News Karnataka Kannada
Sunday, April 28 2024
ಉಡುಪಿ

ಉಡುಪಿ: ರಸ್ತೆ ಬದಿಯ ಕಸದ ರಾಶಿಗೆ ಮೃತದೇಹ ಎಸೆದು ಪರಾರಿ, ಸಿಸಿಟಿವಿಯಲ್ಲಿ ಸೆರೆ

Man's body dumped in roadside garbage dump, flees, caught on CCTV
Photo Credit : News Kannada

ಉಡುಪಿ: ಗೂಡ್ಸ್ ವಾಹನವೊಂದರಲ್ಲಿ ವ್ಯಕ್ತಿಯೊಬ್ಬರ ಮೃತದೇಹವನ್ನು ತಂದು ರಸ್ತೆ ಬದಿಯ‌ ಕಸದ ಕೊಂಪೆಗೆ ಎಸೆದು ಹೋದ ಅಮಾನವೀಯ ಘಟನೆ ಕೆಮ್ಮಣ್ಣು ಸಂತೆ ಮಾರುಕಟ್ಟೆಯ ಬಳಿ ಗುರುವಾರ ಮಧ್ಯಾಹ್ನ ನಡೆದಿದೆ.

ಮೃತ ವ್ಯಕ್ತಿಯನ್ನು ಹನುಮಂತ ಎಂದು ಗುರುತಿಸಲಾಗಿದೆ. ಈತ ವಾರದ ಸಂತೆ ಹಿನ್ನೆಲೆಯಲ್ಲಿ ಕೆಮ್ಮಣ್ಣು ಮಾರುಕಟ್ಟೆಗೆ ವ್ಯಾಪಾರ ನಡೆಸಲು ಬಂದಿದ್ದ ಎನ್ನಲಾಗಿದೆ. ಆದರೆ ವಿಪರೀತ ಮದ್ಯಪಾನ ಮಾಡಿ ಅಲ್ಲೆ ಮೃತಪಟ್ಟಿದ್ದನು. ಇದನ್ನು ಕಂಡು ಇತರ ಇಬ್ಬರು ವ್ಯಾಪಾರಿಗಳು ಹನುಮಂತನ ಮೃತದೇಹವನ್ನು ಗೂಡ್ಸ್ ವಾಹನದಲ್ಲಿ ಸಾಗಿಸಿಕೊಂಡು ಹೋಗಿ ಕೆಮ್ಮಣ್ಣು ಸಂತೆಮಾರುಕಟ್ಟೆ ಬಳಿಯ ರಸ್ತೆಬದಿ ಕಸದ ಕೊಂಪೆಯಲ್ಲಿ ಎಸೆದು ಹೋಗಿದ್ದಾರೆ.

ಮಾಹಿತಿ ತಿಳಿದ ಸಮಾಜ ಸೇವಕ ಈಶ್ವರ್ ಮಲ್ಪೆ ಅವರು ಮೃತದೇಹವನ್ನು ಉಡುಪಿ ಅಜ್ಜರ ಕಾಡು ಆಸ್ಪತ್ರೆಗೆ ಸಾಗಿಸಿದ್ದಾರೆ. ಈ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು