ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಶತಾಯುಷಿ ಹೀರಾಬೆನ್ ವಿಧಿವಶರಾಗಿರುವ ವಿಷಯ ತಿಳಿದು ತುಂಬಾ ಖೇದವಾಗಿದೆ ಎಂದು ಉಡುಪಿ ಪೇಜಾವರ ಮಠಾಧೀಶರಾದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ ತೀವ್ರ ಸಂತಾಪ ಸೂಚಿಸಿದರು.
ಮೃತರ ಮಕ್ಕಳಿಗೆ ಹಾಗೂ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ಭಗವಂತ ನೀಡಲಿ. ಹೀರಾಬೆನ್ ಅವರ ಆತ್ಮಕ್ಕೆ ದೇವರು ಸದ್ಗತಿಯನ್ನು ಕರುಣಿಸಲಿ ಎಂದು ಶ್ರೀಕೃಷ್ಣನಲ್ಲಿ ಪ್ರಾರ್ಥಿಸುತ್ತೇನೆ ಎಂದರು.