Categories: ಉಡುಪಿ

ಉಡುಪಿ: 800ಕ್ಕೂ ಅಧಿಕ ಶಾಲಾ ಕಾಲೇಜಿನ ವಿದ್ಯಾರ್ಥಿನಿಯರಿಂದ ಏಕಕಾಲದಲ್ಲಿ ಸಾಹಸ ಪ್ರದರ್ಶನ

ಉಡುಪಿ: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಉಡುಪಿ ನಗರ ವತಿಯಿಂದ ಉಡುಪಿ ಅಜ್ಜರಕಾಡಿನ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಸಶಕ್ತ ಸಮಾಜಕ್ಕಾಗಿ ಸಶಕ್ತ ನಾರಿ ಎಂಬ ಅಡಿ ಬರಹದೊಂದಿಗೆ ಶಾಲಾ ಕಾಲೇಜು ವಿದ್ಯಾರ್ಥಿನಿಯರಿಂದ ಮಿಷನ್ ಸಾಹಸ ಪ್ರದರ್ಶನ ನಡೆಯಿತು.

ಕಳೆದ ಒಂದು ವಾರದಿಂದ ನಗರದ ಪ್ರಮುಖ ಕಾಲೇಜಿನಲ್ಲಿ ಎಬಿವಿಪಿ ಮತ್ತು ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಜಂಟಿ ಸಹಯೋಗದಲ್ಲಿ ಉಚಿತವಾಗಿ ಕರಾಟೆ ತರಬೇತಿಯನ್ನು ನೀಡಲಾಗಿತ್ತು. ಇಂದು 800ಕ್ಕೂ ಅಧಿಕ ವಿದ್ಯಾರ್ಥಿನಿಯರು ಏಕಕಾಲದಲ್ಲಿ ಸಾಹಸ ಪ್ರದರ್ಶಿಸಿದರು.

ಕಾರ್ಯಕ್ರಮವನ್ನು ಉಡುಪಿ ಮಹಿಳಾ ಪೋಲಿಸ್ ಠಾಣಾ ಉಪನಿರೀಕ್ಷಕಿ ವೈಲೆಟ್ ಫೆಮಿನಾ ಉದ್ಘಾಟಿಸಿ, ವಿದ್ಯಾರ್ಥಿನಿಯರಿಗೆ ಸಮಸ್ಯೆ ಉಂಟಾದಾಗ ಸಮಯಪ್ರಜ್ಞೆಯಿಂದ ಪರಿಸ್ಥಿತಿಯನ್ನು ಎದುರಿಸಬೇಕು ಎಂದು ಸಲಹೆ ನೀಡಿದರು.

ಹೊಸಬೆಳಕು ಸೇವಾ ಟ್ರಸ್ಟ್ ಸಂಸ್ಥಾಪ ತನುಲಾ ತರುಣ್ ಮಾತನಾಡಿದರು. ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಎಬಿವಿಪಿ ಕರ್ನಾಟಕ ಪ್ರಾಂತ ಕಾರ್ಯ ಸಮಿತಿ ಸದಸ್ಯ ಡಾ. ರವಿ ಮಂಡ್ಯ, ಉಡುಪಿ ಜಿಲ್ಲಾ ಕರಾಟೆ ಶಿಕ್ಷಕರ ಸಂಘದ ಜಿಲ್ಲಾ ಕೋಶಾಧಿಕಾರಿ ವಾಮನ್ ಪಾಲನ್, ಮಾಜಿ ಅಧ್ಯಕ್ಷ ರವಿ ಸಾಲಿಯಾನ್, ಜಿಲ್ಲಾ ಕಾರ್ಯದರ್ಶಿ ರೋಹಿತಾಕ್ಷ ಉದ್ಯಾವರ ಉಪಸ್ಥಿತರಿದ್ದರು.

Ashika S

Recent Posts

ಕೇಂದ್ರ ಸೂಚನೆ ನೀಡಿದ ಕೂಡಲೇ ರಾಜ್ಯದಲ್ಲಿ ಸಿಎಎ ಅನುಷ್ಠಾನ: ಮೋಹನ್‌ ಯಾದವ್‌

ದೇಶಾದ್ಯಂತ ಚುನಾವಣೆಗ ಅಂತ್ಯಗೊಳುವುದಕ್ಕೂ ಮುನ್ನ ವಿವಿಧ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕ್ರಿಯೆ ಆರಂಭಿಸಬೇಕೆಂದು ಕೇಂದ್ರ ನಿರ್ಧರಿಸಿದೆ.

7 mins ago

ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಮಾನಸಿಕ ಅಸ್ವಸ್ಥ

ವ್ಯಕ್ತಿಯೊಬ್ಬ ತನ್ನ ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ  ಸೀತಾಪುರದಲ್ಲಿ ನಡೆದಿದೆ.

26 mins ago

ಕಲಬುರಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ಮದುವೆಗೆ ನಿರಾಕರಿಸಿದ್ದಕ್ಕೆ  ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.

56 mins ago

ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 6 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ  ನೀಡಿದೆ.

1 hour ago

ಜೈಲಿನಿಂದ ಹೊರಬಂದ ಕೇಜ್ರಿವಾಲ್​ಗೆ ಆರತಿ ಬೆಳಗಿ ಸ್ವಾಗತಿಸಿದ ಕುಟುಂಬಸ್ಥರು

ಅಕ್ರಮ ಮದ್ಯ ನೀತಿ ಪ್ರಕರಣದ ಆರೋಪದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​​ ಅವರಿಗೆ ನಿನ್ನೆ ಸುಪ್ರೀಂ ಕೋರ್ಟ್…

2 hours ago

ಲೈಂಗಿಕ ದೌರ್ಜನ್ಯ ಆರೋಪ: ವಕೀಲ ದೇವರಾಜೇಗೌಡರನ್ನು ವಶಕ್ಕೆ ಪಡೆದ ಪೊಲೀಸರು

ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆ ವಕೀಲ ದೇವರಾಜೇಗೌಡರನ್ನು ಹಿರಿಯೂರು ಪೊಲೀಸರು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗುಯಿಲಾಳ್ ಟೋಲ್ ಬಳಿ …

2 hours ago