚ್ 1ರಂದು ಚೇರ್ಕಾಡಿ ಗ್ರಾಮದ ಪೇತ್ರಿಯ ಯುವಕ ಮಂಡಲದ ಬಳಿ ಹಣ ನೀಡಲಿಲ್ಲ ಎಂಬ ವಿಚಾರಕ್ಕೆ ತನ್ನ ಸ್ನೇಹಿತನಾಗಿದ್ದ ಪ್ರಕಾಶ್ ನನ್ನು ಚೂರಿಯಿಂದ ಇರಿದು ಕೊಲೆ ಮಾಡಿದ್ದನು. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಂದಿನ ಡಿವೈಎಸ್ಪಿ ಎಸ್ ಎ ಕುಮಾರಸ್ವಾಮಿ ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದರು.

34 ಸಾಕ್ಷಿಗಳ ಪೈಕಿ 12 ಸಾಕ್ಷಿಗಳನ್ನು ವಿಚಾರಣೆ ನಡೆಸಲಾಗಿತ್ತು. ಅದರಲ್ಲಿ ಪ್ರತ್ಯಕ್ಷದರ್ಶಿಗಳ ಸಾಕ್ಷಿ ಅಭಿಯೋಜನೆಗೆ ಪೂರಕವಾಗಿತ್ತು. ಆರೋಪಿ ಮೇಲಿನ ಆರೋಪ ಸಾಬೀತಾಗಿರುವುದಾಗಿ ಅಭಿಪ್ರಾಯಪಟ್ಟ ನ್ಯಾಯಾಧೀಶ ಶಾಂತವೀರಪ್ಪ, ಜೀವಾವಧಿ ಶಿಕ್ಷೆ ಹಾಗೂ 60 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದರು. ಪ್ರಾಸಿಕ್ಯೂಶನ್‌ ಪರವಾಗಿ ಹಿರಿಯ ಸರಕಾರಿ ಅಭಿಯೋಜಕಿ ಶಾಂತಿ‌ ಬಾಯಿ ವಾದ ಮಂಡಿಸಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು