News Karnataka Kannada
Monday, April 29 2024
ಉಡುಪಿ

ಉಡುಪಿ: ವಸ್ತು ಮರು ಪಡೆಯುವ ಸೌಲಭ್ಯ ಕೇಂದ್ರ ಸ್ಥಾಪನೆ

Material Retrieval Facility Centre to be set up in Udupi
Photo Credit : News Kannada

ಉಡುಪಿ: ಕೇಂದ್ರ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ವತಿಯಿಂದ ಸ್ವಚ್ಛ ಭಾರತ್ ಮಿಷನ್ ನಗರ 2.0 ಯೋಜನೆಯಡಿ ನವೀಕರಿಸಿ ಮರುಬಳಸಬಹುದಾದಂತಹ ವಸ್ತುಗಳ ಉತ್ಪಾದನೆಯನ್ನು ಕಡಿಮೆಗೊಳಿಸಲು ಮತ್ತು ಸುಸ್ಥಿರ ಜೀವನ ಪದ್ಧತಿಗಳನ್ನು ಅಳವಡಿಸಿಕೊಳ್ಳುವ ಮೂಲಕ ಪರಿಸರವನ್ನು ರಕ್ಷಿಸುವ ಉದ್ದೇಶದಿಂದ ನನ್ನ ಜೀವನ ನನ್ನ ಸ್ವಚ್ಛ ನಗರ ಯೋಜನೆಯ ಕಾರ್ಯಕ್ರಮದಡಿ ಪುನರ್ ಬಳಕೆ ಕೇಂದ್ರ ಕಾರ್ಯನಿರ್ವಹಿಸುತ್ತಿವೆ.

ಕಡಿಮೆಗೊಳಿಸುವುದು, ಮರುಬಳಕೆ ಮತ್ತು ಪುನರ್ ಬಳಕೆ ಕೇಂದ್ರಗಳನ್ನು, ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಈಗಾಗಲೇ ಕಾರ್ಯನಿರ್ವಹಿಸುತ್ತಿರುವ ಒಣತ್ಯಾಜ್ಯ ಸಂಗ್ರಹಣಾ ಕೇಂದ್ರ ಅಥವಾ ಮೆಟಿರಿಯಲ್ ರೆಕವರಿ ಫೆಸಿಲಿಟಿ (ಎಂ.ಆರ್.ಎಫ್) ಹಾಗೂ ನಗರದ ಪ್ರಮುಖ ಸ್ಥಳಗಳಲ್ಲಿ ವಸ್ತು ಮರು ಪಡೆಯುವ ಸೌಲಭ್ಯ ಕೇಂದ್ರಗಳನ್ನು ರೆಡ್ಯೂಸ್, ರೀಯೂಸ್ ಮತ್ತು ರೀಸೈಕಲ್ ಕೇಂದ್ರಗಳಾಗಿ ಬಳಸಿ ನನ್ನ ಜೀವನ – ನನ್ನ ಸ್ವಚ್ಛ ನಗರ ಯೋಜನೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಉಡುಪಿ ನಗರಸಭೆಯ ವತಿಯಿಂದ ಮೇ 20 ರಿಂದ ಜೂನ್ 5 ರ ವರೆಗೆ ಮಲ್ಪೆ ಬೀಚ್ ಹತ್ತಿರ, ಮಣ್ಣಪಳ್ಳ ಪಾರ್ಕಿನ ಹತ್ತಿರ, ಬೀಡಿನಗುಡ್ಡೆಯ ಒಣತ್ಯಾಜ್ಯ ಸಂಗ್ರಹಣಾ ಕೇಂದ್ರದ ಹತ್ತಿರ, ಬನ್ನಂಜೆ ಕರಾವಳಿ ಬೈಪಾಸ್ ಒಣತ್ಯಾಜ್ಯ ಸಂಗ್ರಹಣಾ ಕೇಂದ್ರದ ಹತ್ತಿರ, ಆದಿ ಉಡುಪಿ ಮಾರ್ಕೆಟ್ ಬಳಿ, ಗಾಂಧಿ ಭವನ ಬಳಿ, ರಿಲಾಯನ್ಸ್ ಫ್ರೆಶ್ ಹತ್ತಿರ ಹಾಗೂ ಡಿ-ಮಾರ್ಟ್ ಬಳಿ ವಸ್ತು ಮರು ಪಡೆಯುವ ಸೌಲಭ್ಯ ಕೇಂದ್ರವನ್ನು ಸ್ಥಾಪಿಸಲಾಗುವುದು.

ಸಾರ್ವಜನಿಕರು ಮೇಲ್ಕಂಡ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್ ಸೇರಿದಂತೆ ಆಟಿಕೆ ವಸ್ತುಗಳನ್ನು, ಬಳಸಿದ ಬಟ್ಟೆ, ದಿನ ಪತ್ರಿಕೆಗಳು, ಹಳೆಯ ಪುಸ್ತಕಗಳು ಹಾಗೂ ಎಲೆಕ್ಟಾçನಿಕ್ ವಸ್ತುಗಳಂತಹ 6 ಬಗೆಯ ನವೀಕರಿಸಿ ಮರುಬಳಸಬಹುದಾದಂತಹ ವಸ್ತುಗಳನ್ನು ಸದರಿ ಕೇಂದ್ರಗಳಿಗೆ ನೀಡಿ, ಕಾರ್ಯಕ್ರಮದ ಸದುಪಯೋಗ ಪಡೆದುಕೊಂಡು, ಪರಿಸರ ರಕ್ಷಿಸುವ ಉದ್ದೇಶವನ್ನು ಮನಗಂಡು ನಗರಸಭೆಯೊಂದಿಗೆ ಸಹಕರಿಸುವಂತೆ ಹಾಗೂ ಭಾಗವಹಿಸಿದ ಸಾರ್ವಜನಿಕರಿಗೆ ಡಿಜಿಟಲ್ ಪ್ರಮಾಣ ಪತ್ರ ನೀಡಲಾಗುವುದು ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು